ಕಲಬುರಗಿಯಲ್ಲಿ ʼಪ್ರಬುದ್ಧ ಅಕಾಡೆಮಿʼ ಉದ್ಘಾಟನೆ

Date:

ಕಲ್ಯಾಣ ಕರ್ನಾಟಕ ಭಾಗದ ಪ್ರತಿಭಾವಂತ ಅಭ್ಯರ್ಥಿಗಳಿಗಳು ಐಎಎಸ್, ಐಪಿಎಸ್ ಹಾಗೂ ಕೆಎಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾಗುವ ಅಗತ್ಯ ತರಬೇತಿ‌ ನೀಡಬೇಕು ಎನ್ನುವ ಉದ್ದೇಶದಿಂದ ಪ್ರಬುದ್ಧ ಅಕಾಡೆಮಿ ಕೇಂದ್ರ ನಿರ್ಮಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರಿಯಾಂಕ್‌ ಖರ್ಗೆ ಹೇಳಿದರು.

- Advertisement -

ಕಲಬುರಗಿ ನಗರದ ಹೊರವಲಯದ ವಾಜಪೇಯಿ ಬಡಾವಣೆಯಲ್ಲಿ ಸುಮಾರು 10,000 ಚದುರ ಅಡಿಯಲ್ಲಿ ₹30 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪ್ರಬುದ್ಧ ಪರೀಕ್ಷಾ ಪೂರ್ವ ತರಬೇತಿ ಅಕಾಡೆಮಿ ಕೇಂದ್ರವನ್ನು ಭಾನುವಾರ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ʼಈ ಹಿಂದೆ ನಾನು ಸಮಾಜ ಕಲ್ಯಾಣ ಸಚಿವನಾಗಿದ್ದಾಗ ಈ ಕೇಂದ್ರಕ್ಕೆ ಯೋಜನೆ ರೂಪಿಸಲಾಗಿತ್ತು. ಆದರೆ ನಮ್ಮ ಸರ್ಕಾರ ಅಧಿಕಾರ ಕಳೆದುಕೊಂಡಿತ್ತು. ಆ ನಂತರ ಬಂದ ಸರ್ಕಾರ ಕೆಲಸ ಮಾಡಲೇ ಇಲ್ಲ. ಮಕ್ಕಳ ವಿದ್ಯಾಭ್ಯಾಸ, ಉದ್ಯೋಗ ಹಾಗೂ ಭವಿಷ್ಯದ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ನಮ್ಮ ನಂತರ ಅಧಿಕಾರಕ್ಕೆ ಬಂದ ಸರ್ಕಾರ ಈ ಕೇಂದ್ರದ ಕಾಮಗಾರಿ ಕೈಗೊಳ್ಳಲಿಲ್ಲ. ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ. ಪ್ರಬುದ್ಧ ಅಕಾಡೆಮಿಯನ್ನು ನಿರ್ಮಿಸಿ ನಾವೇ ಉದ್ಘಾಟಿಸಿದ್ದೇವೆ. ಇದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ನುಡಿದಂತೆ ನಡೆಯುತ್ತಿದ್ದೇವೆʼ ಎಂದು ಹೇಳಿದರು.

ʼಅಕಾಡೆಮಿ ಕೇವಲ ಕಟ್ಟಡವಲ್ಲ. ಇದರಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳ ಭವಿಷ್ಯ ಅಡಗಿದೆ. ಅವರ ಕನಸುಗಳು ಇಲ್ಲಿ ಸಾಕಾರಗೊಳ್ಳಲಿವೆ. ಈ ಹಿಂದೆ ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆದಾಗ ಅದರಿಂದ ತೊಂದರೆಗೊಳಗಾದ ವಿದ್ಯಾರ್ಥಿಗಳ ಒಂದು ಹೊತ್ತಿನ ಊಟಕ್ಕೆ ಪರದಾಡುವಂತಾಗಿತ್ತು. ತರಬೇತಿ ಪಡೆಯಲು ಬೆಂಗಳೂರಿಗೆ ಬಂದಿದ್ದ ವಿದ್ಯಾರ್ಥಿಗಳು ʼಮೂರು ನಾಲ್ಕು ಅನ್ನ ಹಾಕುʼ ಎಂದು ವಾಟ್ಸಪ್ ಗ್ರೂಪ್ ಮಾಡಿಕೊಂಡು ಬೆಂಗಳೂರಿನಲ್ಲಿ ಎಲ್ಲೆಲ್ಲಿ ಉಚಿತ ಊಟ ಸಿಗುತ್ತದೆ ಎಂದು ಮಾಹಿತಿ ಹಂಚಿಕೊಂಡು ಛತ್ರಗಳ ವಿವರ ಹಾಕಿ ಅಲ್ಲಿ ಊಟ ಮಾಡಿಕೊಂಡು ಬರುತ್ತಿದ್ದರು. ಆ ದೃಶ್ಯ ನನ್ನ ಕಣ್ಣ‌ಮುಂದೆ ಬಂದು, ಕಣ್ಣೀರು ಬರುವಂತಾಗುತ್ತಿತ್ತು. ಅಂತಹ ಯಾವುದೇ ಸ್ಥಿತಿ ನಮ್ಮ ಭಾಗದ ಮಕ್ಕಳಿಗೆ ಬಾರದಿರಲಿ ಎಂದು ಪ್ರಬುದ್ಧ ಅಕಾಡೆಮಿ ಕೇಂದ್ರ ಸ್ಥಾಪನೆಗೆ ಒತ್ತು ನೀಡಿ, ಇಂದು ಕಾರ್ಯರೂಪಕ್ಕೆ ತರಲಾಗಿದೆʼ ಎಂದು ತಿಳಿಸಿದರು.

