ಕಲಬುರಗಿ | ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಶಿಕ್ಷಕರ ಹುದ್ದೆಗಳು ಶೀಘ್ರ ಭರ್ತಿ : ಸಚಿವ ಶರಣ ಪ್ರಕಾಶ ಪಾಟೀಲ್ ಭರವಸೆ

Date:

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸಚಿವ ಶರಣ ಪ್ರಕಾಶ ಪಾಟೀಲ್ ಅವರು ಭರವಸೆ ನೀಡಿದರು.

- Advertisement -

ಸೇಡಂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ವಿಶೇಷ ಅನುದಾನ ಒದಗಿಸಿ ‘ಅಕ್ಷರ ಆವಿಷ್ಕಾರ’ ಯೋಜನೆಯನ್ನು ರೂಪಿಸಲಾಗಿದ್ದು, ಇದರ ಮೂಲಕ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

‘ಸೇಡಂ ತಾಲೂಕಿನ ಶೈಕ್ಷಣಿಕ ಮಟ್ಟವನ್ನು ಇನ್ನಷ್ಟು ಸುಧಾರಿಸುವ ಉದ್ದೇಶದಿಂದ ನೂತನ ಶಾಲಾ ಕೋಣೆಗಳ ನಿರ್ಮಾಣ, ಹೆಚ್ಚುವರಿ ಅನುದಾನ ಹಾಗೂ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು’ ಎಂದು ಅವರು ತಿಳಿಸಿದರು.

‘ಶಿಕ್ಷಣವು ಪಠ್ಯಕ್ಕೆ ಮಾತ್ರ ಸೀಮಿತವಾಗದೆ, ಮಕ್ಕಳಲ್ಲಿ ಮೌಲ್ಯಾಧಾರಿತ ಜೀವನಶೈಲಿ ಮತ್ತು ಸಮಾಜದ ಬಗ್ಗೆ ಜವಾಬ್ದಾರಿಯುತ ಮನೋಭಾವವನ್ನು ಬೆಳೆಸುವಂತಿರಬೇಕು ಎಂದು ಸಚಿವರು ಹೇಳಿದರು. ಸೇಡಂ ಮತಕ್ಷೇತ್ರದಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಯಾವುದೇ ಕಾಮಗಾರಿಗಳು ಅಥವಾ ಮನವಿಗಳಿದ್ದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ನೇರವಾಗಿ ನನ್ನನ್ನು ಸಂಪರ್ಕಿಸಬಹುದು’ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಪ್ರತಿ ಎಕರೆಗೆ 8 ಕ್ವಿಂಟಲ್ ತೊಗರಿ ಖರೀದಿಸಲು ಆದೇಶಿಸಬೇಕು ; ನಾಗೇಶ್ ಗದ್ದಿಗಿ

ಈ ಸಂದರ್ಭದಲ್ಲಿ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಅನೇಕ ಗುರುಗಳಿಗೆ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಮುಧೋಳ ವಲಯ ಮಟ್ಟದ ಶಿಕ್ಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬರಗಾಲ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ಕಲಬುರಗಿ ಸಂಪೂರ್ಣ ಬರ ಪೀಡಿತ ಪ್ರದೇಶವೆಂದು...

ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...