ಕಲಬುರಗಿ | ಹೋರಾಟದ ಗೆಲುವು: ಮುಚ್ಚುವ ಭೀತಿಯಲ್ಲಿದ್ದ ಸರ್ಕಾರಿ ಶಾಲೆಗಳು ಪುನರಾರಂಭ

Date:

ರಾಜ್ಯ ಸರ್ಕಾರದ ‘ಕೆಪಿಎಸ್ ಮ್ಯಾಗ್ನೆಟ್ ಯೋಜನೆ’ಯಡಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರದ ವಿರುದ್ಧ ಕಳೆದ ಆರು ತಿಂಗಳುಗಳಿಂದ ಸಾರ್ವಜನಿಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ನಡೆಸಿದ ನಿರಂತರ ಹೋರಾಟದ ಫಲವಾಗಿ ಮುಚ್ಚುವ ಭೀತಿಯಲ್ಲಿದ್ದ ಶಾಲೆಗಳು ಮತ್ತೆ ಪುನಾರಂಭಗೊಂಡಿವೆ ಎಂದು ಎಐಡಿಎಸ್‌ಓ ಜಿಲ್ಲಾ ಕೌನ್ಸಿಲ್ ತಿಳಿಸಿದೆ.

- Advertisement -

ಈ ಕುರಿತು ಜಿಲ್ಲಾ ಕಾರ್ಯದರ್ಶಿ ವೆಂಕಟೇಶ ದೇವದುರ್ಗ ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ‘ಸಾರ್ವತ್ರಿಕ ಶಿಕ್ಷಣದ ಹಕ್ಕಿಗಾಗಿ ಹೋರಾಡಿದ ಈಶ್ವರಚಂದ್ರ ವಿದ್ಯಾಸಾಗರ, ಜ್ಯೋತಿರಾವ್ ಪುಲೆ ಹಾಗೂ ಸಾವಿತ್ರಿಬಾಯಿ ಪುಲೆ ಅವರ ವಿಚಾರಧಾರೆಗಳು ಈ ಹೋರಾಟಕ್ಕೆ ಪ್ರೇರಣೆಯಾಗಿವೆ’ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

‘ಶಿಕ್ಷಣವು ವ್ಯಾಪಾರವಾಗಬಾರದು, ಅದು ಪ್ರತಿಯೊಬ್ಬ ಮಗುವಿನ ಹಕ್ಕಾಗಬೇಕು. ನಮ್ಮೂರ ಶಾಲೆ ಉಳಿಯಬೇಕು ಎಂಬ ಸಂಕಲ್ಪದೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಜನರು ಒಗ್ಗೂಡಿ ನಡೆಸಿದ ಹೋರಾಟದ ಪ್ರತಿಫಲವೇ ಇಂದು ಶಾಲೆಗಳ ಗಂಟೆ ಮತ್ತೆ ಮೊಳಗುವಂತಾಗಿದೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಐಡಿಎಸ್‌ಓ ಹಾಗೂ ‘ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ’ ಸದಸ್ಯರು ಜಿಲ್ಲೆಯ ಕಾಳಗಿ, ಚಿತ್ತಾಪುರ, ಶಹಾಬಾದ್, ಕಮಲಾಪುರ, ಕಲಬುರಗಿ, ಜೇವರ್ಗಿ ಹಾಗೂ ಅಫಜಲಪುರ ತಾಲೂಕುಗಳ ವಿವಿಧ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಶಾಲೆ ಉಳಿಸಲು ಹೋರಾಡಿದ ಪೋಷಕರನ್ನು ಅಭಿನಂದಿಸಿ, ಶಾಲೆಗೆ ಹಾಜರಾದ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಹೊಟ್ಟೆಗೆ ಚಾಕು ಇರಿದು ಕುರಿಗಾಹಿ ಹತ್ಯೆ

ಸರ್ಕಾರಿ ಶಾಲೆಗಳನ್ನು ಕೇವಲ ಉಳಿಸುವುದಲ್ಲದೆ, ಅವುಗಳಿಗೆ ಅಗತ್ಯ ಮೂಲಸೌಕರ್ಯ ಹಾಗೂ ಗುಣಮಟ್ಟದ ಶಿಕ್ಷಣವನ್ನು ಒದಗಿಸುವವರೆಗೆ ವಿದ್ಯಾರ್ಥಿಗಳು ಮತ್ತು ಪೋಷಕರ ಹೋರಾಟ ಮುಂದುವರಿಯಲಿದೆ ಎಂದು ಎಐಡಿಎಸ್‌ಓ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ದೌರ್ಜನ್ಯ ತಡೆ ಕಾಯ್ದೆ ಕುರಿತು ಜಾಗೃತಿ: ಕಾನೂನು ಅರಿವು ಬೆಳೆಸಿಕೊಳ್ಳಲು ಕರೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ...

ಸಮುದಾಯ ಶೌಚಾಲಯ | ಕೋಟಿ ಹಣ ಖರ್ಚಾದರೂ ಮುಗಿಯದ ಕಾಮಗಾರಿ, ತೆರೆಯದ ಬಾಗಿಲು!

ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ನೈರ್ಮಲ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ...

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...

ಕಲಬುರಗಿ | ಬೆಂಬಲ ಬೆಲೆಯಲ್ಲಿ ಹೆಸರು ಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ: ಡಿ.19ರವರೆಗೆ ನೋಂದಣಿ

2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ...