ಕಲಬುರಗಿ | ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ವಿರುದ್ಧ ಮಹರ್ಷಿ ಶಂಬೂಕರ ಸ್ಮರಣೆ ಕಾರ್ಯಕ್ರಮ

Date:

ಜ.22ರಂದು ಅಯೋಧ್ಯೆಯಲ್ಲಿ ನಡೆಸಲಾಗುತ್ತಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ವಿರೋಧಿಸಿ ಅದೇ ದಿನ ಬೆಳಗ್ಗೆ 11.30ಕ್ಕೆ ಕಲಬುರಗಿಯ ಜಗತ್ ವೃತ್ತದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಶೂದ್ರ ಸಮುದಾಯದ ಮಹರ್ಷಿ ಶಂಬೂಕ ಮುನಿಗೆ ಗೌರವ ಸಮರ್ಪಣೆ ಮಾಡಲಾಗುವುದು ಎಂದು ಡಿ.ಎಸ್.ಎಸ್ ರಾಜ್ಯ ಸಂಚಾಲಕ ಅರ್ಜುನ ಭದ್ರೆ ಹೇಳಿದರು.

ಕಲಬುರಗಿ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ರಾಮ ಮಂದಿರ ನಿರ್ಮಾಣ ಹಾಗೂ ಶ್ರೀರಾಮನ ಹೆಸರಿನಲ್ಲಿ ದೇಶಾದ್ಯಂತ ಬಿಜೆಪಿ ಮತ್ತು ಆರ್.ಎಸ್.ಎಸ್ ನಡೆಸುತ್ತಿರುವ ರಾಜಕಾರಣ ವರ್ಣಾಶ್ರಮ ವ್ಯವಸ್ಥೆ ಗಟ್ಟಿಗೊಳಿಸುವ ಸಂಚಾಗಿದೆ. ರಾಮಾಯಣದಲ್ಲಿ ಶೂದ್ರ ಶಂಬೂಕನ ಹತ್ಯೆಗೈದು ಆತನ ರಕ್ತ ಕುಡಿದು ಸಂಭ್ರಮಿಸಿದ ಘಟನೆಯ ಪ್ರಸ್ತಾಪವಿದೆ. ಈ ವಿದ್ಯಮಾನವು ವರ್ಣಾಶ್ರಮ ವ್ಯವಸ್ಥೆಯಲ್ಲಿ ದಲಿತರು ಸೇರಿದಂತೆ ಶೂದ್ರರಿಗೆ ಬದುಕುವ ಹಕ್ಕಿಲ್ಲ ಎಂಬುದು ಸಾಬೀತುಪಡಿಸುವಂತಿದೆ” ಎಂದರು.

“75 ವರ್ಷಗಳ ಹಿಂದೆ ತಮಿಳುನಾಡಿನಲ್ಲಿ ಪ್ರಖರ ವಿಚಾರವಾದಿ ಪೆರಿಯಾರ್ ಅವರು ರಾಮಾಯಣ ವಿರೋಧಿ ಚಳವಳಿ ನಡೆಸಿದ್ದು ಇಂದಿಗೂ ಪ್ರಸ್ತುತ ಎನಿಸುವಂತಿದೆ. ಪೆರಿಯಾರ್ ಹೋರಾಟವನ್ನು ಮುಂದುವರೆಸುವ ಜವಾಬ್ದಾರಿಯಾಗಿ ಜ.22ರಂದು ಮಹರ್ಷಿ ಶಂಬೂಕರ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆದಿವಾಸಿ ಜನಾಂಗಕ್ಕೆ ಸೇರಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ಬಿಜೆಪಿ ತನ್ನ ವರ್ಣಾಶ್ರಮ ವ್ಯವಸ್ಥೆಯ ಮೇಲಿನ ಪ್ರೀತಿ ಸಾಬೀತುಪಡಿಸುತ್ತಿದೆ. ರಾಮ ಮಂದಿರ ನಿರ್ಮಾಣ ಕಾರ್ಯ ಅಪೂರ್ಣವಾಗಿದ್ದರೂ ತುರ್ತಾಗಿ ಮಂದಿರ ಉದ್ಘಾಟಿಸಲಾಗುತ್ತಿದೆ. ಇಂತಹ ಅಪಕೃತ್ಯ ಮಾಡದಂತೆ ದೇಶದ ನಾಲ್ಕು ಶಂಕರಾಚಾರ್ಯರ ಪೀಠಗಳು ಎಚ್ಚರಿಕೆ ನೀಡಿದ್ದೂ ಅಲ್ಲದೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದಿರುವುದು ಬಿಜೆಪಿಯ ರಾಜಕೀಯ ಲೆಕ್ಕಾಚಾರಗಳಿಗೆ ಕನ್ನಡಿ ಹಿಡಿದಂತಿದೆ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಅನಂತಕುಮಾರ್‌ ಹೆಗಡೆ ಹುಚ್ಚ, ವಿಜಯೇಂದ್ರ ಹುಚ್ಚಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಿ: ಸಚಿವ ಶಿವರಾಜ್ ತಂಗಡಗಿ

ಪತ್ರಿಕಾಗೋಷ್ಠಿಯಲ್ಲಿ ಮಹಾಂತೇಶ ಬಡದಾಳ, ಮಹೇಶ್ ಕೋಕಿಲೆ, ಸೂರ್ಯಕಾಂತ ಆಜಾದ್ ಪುರ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಬಸ್‌ಗಳಿಲ್ಲದೇ ಪರದಾಟ; ವಿದ್ಯಾರ್ಥಿಗಳ ಪ್ರತಿಭಟನೆ

ಬಸ್ ಅವಾಂತರದಿಂದ ಬೇಸತ್ತ ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ....

ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

ಬೆಳಗಿನ ಜನದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ...

ವಿಪಕ್ಷ ನಾಯಕನ ಹುದ್ದೆಗೆ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್

ವಿಧಾನಸಭೆ ವಿಪಕ್ಷ ನಾಯಕನ ಹುದ್ದೆಗೆ ಆರ್ ಅಶೋಕ್ ನಾಲಾಯಕ್. ಬೆಂಗಳೂರಿನ ಚಾಮರಾಜಪೇಟೆಯಲ್ಲಿ...

ಶಿವಮೊಗ್ಗ | ಫೆ.24ರಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ...