ಕಲಬುರಗಿ | ಗ್ರಾಮ ಒನ್ ಕೇಂದ್ರದಲ್ಲಿ ಅಕ್ರಮ ಹಣ ವಸೂಲಿ ಆರೋಪ; ತಹಶೀಲ್ದಾರರಿಗೆ ಗ್ರಾಮಸ್ಥರು ಮನವಿ

Date:

ಜೇವರ್ಗಿ ತಾಲೂಕಿನ ಸೋನ್ನ ಗ್ರಾಮದಲ್ಲಿರುವ ಗ್ರಾಮ ಒನ್ ಕೇಂದ್ರದಲ್ಲಿ ಸಾರ್ವಜನಿಕರಿಂದ ಅಕ್ರಮವಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಸಂಬಂಧಿಸಿದ ನಿರ್ವಾಹಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ಮಂಗಳವಾರ ಜೇವರ್ಗಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

- Advertisement -

ದಲಿತ ಸಂಘರ್ಷ ಸಮಿತಿ ಜೇವರ್ಗಿ ತಾಲೂಕು ಸಂಚಾಲಕ ಶಿವಕುಮಾರ ಹೆಗ್ಡೆ ಮಾತನಾಡಿ, ‘ಸೋನ್ನ ಗ್ರಾಮದ ಗ್ರಾಮ ಒನ್ ಕೇಂದ್ರದ ನಿರ್ವಾಹಕ ಪ್ರವೀಣ ತಂದೆ ಶಿವರಾಯ ಶಿರಸಗಿ ಸಾರ್ವಜನಿಕರಿಂದ ನಿಯಮಬಾಹಿರವಾಗಿ ಹಣ ವಸೂಲಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಮುಂದುವರೆದು ಅವರು ‘ಎಫ್‌ಐಡಿ ಮಾಡಲು ರೂ.100, ಕಿಸಾನ್ ಕಪಾಸ್ ಯೋಜನೆಯಡಿ ಹತ್ತಿ ಬೆಳೆ ನೋಂದಣಿಗೆ ಒಬ್ಬ ರೈತನಿಂದ ರೂ.800 ರಿಂದ 1000 ವರೆಗೆ ಹಣ ಪಡೆಯಲಾಗುತ್ತಿದೆ. ಜಾತಿ ಮತ್ತು ಆದಾಯ ಪ್ರಮಾಣಪತ್ರಗಳಿಗೆ ಅರ್ಜಿ ಸಲ್ಲಿಸಲು ರೂ.100 ರಿಂದ 200 ವಸೂಲಿ ಮಾಡಲಾಗುತ್ತಿದ್ದು, ಒಟ್ಟಾರೆ ರೂ.1200 ಆಗುತ್ತಿದೆ’ ಎಂದು ದೂರಲಾಗಿದೆ.

‘ಸರ್ಕಾರ ನಿಗದಿಪಡಿಸಿದ ದರಪಟ್ಟಿ ಕೇಳಿದರೆ, ‘ಈ ಹಣದಲ್ಲಿ ಗ್ರಾಮ ಲೆಕ್ಕಾಧಿಕಾರಿ, ಕಂದಾಯ ನಿರೀಕ್ಷಕರು ಹಾಗೂ ಜೇವರ್ಗಿ ತಹಶೀಲ್ದಾರರಿಗೆ ಹಣ ನೀಡಬೇಕು” ಎಂದು ಮೌಖಿಕವಾಗಿ ಹೇಳುತ್ತಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ. ಅಲ್ಲದೆ ಪಡಿತರ ಚೀಟಿಗೆ ಹೆಸರು ಸೇರಿಸಲು ರೂ.3500 ಹಾಗೂ ಹೆಸರು ತೆಗೆದುಹಾಕಲು ರೂ.2500 ವಸೂಲಿ ಮಾಡಲಾಗುತ್ತಿದೆ ಎನ್ನಲಾಗಿದೆ’ ಎಂದು ಹೇಳಿದರು.

ಈ ಕುರಿತು ಗ್ರಾಮ ಲೆಕ್ಕಾಧಿಕಾರಿಗಳಿಗೆ 2-3 ಬಾರಿ ದೂರವಾಣಿ ಮೂಲಕ ಮಾಹಿತಿ ನೀಡಿದರೂ ಯಾವುದೇ ಪರಿಶೀಲನೆ ನಡೆಯದಿರುವುದಕ್ಕೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಜೂಜಾಟದ ವೀಡಿಯೋ ವೈರಲ್!

ಗ್ರಾಮದ ಬಡ ರೈತರು ಹಾಗೂ ಅನಕ್ಷರಸ್ಥರಿಗೆ ತೀವ್ರ ಅನ್ಯಾಯವಾಗುತ್ತಿರುವ ಹಿನ್ನೆಲೆಯಲ್ಲಿ, ಗ್ರಾಮ ಒನ್ ನಿರ್ವಾಹಕನ ವಿರುದ್ಧ ತಕ್ಷಣ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಬಸಪ್ಪ ಹೆಗಡೆ, ಶ್ರವಣಕುಮಾರ ಮಾರಡಗಿ, ಮಲ್ಲಿಕಾರ್ಜುನ ಸರನಾಳ, ಅರುಣಕುಮಾರ ಮಾರಡಗಿ, ಶರಣಪ್ಪ ಹೆಗಡೆ, ಶರಣಬಸು ತಳವಾರ, ಸಂಗಪ್ಪ ಧರೇನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಲಾರಿ, ಬೈಕ್ ಡಿಕ್ಕಿ; ಮೂವರು ಯುವಕರ ದಾರುಣ ಸಾವು!

ಸ್ನೇಹಿತನ ಹುಟ್ಟುಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಮನೆಯಿಂದ ಹೊರಟಿದ್ದ ಯುವಕ ಸೇರಿದಂತೆ ಮೂವರು...

ಕಲಬುರಗಿ | ಬಿಸಿಎಂ ಹಾಸ್ಟೆಲ್‌ಗಳಲ್ಲಿ ಆಹಾರ ಕಲಬೆರಕೆ ಆರೋಪ; ವಾರ್ಡನ್‌ಗಳು, ಅಧಿಕಾರಿಗಳ ಅಮಾನತಿಗೆ ಆಗ್ರಹ

ಜೇವರ್ಗಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಎಂ ವಸತಿ...

ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ...

ಕಲಬುರಗಿ | ನ.15ರಂದು ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ನಗರದ ಕನ್ನಡ ಭವನದಲ್ಲಿ ನವೆಂಬರ್ 15ರಂದು ಜರುಗಲಿರುವ ತಾಲೂಕು 10ನೇ ಕನ್ನಡ...