ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾರಿಗೆ ಬಸ್‌ನಲ್ಲಿ ಟಿಕೆಟ್ ಪಡೆಯಲು ಯುಪಿಐ ಸೇವೆ ಆರಂಭಿಸುವಂತೆ ಇತ್ತೀಚೆಗೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಘಟಕದ ರಾಜ್ಯ ನಿಯೋಗವು ಕೆಎಸ್ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಅವರಿಗೆ ಮನವಿ ಸಲ್ಲಿಸಿತ್ತು. ಈ ಮನವಿಗೆ ಸ್ಪಂದಿಸಿರುವ ಸಾರಿಗೆ ಇಲಾಖೆಯು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಟಿಕೆಟ್‌ಗೆ ಯುಪಿಐ ಸೇವೆ ಆರಂಭಿಸಿದೆ.
ಮನವಿಯಲ್ಲಿ ಬಸ್ ಸಂಚಾರದ ಪ್ರಮಾಣವನ್ನು ಹೆಚ್ಚಿಸುವುದು, ನಾನ್‌ಸ್ಟಾಪ್ ಬಸ್ ಸೇವೆಗಳನ್ನು ಪ್ರಾರಂಭಿಸುವುದು ಹಾಗೂ QR ಕೋಡ್ ಆಧಾರಿತ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರುವುದು ಸೇರಿದಂತೆ ಸಾರ್ವಜನಿಕರಿಗೆ ಅನುಕೂಲಕರವಾಗುವ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಉಲ್ಲೇಖಿಸಲಾಗಿತ್ತು. ಇದಕ್ಕೆ ಸ್ಪಂದಿಸಿರುವ ಸಾರಿಗೆ ಇಲಾಖೆಯು ಕಲ್ಯಾಣ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಟಿಕೆಟ್‌ಗೆ ಯುಪಿಐ ಸೇವೆ ಆರಂಭಿಸಿದೆ.
ಇದಕ್ಕೆ ಹರ್ಷ ವ್ಯಕ್ತಪಡಿಸಿರುವ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಘಟಕವು, “ಕೆಎಸ್ಆರ್‌ಟಿಸಿಯು ಮನವಿಗೆ ಸ್ಪಂದಿಸುವ ಮೂಲಕ ಟಿಕೆಟ್ ಖರೀದಿಯ ವೇಳೆ ಆಗುತ್ತಿದ್ದ ಚಿಲ್ಲರೆ ಸಮಸ್ಯೆಗೆ ಅಂತ್ಯ ಹಾಡಿದೆ. ಆ ಮೂಲಕ ಜನಸ್ನೇಹಿಯನ್ನಾಗಿಸಿರುವುದು ಸಂತೋಷ ತಂದಿದೆ” ಎಂದು ಹರ್ಷ ವ್ಯಕ್ತಪಡಿಸಿದೆ.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತುರ್ತು ಕ್ರಮ: ಕೆ ವೆಂಕಟೇಶ್
“ಇದೇ ರೀತಿಯಲ್ಲಿ ಬಸ್ ಸಂಚಾರದ ಪ್ರಮಾಣವನ್ನು ಹೆಚ್ಚಿಸುವುದರ ಕಡೆಗೂ ಕೂಡ ಇಲಾಖೆಯ ಅಧಿಕಾರಿಗಳು ಗಮನಹರಿಸಿ ಎಲ್ಲ ಸಮಸ್ಯೆಗಳಿಗೂ ಪರಿಹಾರ ನೀಡಬೇಕು. ಸೋಲಿಡಾರಿಟಿಯ ಮನವಿಯನ್ನು ಆಲಿಸಿ, ವ್ಯವಸ್ಥೆ ಕಲ್ಪಿಸಲು ನೆರವಾದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಅವರಿಗೆ ಧನ್ಯವಾದಗಳನ್ನು ತಿಳಿಸಿದೆ.





