ಕಲ್ಯಾಣ ಕರ್ನಾಟಕ | 4,904 ಅಂಗನವಾಡಿ ಕೇಂದ್ರಕ್ಕಿಲ್ಲ ಸ್ವಂತ ಕಟ್ಟಡ: ಅಡುಗೆ ಕೋಣೆ, ಶೌಚಾಲಯ ಮರೀಚಿಕೆ

Date:

ಮಕ್ಕಳ ಸಮಗ್ರ ಬೆಳವಣಿಗೆ, ಪೌಷ್ಟಿಕತೆ, ಆರೋಗ್ಯ ಮತ್ತು ಪೂರ್ವಪ್ರಾಥಮಿಕ ಶಿಕ್ಷಣದಲ್ಲಿ ಪ್ರಮುಖ ಪಾತ್ರ ವಹಿಸುವ ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡ ಸೇರಿ ಇತರೆ ಮೂಲ ಸೌಲಭ್ಯಗಳ ಕೊರತೆ ಎದುರಿಸುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ 4,904 ಅಂಗನವಾಡಿ ಕೇಂದ್ರಗಳಿಗೆ ಇದುವರೆಗೂ ಸ್ವಂತ ಕಟ್ಟಡ ಭಾಗ್ಯ ದಕ್ಕಿಲ್ಲ.

- Advertisement -

ಮಕ್ಕಳ ಶೈಕ್ಷಣಿಕ ಕಲಿಕೆಗೆ ಭದ್ರ ಬುನಾದಿ ಹಾಕುತ್ತಿರುವ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಒಟ್ಟು 14,804 ಅಂಗನವಾಡಿ ಕೇಂದ್ರಗಳ ಪೈಕಿ 9,900 ಕೇಂದ್ರಗಳು ಸ್ವಂತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಉಳಿದವು ಸರ್ಕಾರಿ ಶಾಲೆ, ಗ್ರಾಪಂ ಸಮುದಾಯ ಭವನ, ಬಾಡಿಗೆ ಸೇರಿ ಇತರೆ ಕಟ್ಟಡಗಳಲ್ಲಿ ಕೇಂದ್ರಗಳು ಕಾರ್ಯಭಾರ ಮಾಡುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಸಮಗ್ರ ಶಿಶು ಯೋಜನೆಯಡಿ ಆರಂಭಗೊಂಡು 6 ತಿಂಗಳಿಂದ 6 ವರ್ಷದ ಒಳಗಿನ ಮಕ್ಕಳಿಗೆ ದಾಖಲಾತಿ ಮಾಡಿಕೊಳ್ಳಲಾಗುತ್ತದೆ. ಅಲ್ಲದೆ ಮಕ್ಕಳಿಗೆ ಹಾಗೂ ಗರ್ಭಿಣಿ ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ ಒದಗಿಸುವ ಮೂಲಕ ಅಪೌಷ್ಟಿಕತೆಯನ್ನು ಕಡಿಮೆ ಮಾಡಲು ಅಂಗನವಾಡಿ ಕೇಂದ್ರಗಳ ಪಾತ್ರ ಪ್ರಮುಖವಾಗಿದೆ.

ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಾಲವಾಡಿಗಳಲ್ಲಿ ಮಕ್ಕಳ ದಾಖಲಾತಿ ಇದ್ದು, ಸ್ವಂತ ಕಟ್ಟಡ ಇಲ್ಲದಿರುವುದು ಸೇರಿದಂತೆ ನೀರು, ಶೌಚಾಲಯ, ಪ್ರತ್ಯೇಕ ಅಡುಗೆ ಕೋಣೆ, ಆಟದ ಮೈದಾನ ಸೇರಿ ಹಲವು ಕೊರತೆಗಳ ನಡುವೆಯೂ ಪೋಷಕರು ತಮ್ಮ ಪುಟಾಣಿಗಳನ್ನು ಜೀವ ಭಯದಲ್ಲೇ ಅಂಗನವಾಡಿಗಳಿಗೆ ಸೇರಿಸುತ್ತಿದ್ದಾರೆ.

ವಿಬಿ-ಜಿ ರಾಮ್‌ ಜಿ, ಸೇರಿದಂತೆ ನಾನಾ ಸರ್ಕಾರದ ವಿವಿಧ ಯೋಜನೆಯಡಿ ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಅನುದಾನ ಲಭ್ಯವಿದೆ. ಆದರೆ ಕಟ್ಟಡ ನಿರ್ಮಾಣಕ್ಕೆ ನಿವೇಶನ ಹುಡುಕುವುದೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇನ್ನು ನಗರ ಪ್ರದೇಶಗಳಲ್ಲಿ ಸೂರು ಸಿಗುವುದು ಇನ್ನೂ ಕಠಿಣ. ಹೀಗಾಗಿ ಅನೇಕ ಅಂಗನವಾಡಿ ಕೇಂದ್ರಗಳು ಶಾಶ್ವತವಾಗಿ ಬಾಡಿಗೆಯಲ್ಲಿಯೇ ಕಾರ್ಯನಿರ್ವಹಿಸಬೇಕಾದ ದುಸ್ಥಿತಿ ಇದೆ.

ಕೆಲವೆಡೆ ಸರ್ಕಾರ ವಿವಿಧ ಯೋಜನೆಯಡಿ ಅಂಗನವಾಡಿ ಕಟ್ಟಡಗಳ ಮಂಜೂರಾತಿ ಮಾಡಿದರೂ ಅವು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದೆ ಕಾಮಗಾರಿ ಅರ್ಧಕ್ಕೆ ನಿಂತ ಉದಾಹರಣೆಗಳೂ ಇವೆ. ಈ ನಡುವೆ ಬಾಡಿಗೆ, ಸರ್ಕಾರಿ ಶಾಲೆ, ಪಂಚಾಯತ್‌ ಕಟ್ಟಡ, ಸಮುದಾಯ ಭವನಗಳಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳು ಕನಿಷ್ಠ ಮೂಲ ಸೌಕರ್ಯಗಳಿಲ್ಲದೆ ಸೊರಗಿವೆ.

ಸ್ವಂತ ಕಟ್ಟಡ ಇರುವ ಅಂಗನವಾಡಿ ಕೇಂದ್ರಗಳಿಗೆ ನೀರು, ಶೌಚಾಲಯ ಸೇರಿದಂತೆ ಆಟದ ಮೈದಾನ ಇಲ್ಲದಿರುವುದು ಇದೆ. ಅಲ್ಲದೆ ಸಮುದಾಯ ಭವನ, ಸರ್ಕಾರಿ ಶಾಲೆ ಇತರೆ ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಲವು ಅಂಗನವಾಡಿಗಳಿಗೆ ಪ್ರತ್ಯೇಕ ಅಡುಗೆ ಕೋಣೆಗಳಿಲ್ಲದ ಮಕ್ಕಳಿಗೆ ಪಾಠ-ಪ್ರವಚನ ಬೋಧಿಸುವ ಕೋಣೆಯಲ್ಲಿಯೇ ಸಿಲಿಂಡರ್‌ ಮೇಲೆ ಅಡುಗೆ ಸಿದ್ಧಪಡಿಸುವುದು ಸಾಮಾನ್ಯ ಎನ್ನುವಂತಿದೆ.

ನಗರ ಪ್ರದೇಶಗಳಲ್ಲಿ ಮಕ್ಕಳನ್ನು ಆಕರ್ಷಿಸಲು ಹೆಜ್ಜೆಗೊಂದು ಖಾಸಗಿ ಪ್ಲೇ ಹೋಂ, ನರ್ಸರಿ ಶಾಲೆಗಳು ತಲೆಯೆತ್ತಿವೆ. ಇದರಿಂದ ಮೂಲ ಸೌಕರ್ಯಗಳಿಲ್ಲದೆ ಬಾಡಿಗೆ ಮನೆಗಳಲ್ಲಿ ನಡೆಯುತ್ತಿರುವ ಅಂಗನವಾಡಿಗಳತ್ತ ಬಹುತೇಕ ಪಾಲಕರು ಮುಖ ಮಾಡುತ್ತಿಲ್ಲ. ಇನ್ನು ಗ್ರಾಮೀಣ ಭಾಗದಲ್ಲಿಯೂ ಖಾಸಗಿ ಶಾಲೆಗಳ ಹಲವು ತಂತ್ರಗಾರಿಕೆಗಳು ಪೋಷಕರನ್ನು ಆಕರ್ಷಿಸುತ್ತಿವೆ. ಹೀಗಾಗಿ 1-2 ವರ್ಷ ಪೂರೈಸುತ್ತಲೇ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ದಾಖಲಿಸುವವರ ಸಂಖ್ಯೆ ಹೆಚ್ಚಳವಾಗುತ್ತಿದೆ.

ಅಂಗನವಾಡಿಗಳ ದಾಖಲಾತಿ ಮತ್ತು ಹಾಜರಿ ಸಂಖ್ಯೆಯಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬರುತ್ತಿದೆ. ಒಂದು ಅಂಗನವಾಡಿ ಕೇಂದ್ರದಲ್ಲಿ 20-30ರಷ್ಟು ಮಕ್ಕಳ ದಾಖಲಾಗಿದ್ದರೂ ನಿತ್ಯ ಬರುವ ಮಕ್ಕಳ ಸಂಖ್ಯೆ 10 ಗಡಿ ದಾಟುತ್ತಿಲ್ಲ. ಕೆಲವೆಡೆ ಮಕ್ಕಳ ಸಂಖ್ಯೆಯ ಜೊತೆಗೆ ಮಕ್ಕಳ ಕಲಿಕೆಯಿಂದಾಗಿ ಗಮನ ಸೆಳೆಯುತ್ತಿವೆ ಎಂಬುದು ಅಲ್ಲಗಳೆಯುವಂತಿಲ್ಲ.

WhatsApp Image 2026 09 09 at 2.21.07 PM

ಪ್ರತಿಯೊಂದು ಅಂಗನವಾಡಿಗೆ ಸ್ವಂತ ಕಟ್ಟಡ, ನೀರು, ಶೌಚಾಲಯ, ವಿದ್ಯುತ್‌, ಆಟದ ಮೈದಾನ, ಕಾಂಪೌಂಡ್‌ ಸೇರಿದಂತೆ ಮಕ್ಕಳಿಗೆ ಆಟೋಪಕರಣ, ಪೀಠೋಪಕರಣ ಇರಬೇಕು. ಆದರೆ, ಇಂತಹ ಕೊರತೆಗಳ ಮಧ್ಯೆ ಬಾಲ್ಯದ ಮಕ್ಕಳ ಕಲಿಕೆ ಮುಂದುವರೆದಿದೆ. ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿದಂತೆ ಹಲವು ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಯೋಜನೆಯಡಿ ಕೋಟ್ಯಾಂತರ ಅನುದಾನ ಬಳಕೆಯಾದರೂ ಮಕ್ಕಳ ಪಾಲನೆ-ಪೋಷಣೆಗೆ ಕಾಳಜಿ ತೋರದೇ ಇರುವುದು ವಿಪರ್ಯಾಸವೇ ಸರಿ.

ಹೊಸ ಅಂಗನವಾಡಿ ಕೇಂದ್ರಗಳ ಮಂಜೂರಾತಿಯು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಟ್ಟಿದ್ದು, ಕೇಂದ್ರ ಸರ್ಕಾರವು ಅನುಮೋದನೆ ನೀಡಿದಲ್ಲಿ ಹೆಚ್ಚುವರಿ ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡಬಹುದಾಗಿದೆ ಎಂದು ಇಲಾಖೆ ಹೇಳುತ್ತದೆ.

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳು ಖಾಲಿ

ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳು ಖಾಲಿ ಇರುವುದರಿಂದ ಮಕ್ಕಳ ಕಲಿಕೆ ಮತ್ತು ಆರೈಕೆ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ. ಕೆಲವೆಡೆ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಆಟ-ಪಾಠದ ಜೊತೆಗೆ ಅಡುಗೆ ಹಾಗೂ ಇತರೆ ಕೆಲಸಗಳನ್ನೂ ನಿರ್ವಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರತಿ ಅಂಗನವಾಡಿ ಕೇಂದ್ರದಲ್ಲಿ ಒಬ್ಬ ಕಾರ್ಯಕರ್ತೆ ಹಾಗೂ ಒಬ್ಬ ಸಹಾಯಕಿ ಇರಬೇಕಾಗಿದ್ದು, ಸಿಬ್ಬಂದಿ ಕೊರತೆಯಿಂದಾಗಿ ಹಲವೆಡೆ ಒಬ್ಬರೇ ಕಾರ್ಯನಿರ್ವಹಿಸುತ್ತಿದ್ದಾರೆ. ಕಾರ್ಯಕರ್ತೆ ಅಥವಾ ಸಹಾಯಕಿಯರು ಇಲಾಖೆಯ ಸಭೆ, ತರಬೇತಿ ಹಾಗೂ ಇತರೆ ಕಾರ್ಯಕ್ರಮಗಳಿಗೆ ತೆರಳಬೇಕಾದ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಬೇಕಾದ ಅನಿವಾರ್ಯತೆ ಎದುರಾಗುತ್ತಿದೆ.

