ಕಲಬುರಗಿ | ಎಸ್ಐಆರ್ ಅಂತಿಮ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 18,94,144 ಮತದಾರರು:

Date:

ರಾಜ್ಯದಲ್ಲಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್ಐಆರ್) ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. 9 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಈ ಅಂತಿಮ ಪಟ್ಟಿಯ ಪ್ರಕಾರ, ಜಿಲ್ಲೆಯಲ್ಲಿ ಒಟ್ಟು 18,94,144 ಮತದಾರರಿದ್ದು, ಇದರಲ್ಲಿ 9,61,210 ಪುರುಷರು, 9,32,722 ಮಹಿಳೆಯರು ಹಾಗೂ 212 ಲಿಂಗತ್ವ ಅಲ್ಪಸಂಖ್ಯಾತರು ಸೇರಿದ್ದಾರೆ ಎಂದು ಅಪರಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ತಿಳಿಸಿದರು.

- Advertisement -

ಮಂಗಳವಾರ ನಗರದ ಗುಲ್ಬರ್ಗಾ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಮೀಡಿಯಾ ಸೆಂಟರ್ ನಲ್ಲಿ ಎಸ್.ಐ.ಆರ್ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಕುರಿತು ವಿವರ ನೀಡಿದ ಅವರು, ಮನೆ-ಮನೆ ಸಮೀಕ್ಷೆ, ಎನ್ಯುಮರೇಷನ್ ಹಾಗೂ ಮ್ಯಾಪಿಂಗ್ ಕಾರ್ಯಗಳು ಪೂರ್ಣಗೊಂಡ ಬಳಿಕ ಆಗಸ್ಟ್ 24 ರಂದು ಕರಡು ಎಲೆಕ್ಟೋರಲ್ ರೋಲ್ ಪ್ರಕಟಿಸಲಾಗಿತ್ತು. ಕರಡು ಪಟ್ಟಿ ಪ್ರಕಟಿಸಿದಾಗ 18,49,575 ಮತದಾರರಿದ್ದರು. ನಂತರದ ಹಕ್ಕು ಮತ್ತು ಆಕ್ಷೇಪಣೆ (ಕ್ಲೈಮ್ಸ್ & ಅಬ್ಜೆಕ್ಷನ್) ಅವಧಿಯಲ್ಲಿ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ, ನೆಟ್ ಎಡಿಷನ್ ಆಗಿ ಒಟ್ಟು 44,559 ಹೊಸ ಮತದಾರರನ್ನು ಅಂತಿಮ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಎಸ್‌ಐಆರ್ ಅವಧಿಯಲ್ಲಿ ಎದುರಾದ ಅನಮಲಿ ಮತ್ತು ನೋ ಮ್ಯಾಪಿಂಗ್‌ಗೆ ಸಂಬಂಧಿಸಿದಂತೆ 1,05,511 ನೋಟೀಸ್‌ಗಳನ್ನು ಜಾರಿಗೊಳಿಸಿ ಪರಿಶೀಲನೆ ನಡೆಸಲಾಗಿತ್ತು. ಸೂಕ್ತ ದಾಖಲೆಗಳಿಲ್ಲದ, ಮೃತಪಟ್ಟ ಹಾಗೂ ಬೇರೆಡೆಗೆ ಸ್ಥಳಾಂತರಗೊಂಡ (ಡುಪ್ಲಿಕೇಟ್) 1,905 ಮತದಾರರನ್ನು ಮಾತ್ರ ಈ ಅಂತಿಮ ಪಟ್ಟಿಯಿಂದ ಕೈಬಿಡಲಾಗಿದ್ದು, ಅರ್ಹರಿಗೆ ಸಂಪೂರ್ಣ ಅವಕಾಶ ಕಲ್ಪಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.

ಪ್ರಸ್ತುತ ಪಟ್ಟಿಯಲ್ಲಿ 18 ರಿಂದ 19 ವರ್ಷದೊಳಗಿನ 28,966 ಯಂಗ್ ವೋಟರ್ಸ್ ಇದ್ದಾರೆ. ಇದರೊಂದಿಗೆ 25,501 ಪಿ.ಡಬ್ಲ್ಯೂ.ಡಿ (ಅಂಗವಿಕಲ) ಮತದಾರರು, 85 ವರ್ಷಕ್ಕಿಂತ ಮೇಲ್ಪಟ್ಟ 14,897 ಹಿರಿಯ ಮತದಾರರು ಹಾಗೂ 896 ಸೇವಾ ನಿರತ ಯೋಧರಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮತಗಟ್ಟೆಗಳ ಸಂಖ್ಯೆಯನ್ನು ಸಹ ತರ್ಕಬದ್ಧಗೊಳಿಸಲಾಗಿದ್ದು 1,200 ಕ್ಕಿಂತ ಹೆಚ್ಚು ಮತದಾರರಿರುವ ಕಡೆಗಳಲ್ಲಿ ಹೊಸ ಮತಗಟ್ಟೆಗಳನ್ನು ಸೃಷ್ಟಿಸಲಾಗಿದೆ. ಇದರಿಂದಾಗಿ ಎಸ್‌ಐಆರ್ ಗೂ ಮುಂಚೆ ಇದ್ದ 2,400 ಮತಗಟ್ಟೆಗಳಿಗೆ ಹೆಚ್ಚುವರಿಯಾಗಿ 61 ಸೇರ್ಪಡೆಯಾಗಿ, ಒಟ್ಟು ಮತಗಟ್ಟೆಗಳ ಸಂಖ್ಯೆ 2,461 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ಇಪಿ ರೇಶಿಯೋ 65.44% ಹಾಗೂ ಲಿಂಗಾನುಪಾತ ಸಾವಿರ ಪುರುಷರಿಗೆ 971 ಮಹಿಳೆಯರು ಇದ್ದಾರೆ ಎಂದು ಅವರು ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಸಿಂಧೆ ಅವರು ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಿದ್ದು, ಗೈರುಹಾಜರಾದವರು, ಸ್ಥಳಾಂತರಗೊಂಡವರು, ಮೃತರಾದವರು ಮತ್ತು ಈಗಾಗಲೇ ನೋಂದಾಯಿಸಿಕೊಂಡವರು ಎಂಬ ನಾಲ್ಕು ವಿಭಾಗಗಳ ಅಡಿಯಲ್ಲಿ ಹೆಸರುಗಳನ್ನು ಕೈಬಿಡಲಾಗಿದೆ. ಕೆಲವು ಕಡೆ ಹೆಸರು ತೆಗೆದುಹಾಕಿರುವ ಬಗ್ಗೆ ದೂರುಗಳು ಬಂದಿದ್ದರೂ, ನಿಯಮಾನುಸಾರವೇ ಕರಡು ಪಟ್ಟಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ 324 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಒಟ್ಟಾರೆಯಾಗಿ ಪರಿಷ್ಕರಣೆ ವೇಳೆ 48,513 ಮತದಾರರ ಸೇರ್ಪಡೆ, 3,954 ಹೆಸರುಗಳ ಕೈಬಿಡುವಿಕೆ ಹಾಗೂ 42,108 ತಿದ್ದುಪಡಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದೆ ನಿಖರ ದಾಖಲೆಗಳೊಂದಿಗೆ ಈ ಪ್ರಕ್ರಿಯೆ ನಡೆಸಲಾಗಿದೆ ಎಂದರು.

ಇದನ್ನೂ ಓದಿ : ಕಲಬುರಗಿ | ಮನೆಯ ಛಾವಣಿಯಲ್ಲಿ ಬೆಂಕಿ ಅವಘಡ

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಶಾಂತ್ ಕಿಶೋರ್ ಆಪ್ತ, ‘ಜನ್ ಸುರಾಜ್’ ಡಿಜಿಟಲ್ ಮ್ಯಾನೇಜರ್ ರೈಲಿನಿಂದ ನಾಪತ್ತೆ, ನಿಗೂಢ ಸಾವು

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ 'ಜನ್ ಸುರಾಜ್ ಪಾರ್ಟಿ'ಯ (ಜೆಎಸ್‌ಪಿ)...

ಬೀದರ್‌ | ಹಸ್ತಪ್ರತಿ ಸಂರಕ್ಷಣೆಗೆ ಪ್ರತ್ಯೇಕ ಇಲಾಖೆ ಸ್ಥಾಪಿಸಿ: ನಾ.ಗೀತಾಚಾರ್ಯ

ರಾಜ್ಯದ ಅಮೂಲ್ಯ ಜ್ಞಾನಸಂಪತ್ತಾಗಿರುವ ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ನಿರ್ವಹಣೆಗೆ ಸಮಗ್ರ ನೀತಿ...

ಕುಡಚಿ ರೈಲು ಮಾರ್ಗ ಕಾಮಗಾರಿಗೆ ವೇಗ ನೀಡಿ; ರೈಲ್ವೆ ಹೋರಾಟಕ್ಕೆ ರೈತರೂ ಕೈಜೋಡಿಸಿ: ಕುತ್ಬುದ್ದೀನ್ ಖಾಜಿ

ದಶಕಗಳಿಂದ ಕುಂಟುತ್ತ ಸಾಗುತ್ತಿರುವ ಕುಡಚಿ ರೈಲು ಮಾರ್ಗದ ಕಾಮಗಾರಿಯನ್ನು ತ್ವರಿತಗೊಳಿಸಿ, ಯೋಜನೆಯನ್ನು...

ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎ.ಪಿ. ರಂಗನಾಥ್ ಗೆಲುವು

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆ-2026ರ ಬೆಂಗಳೂರು...