ಕಲಬುರಗಿ | ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ: ಪ್ರತಿ ಕ್ವಿಂಟಾಲ್‌ಗೆ ₹7,721 ದರ ನಿಗದಿ

Date:

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2025-26ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಬೆಳೆದ ಎಫ್‌.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಾಲ್‌ಗೆ ₹7,721 ದರದಲ್ಲಿ ಖರೀದಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ.

- Advertisement -

ಶುಕ್ರವಾರ ಜಿಲ್ಲಾಧಿಕಾರಿ ಇಕ್ರಾಮ್ ಶರೀಫ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಯಿತು. ಪ್ರತಿ ಎಕರೆಗೆ 4 ಕ್ವಿಂಟಾಲ್ ಮಿತಿಯಂತೆ ಹಾಗೂ ಒಬ್ಬ ರೈತನಿಂದ ಗರಿಷ್ಠ 20 ಕ್ವಿಂಟಾಲ್ ವರೆಗೆ ಖರೀದಿ ಮಾಡಲಾಗುತ್ತದೆ ಎಂದು ತಿಳಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಜಿಲ್ಲೆಯ ಪ್ರತಿಯೊಂದು ತಾಲೂಕಿಗೆ ಒಂದರಂತೆ ಒಟ್ಟು 11 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಮೂಲಕ ಖರೀದಿ ಪ್ರಕ್ರಿಯೆ ನಡೆಸಲಾಗುತ್ತದೆ. ರೈತರ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯಲ್ಲಿ UIDAI ಬಯೋಮೆಟ್ರಿಕ್ ಕಡ್ಡಾಯವಾಗಿರುತ್ತದೆ.

ರೈತರ ನೋಂದಣಿ ಕಾರ್ಯ ಜೂನ್ 26, 2026ರವರೆಗೆ ನಡೆಯಲಿದ್ದು, ಖರೀದಿ ಪ್ರಕ್ರಿಯೆ ಜುಲೈ 6, 2026ರವರೆಗೆ ಮುಂದುವರಿಯಲಿದೆ. ಖರೀದಿಸಿದ ಉತ್ಪನ್ನದ ಮೊತ್ತವನ್ನು ಡಿಬಿಟಿ ಪೋರ್ಟಲ್ ಮೂಲಕ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

Advertisements
Advertisements

ಹಿಂಗಾರು ಹಂಗಾಮಿನಲ್ಲಿ ಬೆಳೆದ ಎಫ್‌.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ರೈತರು ತಮ್ಮ ಸಮೀಪದ PACS ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡು ಮಾರಾಟ ಮಾಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಚಿತ್ತಾಪುರ | ಮುಂಗಾರು ಹಂಗಾಮಿ ಆಂದೋಲನ : ರೈತರಿಗೆ ವೈಜ್ಞಾನಿಕ ಕೃಷಿ ಅರಿವು ಕಾರ್ಯಕ್ರಮ

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ನಿಯಮಿತ (KOF) ಸಂಸ್ಥೆಯ ಮೊಬೈಲ್ ಸಂಖ್ಯೆ 9591812142 ಅನ್ನು ಸಂಪರ್ಕಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...

ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ...