ಕಲಬುರಗಿ | ಕನಕ ಜಯಂತಿ ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ

0
276

ಕನಕದಾಸ ಜಯಂತಿ ಕಾರ್ಯಕ್ರಮದ ವೇಳೆ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದೆ. ಜಗಳದ ಕಾರಣ ಗುಂಪುಗೂಡಿದ್ದವರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಗುರುವಾರ, ಕಲಬುರಗಿಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಪಂಚಾಯತಿ ಹಾಗೂ ಮಹಾನಗರ ಪಾಲಿಕೆ ಒಗ್ಗೂಡಿ ಕನಕದಾಸ ಜಯಂತಿ ಕಾರ್ಯಕ್ರಮ ಆಯೋಜಿಸಿದ್ದವು. ಕಾರ್ಯಕ್ರಮಕ್ಕೂ ಮುನ್ನ ಮೆರವಣಿಗೆ ನಡೆಸಲಾಗಿತ್ತು.

ಮರವಣಿಗೆ ವೇಳೆ, ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರು ಜಗಳ ಮಾಡಿಕೊಂಡು, ಹೊಡೆದಾಡಿಕೊಂಡಿದ್ದಾರೆ. ಅವರನ್ನು ಸಮಾಧಾನಿಸಿ ವೇದಿಕೆ ಕಾರ್ಯಕ್ರಮದ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ, ಸಮುದಾಯದ ಮುಖಂಡರು ಯುವಕರನ್ನು ವಿಚಾರಿಸಿದ್ದಾರೆ. ಈ ವೇಳೆ, ಗಾಯಗೊಂಡಿದ್ದ ಯುವಕನ ಮೇಲೆ ಮತ್ತೆ ಹಲ್ಲೆ ನಡೆದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗಲಾಟೆಯಿಂದಾಗಿ ಜನರು ಗುಂಪುಗೂಡಿದ್ದಾರೆ. ಯುವಕರನ್ನು ಹೊರ ಕರೆದೊಯ್ದ ಪೊಲೀಸರು, ಗುಂಪನ್ನು ಚದುರಿಸಲು ಲಾಠ ಪ್ರಹಾರ ನಡೆಸಿದ್ದಾರೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here