ಕಲಬುರಗಿ | ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರ ದಾರುಣ ಸಾವು

Date:

ಮನೆಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಅನಿಲದ ಪರಿಣಾಮ ಉಸಿರುಗಟ್ಟಿ ಇಬ್ಬರು ಮೃತಪಟ್ಟ ದಾರುಣ ಘಟನೆ
ನಗರದ ಹೀರಾಪೂರ ಪ್ರದೇಶದ ರೈಲ್ವೆ ಬ್ರಿಡ್ಜ್ ಸಮೀಪದ ಮಾದರಸನಹಳ್ಳಿಯಲ್ಲಿ ಬುಧವಾರ ಸಂಭವಿಸಿದೆ.

- Advertisement -

ಮೃತರನ್ನು ಹೀರಾಪೂರ ವ್ಯಾಪ್ತಿಯ ಮಾದರಸನಹಳ್ಳಿಯ ನಿವಾಸಿ ಶಿವಕುಮಾರ್ ಕಾಶೀನಾಥ್ ನಂದೂರಕರ್ (52) ಹಾಗೂ ಇಂದಿರಾ ನಗರದ ನಿವಾಸಿ ರತನ್ ಭುಜಂಗರಾವ ಹೊಟ್ಕರ್ (60) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇಬ್ಬರೂ ಆಪ್ತ ಸ್ನೇಹಿತರಾಗಿದ್ದು, ಆಗಾಗ ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದ್ದು, ಬುಧವಾರ ಬೆಳಿಗ್ಗೆ ಶಿವಕುಮಾರ್ ಅವರ ಮನೆಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದ ವೇಳೆ ಒಳಗೆ ಸಂಗ್ರಹವಾಗಿದ್ದ ವಿಷಕಾರಿ ಅನಿಲದ ಪರಿಣಾಮ ಉಸಿರುಗಟ್ಟಿಕೊಂಡು ಹೊರಬರಲಾರದೆ ಮೃತಪಟ್ಟಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಬಸ್‌, ಬೈಕ್‌ ಮುಖಾಮುಖಿ ಡಿಕ್ಕಿ; ಸವಾರ ಗಂಭೀರ ಗಾಯ

ಘಟನೆಗೆ ಸಂಬಂಧಿಸಿದಂತೆ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಕಲಬುರಗಿ | ₹3 ಸಾವಿರ ಲಂಚ ಸ್ವೀಕಾರ: ಪೊಲೀಸ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚ...

ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR)...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...