ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

Date:

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು ಅಕ್ಟೋಬರ್ 30, 31 ಹಾಗೂ ನವೆಂಬರ್ 1ರಂದು ಕಲಬುರಗಿ ನಗರದ ಕರುಣೇಶ್ವರ ನಗರದಲ್ಲಿರುವ ಕೆಪಿಟಿಸಿಎಲ್ ಭವನದಲ್ಲಿ ನಡೆಯಲಿದೆ ಎಂದು ಸಂಘಟನೆಯ ಪದಾಧಿಕಾರಿಗಳು ತಿಳಿಸಿದ್ದಾರೆ.

- Advertisement -

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್‌ಎಫ್‌ಐ ರಾಜ್ಯ ಸಮಿತಿ ಹಾಗೂ ಕಲಬುರಗಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳು, “ದೇಶದ ಶಿಕ್ಷಣ ವ್ಯವಸ್ಥೆ ಖಾಸಗೀಕರಣ ಮತ್ತು ವ್ಯಾಪಾರೀಕರಣದ ಒತ್ತಡಕ್ಕೆ ಒಳಗಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಕೋಮುವಾದಿ ವಿಚಾರಗಳ ಪ್ರಭಾವವೂ ಹೆಚ್ಚುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ನಾಯಕತ್ವ ಗುಣ, ಸೃಜನಶೀಲತೆ ಹಾಗೂ ಸಾಮಾಜಿಕ ಅರಿವು ಬೆಳೆಸುವ ಉದ್ದೇಶದಿಂದ ಎಸ್‌ಎಫ್‌ಐ ನಿರಂತರವಾಗಿ ಶೈಕ್ಷಣಿಕ ಮತ್ತು ಸಂಘಟನಾತ್ಮಕ ಚಟುವಟಿಕೆಗಳನ್ನು ನಡೆಸುತ್ತಿದೆ. ‘ಅಭ್ಯಾಸ ಮತ್ತು ಹೋರಾಟ’ ಎಂಬ ಆಶಯದೊಂದಿಗೆ ವಿದ್ಯಾರ್ಥಿಗಳನ್ನು ಸಾಮಾಜಿಕ ಚಳವಳಿಗಳಲ್ಲಿ ತೊಡಗಿಸಿಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಮ್ಮೇಳನ ಮತ್ತು ಸಮಾವೇಶಗಳನ್ನು ಆಯೋಜಿಸುತ್ತಾ ಬಂದಿರುವ ಸಂಘಟನೆಯು ಇದೀಗ ಕಲಬುರಗಿಯಲ್ಲಿ ರಾಜ್ಯ ಸಮ್ಮೇಳನ ನಡೆಸಲು ಸಿದ್ಧತೆ ಮಾಡಿಕೊಂಡಿದೆ” ಎಂದು ತಿಳಿಸಿದರು.

ಸಮ್ಮೇಳನವನ್ನು ಎಸ್‌ಎಫ್‌ಐ ರಾಷ್ಟ್ರೀಯ ನಾಯಕಿ ಐಯಿಷಿ ಘೋಷ್ ಉದ್ಘಾಟಿಸಲಿದ್ದು, ಪ್ರಗತಿಪರ ಚಿತ್ರನಟ ಕಿಶೋರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸ್ವಾಗತ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

1006544153
ಜಾಹೀರಾತು

“ಸರ್ಕಾರಿ ಶಾಲಾ-ಕಾಲೇಜುಗಳಿಗೆ ಅಗತ್ಯ ಅನುದಾನ, ಮೂಲಸೌಕರ್ಯ ಹಾಗೂ ಶಿಕ್ಷಕರನ್ನು ಒದಗಿಸಬೇಕು. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಬೇಕು ಎಂಬುದು ಎಸ್‌ಎಫ್‌ಐ ಪ್ರಮುಖ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ಸಂಘಟನೆಯು ರಾಜ್ಯದಾದ್ಯಂತ ‘ಸ್ಕೂಲ್ ಬಚಾವೋ’ ಶೈಕ್ಷಣಿಕ ಜಾಥಾ ಹಾಗೂ ‘ಬೆಳಗಾವಿ ಚಲೋ’ ಹೋರಾಟಗಳನ್ನು ನಡೆಸಿದೆ. ಆದರೂ ಶಿಕ್ಷಕರ ನೇಮಕಾತಿ, ಅನುದಾನ ಮತ್ತು ಮೂಲಸೌಕರ್ಯ ಒದಗಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ” ಎಂದು ಆರೋಪಿಸಿದರು.

