ಕಲಬುರಗಿ | ಲಾರಿ,ಬಸ್,ಆಟೋ ನಡುವೆ ಭೀಕರ ಅಪಘಾತ: 13 ಮಂದಿ ಗಂಭೀರ ಗಾಯ

Date:

ಸಿಮೆಂಟ್ ತುಂಬಿದ ಲಾರಿ, ಬಸ್ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು 13 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ತಾಂಡೂರ-ಚಿಂಚೋಳಿ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.

- Advertisement -

ತಾಂಡೂರಿನಿಂದ ಚಿಂಚೋಳಿಯತ್ತ ಸಾಗುತ್ತಿದ್ದ ಸಿಮೆಂಟ್ ಲಾರಿ, ಮಾರ್ಗ ಮಧ್ಯೆ ಆಟೋಗೆ ಡಿಕ್ಕಿ ತಪ್ಪಿಸಲು ಯತ್ನಿಸಿದ ವೇಳೆ ಎದುರುಗಡೆಯಿಂದ ಬರುತ್ತಿದ್ದ ಚಿಂಚೋಳಿ ಘಟಕದ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ ಒಂಬತ್ತು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಅಪಘಾತದಲ್ಲಿ ಬಸ್ ಚಾಲಕ ಮಹಮ್ಮದ್ ಲಾಲ್ ಪಟೇಲ್ (ವಡ್ಡನಕೇರ), ನಿರ್ವಾಹಕ ವಿಜಯಕುಮಾರ್ ಹಾಗೂ ಆಟೋ ಚಾಲಕ ಮಹಮ್ಮದ್ ಇಲಿಯಾಸ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಿಗೆ ಕೈ, ಕಾಲು ಹಾಗೂ ಬೆನ್ನು ಮೂಳೆಗಳಿಗೆ ಗಾಯಗಳಾಗಿದ್ದು, ಇನ್ನೂ ಐದು ಮಂದಿಗೆ ತಲೆಗೆ ಪೆಟ್ಟಾಗಿದೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ತಕ್ಷಣ ಚಿಂಚೋಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೀದರ್ ಹಾಗೂ ಕಲಬುರಗಿ ಸರ್ಕಾರಿ ಆಸ್ಪತ್ರೆಗಳಿಗೆ ಆಂಬುಲೆನ್ಸ್ ಮೂಲಕ ರವಾನಿಸಲಾಯಿತು. ಆಟೋ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಎಸ್ಸೆಸ್ಸೆಲ್ಸಿ ಫಲಿತಾಂಶ | ಕೆಂಭಾವಿಗೆ ಕೀರ್ತಿ ತಂದ ವಿದ್ಯಾರ್ಥಿನಿಗೆ ನಮ್ಮ ಕರ್ನಾಟಕ ಸೇನೆ ವತಿಯಿಂದ ಸನ್ಮಾನ

ಘಟನಾ ಸ್ಥಳಕ್ಕೆ ಸಿಪಿಐ ಕಪಿಲ್ ದೇವ್ ಹಾಗೂ ಪಿಎಸ್‌ಐ ಗಂಗಮ್ಮ ಜಿನಕೆರೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದ ಪರಿಣಾಮ ಕೆಲಕಾಲ ಸಂಚಾರ ಸ್ಥಗಿತಗೊಂಡಿದ್ದು, ರಸ್ತೆ ಮಧ್ಯೆ ಉರುಳಿದ್ದ ಸಿಮೆಂಟ್ ಲಾರಿಯನ್ನು ಜೆಸಿಬಿ ಸಹಾಯದಿಂದ ತೆರವುಗೊಳಿಸಿ ಸಂಚಾರವನ್ನು ಪುನಃ ಆರಂಭಿಸಲಾಯಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಕೀಲರ ಮೇಲಿನ ಹಲ್ಲೆ, ಕೊಲೆ ಪ್ರಕರಣಗಳಿಗೆ ಕಡಿವಾಣ ಹಾಕಿ: ಸಂರಕ್ಷಣಾ ಕಾಯ್ದೆ ಬಲಪಡಿಸಲು ಆಗ್ರಹ

ವಕೀಲರ ಮೇಲಿನ ಹಲ್ಲೆ, ದೌರ್ಜನ್ಯ, ಬೆದರಿಕೆ ಹಾಗೂ ಕೊಲೆ ಪ್ರಕರಣಗಳನ್ನು ತಡೆಗಟ್ಟುವಂತೆ...

ಕಲಬುರಗಿ | ಕಾರ್ಮಿಕನ ಮೇಲೆ ಯಂತ್ರ ಬಿದ್ದು ಸಾವು, ಇಬ್ಬರಿಗೆ ಗಾಯ

ಚಿಂಚೋಳಿ ತಾಲ್ಲೂಕಿನ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸದ ವೇಳೆ ಸಂಭವಿಸಿದ ಗಂಭೀರ ಅವಘಡವೊಂದು...

ಕಲಬುರಗಿ | ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: 54 ವರ್ಷದ ಆಟೋ ಚಾಲಕನ ಬಂಧನ

ನಗರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ 54...

ಕಲಬುರಗಿ | ರೈಲ್ವೆ ಹಳಿ ಬಳಿ ಇಸ್ಪೀಟ್ ಜೂಜಾಟ: ಐವರು ಬಂಧನ, ₹3,100 ನಗದು ವಶ

ನಗರದ ಹೊರವಲಯದ ಬಬಲಾದ (ಎಸ್) ಗ್ರಾಮದ ರೈಲ್ವೆ ಹಳಿ ಸಮೀಪ ಸಾರ್ವಜನಿಕ...