ಕಲಬುರಗಿ | 4.42 ಲಕ್ಷ ರೂ. ದುರ್ಬಳಕೆ ಆರೋಪ: ಶಿಕ್ಷಕ ಅಮಾನತು

Date:

ಸರಕಾರದಿಂದ ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಬಿಡುಗಡೆಯಾಗಿದ್ದ ₹4.42 ಲಕ್ಷ ರೂ. ಹಣವನ್ನು ದುರ್ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸರಕಾರಿ ಶಿಕ್ಷಕರೊಬ್ಬರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಕಲಬುರಗಿ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಜಮಖಂಡಿ ಆದೇಶ ಹೊರಡಿಸಿದ್ದಾರೆ.

- Advertisement -

ಕಲಬುರಗಿ ತಾಲೂಕಿನ ಸಾವಳಗಿ (ಬಿ) ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾಗಿದ್ದ ನವೀನಾಥ ಶಿಂಧೆ ಅಮಾನತುಗೊಂಡ ಶಿಕ್ಷಕರಾಗಿದ್ದಾರೆ. ಅವರು ಸಹ ಶಿಕ್ಷಕರಾಗಿದ್ದು, 2024ರ ಏಪ್ರಿಲ್‌ನಿಂದ 2025ರ ಸೆಪ್ಟೆಂಬರ್‌ವರೆಗೆ ಪ್ರಭಾರ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಅವಧಿಯಲ್ಲಿ ಸರಕಾರಿ ಅನುದಾನದ ಹಣ ದುರ್ಬಳಕೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ರಾಜಕುಮಾರ್ ಪಾಟೀಲ್ ಹಾಗೂ ಬಸಪ್ಪ ಬಿರಾದಾರ ನೇತೃತ್ವದಲ್ಲಿ ಇಬ್ಬರು ಶಿಕ್ಷಕರನ್ನೊಳಗೊಂಡ ತನಿಖಾ ಸಮಿತಿಯನ್ನು ರಚಿಸಲಾಗಿತ್ತು. ತನಿಖಾ ವರದಿಯಲ್ಲಿ, ನವೀನಾಥ ಶಿಂಧೆ ಅವರ ಅವಧಿಯಲ್ಲಿ ಒಟ್ಟು ₹4.42 ಲಕ್ಷ ರೂ. ಹಣವನ್ನು ನಿಯಮಬಾಹಿರವಾಗಿ ಬಳಸಲಾಗಿದೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಎರಡು ಬೈಕ್‌ಗಳ ಡಿಕ್ಕಿ: ಓರ್ವ ಸಾವರ ಸ್ಥಳದಲ್ಲೇ ಮೃತ ಇನ್ನೋರ್ವ ಗಂಭೀರ ಗಾಯ

ತನಿಖಾ ವರದಿ ಆಧರಿಸಿ, ಕರ್ತವ್ಯ ಲೋಪದ ಆರೋಪದಡಿ ನವೀನಾಥ ಶಿಂಧೆಯನ್ನು ಅಮಾನತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಜಮಖಂಡಿ ಅಧಿಕೃತ ಆದೇಶ ಪ್ರಕಟಿಸಿದ್ದಾರೆ.

ಗಮನಾರ್ಹವಾಗಿ, ಅಮಾನತುಗೊಂಡ ನವೀನಾಥ ಶಿಂಧೆ ಅವರು ಸದ್ಯ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಲಬುರಗಿ ದಕ್ಷಿಣ ವಲಯದ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಕಲಬುರಗಿ | ಔಷಧೀಯ ಸಸ್ಯಗಳ ಪರಿಚಯದೊಂದಿಗೆ ಪರಿಸರ ಸಂರಕ್ಷಣೆಗೆ ಕರೆ

ಔಷಧೀಯ ಹಾಗೂ ಆಯುರ್ವೇದಿಕ ಗಿಡಮೂಲಿಕೆಗಳ ಮಹತ್ವ, ಸಾಂಪ್ರದಾಯಿಕ ಬಳಕೆ ಮತ್ತು ಆರೋಗ್ಯದ...

ಕಲಬುರಗಿ | ಪರಿಸರ ರಕ್ಷಿಸಿದರೆ ಮಾನವ ಸಮಾಜದ ರಕ್ಷಣೆ: ಮಲ್ಲಿಕಾರ್ಜುನ್ ಎಂಎಸ್

ಭೂಮಿ ತಾಯಿಯಿದ್ದಂತೆ. ಗಿಡಮರಗಳನ್ನು ನೆಟ್ಟು ಪರಿಸರವನ್ನು ರಕ್ಷಿಸಿದರೆ ಅದು ಮಾನವ ಸಮಾಜವನ್ನು...