ಶಹಾಬಾದ್: ಕೈಗಾರಿಕಾ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕನಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶಹಾಬಾದ್ ತಾಲ್ಲೂಕಿನ ಭಂಕೂರ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಶಹಾಬಾದ್ ನಗರದ ಲಕ್ಷ್ಮಿಗಂಜ್ ನಿವಾಸಿ ಶೇಕ್ ವಸೀಮ್ ಶೇಕ್ ಬಾಬು (32) ಮೃತಪಟ್ಟ ಕಾರ್ಮಿಕ ಎಂದು ತಿಳಿದುಬಂದಿದೆ.
ಭಂಕೂರ ಕೈಗಾರಿಕಾ ಪ್ರದೇಶದಲ್ಲಿ ಚಂದ್ರಶೇಖರ್ ನಾಯಕ್ ಅವರಿಗೆ ಸೇರಿದ ಕೈಗಾರಿಕಾ ಕಟ್ಟಡದ ನಿರ್ಮಾಣ ಕಾಮಗಾರಿಯಲ್ಲಿ ವಸೀಮ್ ತೊಡಗಿದ್ದರು. ಈ ವೇಳೆ ಜೆಸ್ಕಾಂನ ಒಂದು ವಿದ್ಯುತ್ ಕಂಬದಿಂದ ಮತ್ತೊಂದು ಕಂಬಕ್ಕೆ ಸಂಪರ್ಕ ಕಲ್ಪಿಸುವ ವಿದ್ಯುತ್ ತಂತಿ ಆಕಸ್ಮಿಕವಾಗಿ ತಗುಲಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಕುರಿತು ಮೃತರ ಸಂಬಂಧಿಕರು ಶಹಾಬಾದ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಕಲಬುರಗಿ | ಸಾಲಬಾದೆ ತಾಳಲಾರದೆ ರೈತ ಆತ್ಮಹತ್ಯೆ