ಕೆಪಿಎಸ್ ಶಾಲೆಗಳ ಸ್ಥಾಪನೆಯ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳ ವ್ಯವಸ್ಥೆಯ ಮೇಲೆ ಪರಿಣಾಮ ಬೀರುವುದರ ಜತೆಗೆ, ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಪಡೆಯುವುದು ಕಷ್ಟವಾಗುತ್ತಿದೆ ಎಂದು ಆಕ್ಷೇಪಿಸಿದರು. ಸಾರ್ವಜನಿಕ ಶಿಕ್ಷಣದ ರಕ್ಷಣೆಗಾಗಿ ರಾಜ್ಯವ್ಯಾಪಿ ಹೋರಾಟ ರೂಪಿಸುವುದಾಗಿ ತಿಳಿಸಿದರು.

“ರಾಜ್ಯ ಸರ್ಕಾರ ವಿದ್ಯಾರ್ಥಿ ಚುನಾವಣೆಗಳನ್ನು ನಡೆಸುವುದಾಗಿ ಘೋಷಿಸಿದ್ದು, ಕೆಲವು ಕಾಲೇಜುಗಳಲ್ಲಿ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. ಆದರೆ ವಿದ್ಯಾರ್ಥಿ ಸಂಘಟನೆಗಳನ್ನು ಹೊರಗಿಟ್ಟು ಪ್ರತಿನಿಧಿಗಳ ಆಯ್ಕೆ ಪ್ರಕ್ರಿಯೆ ನಡೆಸುವುದು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿದೆ. ವಿದ್ಯಾರ್ಥಿಗಳಿಗೆ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ನೀಡಬೇಕು ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಟನೆಗಳ ಚುನಾವಣೆಗಳನ್ನು ನಡೆಸಬೇಕು” ಎಂದು ಒತ್ತಾಯಿಸಿದರು.

ವಿದ್ಯಾರ್ಥಿಗಳ ನಡುವೆ ಧರ್ಮ ಮತ್ತು ಜಾತಿಯ ಆಧಾರದಲ್ಲಿ ಭಿನ್ನಾಭಿಪ್ರಾಯ ಹಾಗೂ ಸಂಘರ್ಷಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯುತ್ತಿವೆ. ಹಿಜಾಬ್ ವಿವಾದದಂತಹ ಘಟನೆಗಳಿಂದ ಶಿಕ್ಷಣ ಸಂಸ್ಥೆಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗಿರುವುದನ್ನು ಉಲ್ಲೇಖಿಸಿದ ಅವರು, ವಿದ್ಯಾರ್ಥಿ-ಯುವಜನರಲ್ಲಿ ಪರಸ್ಪರ ಗೌರವ, ಸಹಬಾಳ್ವೆ ಮತ್ತು ಸೌಹಾರ್ದತೆಯನ್ನು ಬೆಳೆಸುವ ಅಗತ್ಯವಿದೆ. ಶಾಂತಿಯುತ ವಾತಾವರಣದಲ್ಲಿ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವಾಗುವುದರಿಂದ ಕೋಮುವಾದದ ವಿರುದ್ಧ ನಿರಂತರ ಹೋರಾಟ ನಡೆಸುವುದಾಗಿ ತಿಳಿಸಿದರು.

WhatsApp Image 2026 10 09 at 7.07.32 PM

ಸಂವಿಧಾನದ 371(ಜೆ) ಕಲಂ ಸಮರ್ಪಕವಾಗಿ ಜಾರಿಗೊಳಿಸಬೇಕು: ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಸಂವಿಧಾನದ 371(ಜೆ) ಕಲಂನಡಿ ದೊರೆತಿರುವ ಅವಕಾಶಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಪ್ರದೇಶದ ಅಭಿವೃದ್ಧಿ ಕೇವಲ ಹೆಸರಿನ ಬದಲಾವಣೆಗೆ ಸೀಮಿತವಾಗದೆ, ಶಿಕ್ಷಣಕ್ಕೆ ಹೆಚ್ಚಿನ ಅನುದಾನ, ವಿದ್ಯಾರ್ಥಿಗಳಿಗೆ ಸೂಕ್ತ ಸೌಲಭ್ಯಗಳು ಹಾಗೂ ಯುವಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮೂಲಕ ಸಾಕಾರಗೊಳ್ಳಬೇಕು ಎಂದು ಒತ್ತಾಯಿಸಿದರು.