WhatsApp Image 2026 09 09 at 3.27.05 PM

ಇನ್ನು ಕಾರ್ಯಕರ್ತೆಯರಿಲ್ಲದ ಕೇಂದ್ರಗಳಲ್ಲಿ ಸಹಾಯಕಿಯರೇ ಮಕ್ಕಳಿಗೆ ಆಹಾರ ಸಿದ್ಧಪಡಿಸುವುದರ ಜೊತೆಗೆ ಮಕ್ಕಳ ಆಟ-ಪಾಠ ಹಾಗೂ ಆರೈಕೆಯ ಜವಾಬ್ದಾರಿಯನ್ನೂ ಹೊರುತ್ತಿದ್ದಾರೆ. ಇದರಿಂದ ಮಕ್ಕಳಿಗೆ ಅಗತ್ಯವಾದ ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣ ಹಾಗೂ ಪೌಷ್ಟಿಕ ಆರೈಕೆ ಒದಗಿಸುವಲ್ಲಿ ತೊಂದರೆಯಾಗುತ್ತಿದೆ. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಿ, ಪ್ರತಿಯೊಂದು ಕೇಂದ್ರದಲ್ಲೂ ಅಗತ್ಯ ಸಿಬ್ಬಂದಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಪೋಷಕರ ಆಗ್ರಹವಾಗಿದೆ.

ಹುದ್ದೆ ಭರ್ತಿ ಪ್ರಕ್ರಿಯೆ ಹೇಗೆ?

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಖಾಲಿ ಹುದ್ದೆಗಳ ಭರ್ತಿಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ, ನಿಗದಿತ ಕಾಲಮಿತಿಯೊಳಗೆ ನಿಯಮಾನುಸಾರ ಪ್ರತಿ ಜಿಲ್ಲೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ₹12,000ರಿಂದ ₹12,500ರವರೆಗೆ ಹಾಗೂ ಸಹಾಯಕಿಯರಿಗೆ ₹7,000ರಿಂದ ₹7,500ರವರೆಗೆ ಅವರ ಸೇವಾವಧಿಯ ಆಧಾರದ ಮೇಲೆ ಗೌರವಧನವನ್ನು ಹೆಚ್ಚಿಸಿ ಪಾವತಿಸಲಾಗುತ್ತಿದೆ.

ಇದನ್ನೂ ಓದಿ : ವಚನ ಕಲ್ಯಾಣ | ಕಲ್ಯಾಣವಿಲ್ಲದ ಕಾರಣ ಕೈಲಾಸವಿಲ್ಲವೆನಗೆ, ಬಸವಾ!

2025-26ನೇ ಸಾಲಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ₹1,000 ಹಾಗೂ ಸಹಾಯಕಿಯರಿಗೆ ತಲಾ ₹750ರಷ್ಟು ಗೌರವಧನವನ್ನು ಹೆಚ್ಚಿಸಲಾಗಿದೆ. ದೇಶದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಹೆಚ್ಚಿನ ಗೌರವಧನ ಪಾವತಿಸುವ ರಾಜ್ಯಗಳ ಪೈಕಿ ಕರ್ನಾಟಕವು ನಾಲ್ಕನೇ ಸ್ಥಾನದಲ್ಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಕ್ಕಳಿಗೆ ಇಂಟರ್ನೆಟ್‌ ನಿರ್ಬಂಧ | ಸ್ವಾತಂತ್ರ್ಯಕ್ಕೆ ಕಡಿವಾಣವಲ್ಲ, ಡಿಜಿಟಲ್ ಜಗತ್ತಿಗೆ ಹೊಣೆಗಾರಿಕೆಯ ಚೌಕಟ್ಟು ಅಗತ್ಯ

ಇಂಟರ್ನೆಟ್ ಪ್ರವೇಶವನ್ನು ಕೇವಲ ತಾಂತ್ರಿಕ ಸೌಲಭ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ. ಇದೇ ಡಿಜಿಟಲ್...

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...