ಕುರುಗೋಡು, ಚಿಂಚೋಳಿಯಲ್ಲಿ ಗಾಳಿ ಮಳೆ: ಧರೆಗುರುಳಿದ ವಿದ್ಯುತ್ ಕಂಬಗಳು

Date:

ಹೆಚ್ಚುತ್ತಿರುವ ತಾಪಮಾನದಿಂದ ಕೆಂಡವಾಗಿದ್ದ ಇಳೆಗೆ ನಿನ್ನೆ ಸುರಿದ ಮಳೆ ಕೊಂಚ ತಂಪೆರೆದಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ಮತ್ತು ಕಲಬುರಗಿ ಜಿಲ್ಲೆಯ ಚಿಂಚೋಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿನ್ನೆ ಸಂಜೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಗಾಳಿಯ ರಭಸಕ್ಕೆ ಅಲ್ಲಲ್ಲಿ ವಿದ್ಯುತ್‌ ಕಂಬಗಳು ಧರೆಗುರುಳಿದ ಘಟನೆ ವರದಿಯಾಗಿದೆ.

- Advertisement -

ಮುಂಜಾನೆ 4ರ ಸುಮಾರಿಗೆ ಗುಡುಗು ಸಮೇತ ಗಾಳಿ ಮಳೆಯಾಗಿದೆ ಗಂಟೆಗಳ ಕಾಲ ಬಿಡದೆ ಸುರಿದ ಮಳೆಯಿಂದ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ಚರಂಡಿ ತುಂಬಿದ ಪರಿಣಾಮ ರಸ್ತೆಯ ಮೇಲೆ ಮೋರಿ ನೀರು ಹರಿಯಿತು. ಗಾಳಿಯ ರಭಸಕ್ಕೆ ಉಪನೋಂದಣಾಧಿಕಾರಿ ಕಚೇರಿ ಸಮೀಪವಿದ್ದ ಪೆಟ್ಟಿಗೆ ಅಂಗಡಿಳಿಗೆ ಹೊದಿಸಿದ್ದ ಶೀಟ್‌ ಹಾರಿಹೋಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಪಟ್ಟಣದ ಇಂದಿರಾನಗರದಲ್ಲಿ ವಿದ್ಯುತ್‌ ತಂತಿ ತುಂಡರಿಸಿದ ಪರಿಣಾಮ 2 ಕುರಿಮರಿಗಳು ಸಾವಿಗೀಡಾಗಿವೆ. ತಾಲೂಕಿನ ಬಾದನಹಟ್ಟಿ, ಗೆಣಿಕೆಹಾಳು, ಸೋಮಲಾಪುರ, ಬಾದನಹಟ್ಟಿ, ವದ್ದಟ್ಟಿ ಗ್ರಾಮದಲ್ಲಿ 25ಕ್ಕೂ ಅಧಿಕ ವಿದ್ಯುತ್‌ ಕಂಬಗಳು ನೆಲಕ್ಕುರುಳಿದ್ದು, ಅದೃಷ್ಠವಷಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿದ ವರದಿಯಾಗಿಲ್ಲ. ಕೆಲವೇ ಗಂಟೆಗಳಲ್ಲಿ 2.3 ಸೆಂ.ಮೀ ಮಳೆಯಾಗಿದೆ ಎಂದು ಮಳೆಮಾಪನ ಕೇಂದ್ರ ಖಚಿತಪಡಿಸಿದೆ.

chincholi rain

ಕಲಬುರಗಿ ತಾಲೂಕಿನ ಚಿಂಚೋಳಿಯಲ್ಲೂ ಶುಕ್ರವಾರ ಸಂಜೆ ಗಾಳಿ ಮಳೆಯಾಗಿದೆ. ರಾಮತೀರ್ಥ ಗ್ರಾಮದಲ್ಲಿ 20 ನಿಮಿಷ ಸುರಿದ ಮಳೆಗೆ ವಿದ್ಯುತ್ ಕಂಬಗಳು ಧರೆಗುರುಳಿವೆ. ಜತೆಗೆ ವಿಪರೀತ ಗಾಳಿ ಇದ್ದ ಪರಿಣಾಮ ಮೂರು ಮನೆಗಳ ಮೇಲ್ಛಾವಣಿ ಹಾರಿಹೋಗಿರುವ ಘಟನೆ ವರದಿಯಾಗಿದೆ. ಸಲಗಪುರ, ಬಸಂತಪುರ, ಗಡಿಲಿಂಗದಳ್ಳಿ, ಐನಾಪುರ. ಬೆನಕೆಪಳ್ಳಿ ಗ್ರಾಮಗಳಲ್ಲೂ ಮಳೆಯಾಗಿದೆ.

Advertisements
Advertisements

ಈ ಸುದ್ದಿ ಓದಿದ್ದೀರಾ? ಶೃಂಗೇರಿ ಅಂಚೆ ಮತ ಮರು ಎಣಿಕೆ ವಿವಾದ: ರಾಜೇಗೌಡರ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಇಂದು ಬೆಂಗಳೂರು ನಗರ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ರಾಜಧಾನಿಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಹಗುರ ಮಳೆಯಾಗಲಿದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ ಮತ್ತು ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...

ಮಹಿಳೆಯರಿಲ್ಲದ ಸಂಪುಟ; ಮಾತು ತಪ್ಪಿತೇ ಕಾಂಗ್ರೆಸ್?

ರಾಜ್ಯದ ಮಹಿಳೆಯರು ಜನಸಂಖ್ಯೆಯಲ್ಲಿ ಸರಿಸುಮಾರು ಅರ್ಧದಷ್ಟಿದ್ದರೂ, ಅಧಿಕಾರದ ವಿಚಾರ ಬಂದಾಗ ಅವರು...

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...