ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಚಿಂಚೋಳಿ ತಾಲ್ಲೂಕಿನ ಶಾದಿಪುರ ಗ್ರಾಮದ ಸಮೀಪದ ಧನಸಿಂಗ್ ನಾಯಕ ತಾಂಡಾದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಮೃತನನ್ನು ಮಹೇಶ ಕಿಶನ್ ಚವ್ಹಾಣ (22) ಎಂದು ಗುರುತಿಸಲಾಗಿದೆ. ಅವರು ಹೊಲದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಅಕಸ್ಮಿಕವಾಗಿ ಸಿಡಿಲು ಬಡಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಇದನ್ನು ಓದಿದ್ದೀರಾ? ದೇವಸ್ಥಾನದ ಕಟ್ಟೆ ಮೇಲೆ ಕೂತಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ; ಯಾದಗಿರಿಯಲ್ಲಿ ಅಮಾನವೀಯ ಘಟನೆ
ಘಟನೆಯ ಮಾಹಿತಿ ತಿಳಿದ ಕೂಡಲೇ ಕುಂಚಾವರಂ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.





