ನಗರದ ರಿಂಗ್ ರಸ್ತೆಯ ಸೈಯದ್ ಚಿಂಚೋಳಿ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಮೃತರನ್ನು ರಾಜುಕುಮಾರ್ ಮಾನಿಂಗಗೋಳ (45) ಹಾಗೂ ಅವರ ಪುತ್ರಿ ಸುಮಾ (14) ರಾಣೇಶಪೀರ ದರ್ಗಾ ಪ್ರದೇಶದ ನಿವಾಸಿಗಳು ಎಂದು ಗುರುತಿಸಲಾಗಿದೆ.
ತಂದೆ, ಮಗಳು ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಅವರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಟ್ಯಾಂಕರ್ ಚಕ್ರದ ಕೆಳಗೆ ಸಿಲುಕಿಕೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ಟ್ಯಾಂಕರ್ ಚಾಲಕ ಆಂಧ್ರ ಪ್ರದೇಶದ ಸುರೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ಶಿಕ್ಷಕಿಯನ್ನು ಕೊಲೆಮಾಡಿ ಮೃತದೇಹ ಅರೆಬರೆ ಸುಟ್ಟು ಹಾಕಿದ ಆರೋಪಿ ಬಂಧನ
ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆ-2ರಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ.