371(ಜೆ) ಅಡಿಯಲ್ಲಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಮೀಸಲಾತಿ ಸೌಲಭ್ಯಗಳು ಸಮರ್ಪಕವಾಗಿ ಜಾರಿಯಾಗಬೇಕು. ಈ ಪ್ರದೇಶದ ಹಿಂದುಳಿದಿರುವಿಕೆಯನ್ನು ನಿವಾರಿಸಲು ಸರ್ಕಾರ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬೇಡಿಕೆಯನ್ನು ರಾಜ್ಯ ಸಮ್ಮೇಳನದಲ್ಲಿ ಪ್ರಮುಖವಾಗಿ ಮಂಡಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಪತ್ರಿಕಾಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಪ್ರೊ.ಆರ್.ಕೆ.ಹುಡಗಿ, ಎಸ್‌ಎಫ್‌ಐ ರಾಜ್ಯಾಧ್ಯಕ್ಷ ಶಿವಪ್ಪ ಎನ್. ಅಂಬ್ಲಿಕಲ್, ಪ್ರಗತಿಪರ ಚಿಂತಕಿ ಮೀನಾಕ್ಷಿ ಬಾಳಿ, ಸ್ವಾಗತ ಸಮಿತಿಯ ಉಪಾಧ್ಯಕ್ಷರಾದ ಮರಿಯಪ್ಪ ಹಳ್ಳಿ ಮತ್ತು ಮಹಮ್ಮದ್ ಅಫ್ಜಲ್, ಎಸ್‌ಎಫ್‌ಐ ರಾಜ್ಯ ಉಪಾಧ್ಯಕ್ಷರಾದ ದೊಡ್ಡಬಸವರಾಜ್ ಹಾಗೂ ಗಣೇಶ ರಾಠೋಡ್, ಜಿಲ್ಲಾ ಅಧ್ಯಕ್ಷೆ ಸುಜಾತಾ, ಜಿಲ್ಲಾ ಕಾರ್ಯದರ್ಶಿ ಇಮಾಮ್ ನದಾಫ್, ಮಾಜಿ ಜಿಲ್ಲಾ ಅಧ್ಯಕ್ಷ ಸರ್ವೇಶ್, ಪ್ರದೀಪ್ ಮ್ಯಾಗಡಿ ಹಾಗೂ ಬೃಂದಾ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅತ್ತು ಕರೆದು ಬೆದರಿಸಿ ರಚ್ಚೆ ಹಿಡಿದರೂ ಟ್ರಂಪ್’ಗೆ ಒಲಿಯಲಿಲ್ಲ ನೊಬೆಲ್ ಪುರಸ್ಕಾರ

ನೊಬೆಲ್ ಶಾಂತಿ ಪುರಸ್ಕಾರ ತಮಗೇ ಸಿಗಬೇಕೆಂದು ಪದೇ ಪದೇ ಒತ್ತಾಯಿಸುತ್ತಿದ್ದ ಅಮೆರಿಕ...

ಔರಾದ್ | ಶೋಷಿತ ಸಮುದಾಯಗಳ ರಾಜಕೀಯ ಜಾಗೃತಿಗೆ ಶ್ರಮಿಸಿದ ಕಾನ್ಶಿರಾಂ

ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ರಾಜಕೀಯ ಹಕ್ಕುಗಳಿಗಾಗಿ ಹೋರಾಟ ರೂಪಿಸಿ, ಬಹುಜನ...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ ಅಪರೂಪದ ಕಲಾವಿದ

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ...

ವಿಜಯಪುರ | ಅಕ್ಟೋಬರ್ 4ನೇ ವಾರದಲ್ಲಿ ನಶಾ ಮುಕ್ತ ಭಾರತ ಅಭಿಯಾನ: ಜಿಲ್ಲಾಧಿಕಾರಿ ಆನಂದ ಕೆ

ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಯುವಜನತೆಯನ್ನು...