ಕಾಳಗಿ | ಮುಂಗಾರು ಕೊರತೆ: ಬರಗಾಲ ಘೋಷಣೆಗೆ ರೈತರ ಒತ್ತಾಯ

Date:

ಮುಂಗಾರು ಕೊರತೆಯಿಂದ ಬರಗಾಲದ ಛಾಯೆ ಆವರಿಸಿದೆ. ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೆಲವು ಹೋಬಳಿಗಳಲ್ಲಿ ಬಿತ್ತನೆ ಮಾಡಲಾದ ಬೆಳೆಗಳು ತಾಪಮಾನದ ಹೆಚ್ಚಳದಿಂದ ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಬರಗಾಲ ಘೋಷಿಸಿ ರೈತರ ಸಾಲ ಮನ್ನಾ ಮಾಡುವಂತೆ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

- Advertisement -

ಅಂತರ್ಜಲ ಮಟ್ಟವೂ ಕುಸಿತ ಕಂಡಿದ್ದು, ಕೊಳವೆ ಬಾವಿಗಳೂ ಬತ್ತಿವೆ. ಸಾಲ ಮಾಡಿ ಬಿತ್ತನೆ ಬೀಜ, ರಸಗೊಬ್ಬರ ಖರೀದಿಸಿದ್ದರಿಂದ ಆ ನಷ್ಟವೂ ಬೆನ್ನಿಗೆ ಬಿದ್ದಿದೆ. ಮೊಳಕೆ ಬಂದಿದ್ದ ಉದ್ದು, ತೊಗರಿ, ಸೋಯಾ ಬೆಳೆಗಳು ಪೂರ್ತಿ ನಾಶವಾಗಿವೆ. ಪರಿಸ್ಥಿತಿ ಹೀಗೆ ಮುಂದುವರೆದರೆ ರೈತ ಕುಟುಂಬಗಳು ಬದುಕು ಹೊರೆಯುವುದು ಕಷ್ಟವಾಗುತ್ತದೆ. ಕಾಳಗಿ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಕಾಳಗಿ ತಾಲೂಕು ರೈತ ಸಮಿತಿ ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ರೈತರ ಬೇಡಿಕೆಗಳು: “ಕಾಳಗಿ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕು. ದನಕರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ಆದ್ದರಿಂದ ಕಣಿಕೆ ಗೋಶಾಲೆ ತೆರೆಯಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ ಬದುಕಿಗೆ ನೆರವಾಗಬೇಕು. ಜೊತೆಗೆ ಮೋಡ ಬಿತ್ತನೆ ಮಾಡುವ ಕುರಿತು ಚಿಂತಿಸಬೇಕಿದೆ. ಬೆಳೆ ಕಟಾವು, ವಿಮಾ ಪರಿಹಾರವಾಗಿ ೩೦೦ ಕೋಟಿ ಹಣ ಬಿಡುಗಡೆ ಮಾಡಬೇಕು” ಎಂದು ರೈತ ಸಂಘ ಬೇಡಿಕೆ ಇಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ದೌರ್ಜನ್ಯ ತಡೆ ಕಾಯ್ದೆ ಕುರಿತು ಜಾಗೃತಿ: ಕಾನೂನು ಅರಿವು ಬೆಳೆಸಿಕೊಳ್ಳಲು ಕರೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ...

6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್

ರಾಷ್ಟ್ರಪತಿ ಭವನವು ಸೋಮವಾರ ಹೊರಡಿಸಿದ ಅಧಿಕೃತ ಪ್ರಕಟಣೆಯ ಪ್ರಕಾರ, ರಾಷ್ಟ್ರಪತಿಯವರು ಕರ್ನಾಟಕ...

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...