ಕಲಬುರಗಿ ಜಿಲ್ಲೆಯ ಜೇವರ್ಗಿ ರಸ್ತೆಯ ಕಟ್ಟಿಸಂಗಾವಿ ಸೇತುವೆಯಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ಪ್ರಭುದೇವ ಈಶ್ವರರಾವ್ (32) ಕಲಬುರಗಿಯ ಫರಹತಾಬಾದ್ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.
ಶುಕ್ರವಾರ ಬೆಳಗ್ಗೆ ಸೇತುವೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಫರಹತಾಬಾದ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನು ಓದಿದ್ದೀರಾ? ಯಾದಗಿರಿ | ಭೀಕರ ಅಪಘಾತ: ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸಜೀವ ದಹನ
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,





