ಕಲಬುರಗಿ | ಬಂಜಾರ ಸಮುದಾಯಕ್ಕೆ ಸ್ವಾಭಿಮಾನಿ ಬದುಕಿನ ದಾರಿ ತೋರಿದ ಮಹಾನ್ ಗುರು; ಮಹೇಶ ರಾಠೋಡ

Date:

ಅಲೆಮಾರಿಗಳಾಗಿ ಜೀವನ ನಡೆಸುತ್ತಿದ್ದ ಬಂಜಾರ ಸಮುದಾಯಕ್ಕೆ ಒಂದೇ ಸ್ಥಳದಲ್ಲಿ ನೆಲೆಸಿ ಸ್ವಾಭಿಮಾನದಿಂದ ದುಡಿದು ಬದುಕುವ ಮಾರ್ಗವನ್ನು ತೋರಿದ ಮಹಾನ್ ಸಮಾಜಗುರು ಸೇವಾಲಾಲ್ ಮಹಾರಾಜ್ ಅವರ ಕೊಡುಗೆ ಅಪಾರವಾಗಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಡಾ. ಮಹೇಶಕುಮಾರ ರಾಠೋಡ ಹೇಳಿದರು.

- Advertisement -

ಜೇವರ್ಗಿ ತಹಸೀಲ್ದಾರ್ ಕಾರ್ಯಾಲಯದಲ್ಲಿ ರವಿವಾರ ಆಯೋಜಿಸಲಾದ ಸೇವಾಲಾಲ್ ಮಹಾರಾಜ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ‘ಬ್ರಿಟಿಷ್ ಸರ್ಕಾರದ ಕಾಲದಲ್ಲಿ ಬಂಜಾರ ಸಮುದಾಯವನ್ನು “ಅಪರಾಧಿಕ ಬುಡಕಟ್ಟು” ಎಂದು ಗುರುತಿಸಿ ಅಲೆಮಾರಿ ಬದುಕಿಗೆ ತಳ್ಳಲಾಗಿತ್ತು ಎಂದು ತಿಳಿಸಿದರು. ಸಮುದಾಯ ಅತಂತ್ರ ಸ್ಥಿತಿಯಲ್ಲಿ ಇದ್ದಾಗ, ಒಂದೇ ಸ್ಥಳದಲ್ಲಿ ನೆಲೆಸಿ ದುಡಿದು ಬದುಕುವ ಮಾರ್ಗವನ್ನು ತೋರಿದವರು ಸೇವಾಲಾಲ್ ಮಹಾರಾಜ್’ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

“ರಾಬತೋ ಚಾಬೆನ್ ಮಳಚ್” (ದುಡಿದರೆ ಮಾತ್ರ ಉಣ್ಣಲು ಸಿಗುತ್ತದೆ) ಎಂಬ ಸಂದೇಶದ ಮೂಲಕ ಕಾಯಕದ ಮಹತ್ವವನ್ನು ಸಾರಿದ ಸೇವಾಲಾಲ್ ಮಹಾರಾಜ್ ಸಮಾಜದಲ್ಲಿ ಸ್ವಾಭಿಮಾನ ಹಾಗೂ ಸಂಘಟಿತ ಬದುಕಿನ ಅರಿವು ಮೂಡಿಸಿದರು ಎಂದು ರಾಠೋಡ ಅಭಿಪ್ರಾಯಪಟ್ಟರು. 18ನೇ ಶತಮಾನದಲ್ಲೇ ಸಮಾಜ ಪರಿವರ್ತನೆಯ ದಿಕ್ಕು ತೋರಿದ ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ’ ಎಂದು ಹೇಳಿದರು.

ಕಾರ್ಯಕ್ರಮದ ಆರಂಭದಲ್ಲಿ ತಹಸೀಲ್ದಾರ್ ಮಲ್ಲಣ್ಣ ಯಲಗೋಡ ಅವರು ಸೇವಾಲಾಲ್ ಮಹಾರಾಜ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಗೋರ್ ಸಮಾಜದ ಪರಂಪರೆಯಂತೆ ಸಮಾಜದ ಪಂಚರು ಭೋಗ ಹಚ್ಚುವ ಮೂಲಕ ಗೌರವ ಸಲ್ಲಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ವೃದ್ಧ ದಂಪತಿಯನ್ನು ಮಧ್ಯದಲ್ಲೇ ಇಳಿಸಿದ ಬಸ್ ನಿರ್ವಾಹಕ ಅಮಾನತು

ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ದಾನಪ್ಪ ಗೌಡ ಮಾತನಾಡಿ, ಸಮಾಜದ ಏಕತೆ, ಶಿಕ್ಷಣ ಮತ್ತು ಸಂಘಟಿತ ಹೋರಾಟದ ಅಗತ್ಯತೆಯನ್ನು ಒತ್ತಿಹೇಳಿದರು.

ಕಾರ್ಯಕ್ರಮದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ. ಶರ್ಮಾ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...