ಕಲಬುರಗಿ | ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ಎಸಿಸಿ ಸಿಮೆಂಟ್‌ ಕಾರ್ಖಾನೆ ಇಂಜಿನಿಯರ್ ಆತ್ಮಹತ್ಯೆ

Date:

ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಎಸಿಸಿ ಸಿಮೆಂಟ್​ ಕಾರ್ಖಾನೆಯ ಇಂಜಿನಿಯರ್​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.

- Advertisement -

ವಾಡಿ ಪಟ್ಟಣದಲ್ಲಿರುವ ವಸತಿ ಗೃಹದಲ್ಲಿ ರಮೇಶ್​​ ಪವಾರ್​​(47) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ರಮೇಶ ಪವಾರ್‌ ಅವರು ಚಿತ್ತಾಪುರ ಕ್ಷೇತ್ರದ ಮಾಜಿ ಶಾಸಕ ದಿವಂಗತ ವಾಲ್ಮೀಕಿ ನಾಯಕ್ ಅವರ ಅಳಿಯನಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಅದಾನಿ ಗ್ರೂಪ್ ಮಾಲೀಕತ್ವದಲ್ಲಿರುವ ಎಸಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ಕಳೆದ 26 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ರಮೇಶ ಘಟಕದಲ್ಲಿ ಇಂಜಿನಿಯರ್ ಆಗಿದ್ದರು. ಕಾರ್ಖಾನೆಯಲ್ಲಿ ನಡೆಯುತ್ತಿರುವ ಅಕ್ರಮದ ಕುರಿತು ಸತ್ಯ ಹೇಳುವುದು, ಕಾರ್ಮಿಕರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಕಾರಣಕ್ಕೆ ಕಾರ್ಖಾನೆ ಆಡಳಿತ ಮಂಡಳಿಯವರು ಕಿರುಕುಳ ನೀಡುತ್ತಿದ್ದರು, ಇದರಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಮೂಲಗಳಿಂದ ತಿಳಿದು ಬಂದಿದೆ.

ಸ್ವಯಂ ನಿವೃತ್ತಿ ಘೋಷಿಸಬೇಕು, ಇಲ್ಲದಿದ್ದರೆ ಕೆಲಸದಿಂದ ತೆಗೆಯಲಾಗುವುದು ಎಂದು ಆಡಳಿತ ಮಂಡಳಿಯವರು ಒತ್ತಡ ಹಾಕಿದ್ದರು. ಇದರಿಂದ ಕೆಲಸ ಕಳೆದುಕೊಳ್ಳುವ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಆತ್ಮಹತ್ಯೆಗೂ ಮುನ್ನ ವಿಡಿಯೋ ರೆಕಾರ್ಡ್​ ಮಾಡಿದ್ದು, ಸಾವಿಗೆ ಕಾರಣರಾದ ​​​ಕಾರ್ಖಾನೆಯ ಹಿರಿಯ ಅಧಿಕಾರಿಗಳ ಹೆಸರು ಉಲ್ಲೇಖಿಸಿ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ : ಸಚಿವ ಪ್ರಿಯಾಂಕ್‌ ಖರ್ಗೆ

ಈ ಬಗ್ಗೆ ವಾಡಿ ಪೊಲೀಸ್ ಠಾಣೆ ಪಿಎಸ್‌ಐ ಕೆ.ತಿರುಮಲೇಶ ಈದಿನ.ಕಾಮ್‌ ದೊಂದಿಗೆ ಮಾತನಾಡಿ, “ಎಸಿಸಿ ಸಿಮೆಂಟ್‌ ಕಾರ್ಖಾನೆ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇವೆ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...