ವಿವಾಹೇತರ ಸಂಬಂಧದ ಹಿನ್ನಲೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಘಟನೆ ಸೇಡಂ ಪಟ್ಟಣದ ಉಡಗಿ ರೋಡ್ ಬಳಿ ಸೋಮವಾರ ರಾತ್ರಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಸೇಡಂ ನಿವಾಸಿ ರಿಯಾಜ ಶೇಖಲಾಲ್ (43) ಎಂದು ಗುರುತಿಸಲಾಗಿದೆ. ಪಟ್ಟಣದ ವಾಸವದತ್ತಾ ಸಿಮೆಂಟ್ ಕಾರ್ಖಾನೆಯಿಂದ ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ಜಹೀರ್ ಶಾಬೋದಿನ್ ಹೈಯಾಳ (26) ಲಾರಿ ಚಾಲಕ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಕೊಲೆಗೀಡಾದ ರಿಯಾಜ ಅವರಿಗೆ ಇಬ್ಬರು ಪತ್ನಿಯರಿದ್ದರು. ಇವರಲ್ಲಿ ಎರಡನೇ ಪತ್ನಿಯೊಂದಿಗೆ ಆರೋಪಿ ಜಹೀರ್ ಅನೈತಿಕ ಸಂಬಂಧ ಹೊಂದಿದ್ದನೆಂಬುದು ಈ ಕಾರಣಕ್ಕೆ ಉದ್ಭವಿಸಿದ ವೈಮನಸ್ಯವೇ ಕೊಲೆಗೆ ಕಾರಣವಾಗಿದೆ ಎಂದು ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದರು.
ಕೊಲೆಗೈದ ಬಳಿಕ ಜಹೀರ್ ಮನೆಯಲ್ಲಿ ಅಡಗಿಕೊಂಡಿದ್ದಾಗ, ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಕೊಲೆ
ಸೇಡಂ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.