ಪ್ರಬುದ್ಧ ಅಕಾಡೆಮಿ ಒಂದು ಉತ್ಕೃಷ್ಟ ತರಬೇತಿ ಕೇಂದ್ರವಾಗಿ ಬಲಗೊಳ್ಳಬೇಕು. ಈ ಭಾಗದ ಐಎಎಸ್ ಅಧಿಕಾರಿಗಳು ಇಲ್ಲಿನ ಅಭ್ಯರ್ಥಿಗಳಿಗೆ ಪಾಠ ಮಾಡಲು ಮುಂದೆ ಬರಬೇಕು. ಅದಕ್ಕೆ ಅನುಕೂಲವಾಗುವಂತೆ ರೋಸ್ಟರ್ ಪದ್ದತಿ ರೂಪಿಸಬೇಕು. ಅಕಾಡೆಮಿಗೆ ಅಭ್ಯರ್ಥಿಗಳು ಬಂದು ಹೋಗಲು ಕೆಕೆಆರ್‌ಟಿಸಿ ವತಿಯಿಂದ ಎರಡು ನಗರ ಸಾರಿಗೆ ಸೇವೆಯನ್ನು ಇಂದಿನಿಂದಲೇ ಪ್ರಾರಂಭಿಸಲಾಗಿದೆ. ಜೊತೆಗೆ ನಿವೃತ್ತ ಪ್ರೊಫೆಸರ್ ಗಳು ಕೂಡಾ ಇಲ್ಲಿನ ಅಭ್ಯರ್ಥಿಗಳಿಗೆ ಉಚಿತ ತರಬೇತಿ ನೀಡಲು ಮುಂದೆ ಬಂದಿದ್ದಾರೆ. ಈಗಾಗಲೇ 10,000 ಅಭ್ಯರ್ಥಿಗಳು ಕೆಇಎ ಮೂಲಕ ಪರೀಕ್ಷೆ ಎದುರಿಸಿದ್ದಾರೆ. ಅವರಲ್ಲಿ ಮೆರಿಟ್ ಆಧಾರದ ಮೇಲೆ 500 ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ತರಬೇತಿ ನೀಡಲಾಗುತ್ತದೆʼ ಎಂದರು.

ಇದನ್ನೂ ಓದಿ : ಬೀದರ್‌ | ʼವಿಬಿ- ಜಿ ರಾಮ್‌ ಜಿʼ ಕರಾಳ ಕಾಯ್ದೆ ಹಿಂಪಡೆಯಲು ದೇಶಾದ್ಯಂತ ಆಂದೋಲನ : ಸಚಿವ ಈಶ್ವರ ಖಂಡ್ರೆ

ಸಮಾರಂಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್‌, ಶಾಸಕರಾದ ಎಂ.ವೈ.ಪಾಟೀಲ್‌, ಅಲ್ಲಮಪ್ರಭು ಪಾಟೀಲ್‌, ವಿಧಾನ ಪರಿಷತ್‌ ಸದಸ್ಯರಾದ ತಿಪ್ಪಣಪ್ಪ ಕಮಕನೂರ ಜಗದೇವ ಗುತ್ತೇದಾರ್‌, ಜಿಲ್ಲಾಧಿಕಾರಿ ಪೌಜಿಯಾ ತರನ್ನುಮ್‌ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...

ಕಲಬುರಗಿ | ಬೆಂಬಲ ಬೆಲೆಯಲ್ಲಿ ಹೆಸರು ಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ: ಡಿ.19ರವರೆಗೆ ನೋಂದಣಿ

2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ...

ಕಲಬುರಗಿ | ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕೊಲೆ: ಪತ್ನಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ, ಕೃತ್ಯ...

ಕಲಬುರಗಿ | ಇಸ್ಪೀಟ್ ಜೂಜಾಟ: 5 ಮಂದಿ ಬಂಧನ; ₹2,040 ನಗದು ಜಪ್ತಿ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ...