ಕಲಬುರಗಿ | ನಿವೇಶನಗಳ ಹಕ್ಕು ಪತ್ರ ನಕಲಿ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಪ್ರಜಾ ಪರಿವರ್ತನಾ ವೇದಿಕೆ ಆಗ್ರಹ

Date:

Advertisements

ಗಂಡೋರಿ ನಾಲಾ ಯೋಜನೆ ಅಡಿಯಲ್ಲಿ ಮುಳುಗಡೆಯಾದ ಬೆಳಕೋಟಾ ಗ್ರಾಮದ ಪುನರ್ವಸತಿಯಲ್ಲಿನ ನಿವೇಶನಗಳ ಹಕ್ಕು ಪತ್ರ ನಕಲಿ ಮಾಡುತ್ತಿರುವ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಪ್ರಜಾ ಪರಿವರ್ತನಾ ವೇದಿಕೆಯ ಕಲಬುರಗಿ ಜಿಲ್ಲಾ ಘಟಕವು ಆಗ್ರಹಿಸಿದೆ.

ಕರ್ನಾಟಕ ನೀರಾವರಿ ನಿಗಮ ನಿಯಮಿತದ ಮಹಾಗಾಂವ್‌ನಲ್ಲಿರುವ ಗಂಡೋರಿ ನಾಲಾ ಯೋಜನೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಪತ್ರ ಸಲ್ಲಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಕಮಲಾಪುರ ತಾಲೂಕಿನ ಗಂಡೋರಿ ನಾಲಾ ಯೋಜನೆ ಅಡಿಯಲ್ಲಿ ಮುಳುಗಡೆಯಾದ ಬೆಳಕೋಟಾ ಗ್ರಾಮದ ಪುನರ್ವಸತಿಯು ಕಮಲಾಪುರ ಹತ್ತಿರ ನೀಡಲಾಗಿದ್ದು, ಮುಳುಗಡೆಯಾದ ಬೆಳಕೋಟಾ ಗ್ರಾಮದ ನಿರಾಶ್ರಿತರಿಗೆ ಬೆಳಕೋಟಾ ಪುನರ ವಸತಿಯಲ್ಲಿ ನಿವೇಶನಗಳ ಹಕ್ಕು ಪತ್ರಗಳನ್ನು ನೀಡಲಾಗಿದೆ. ಇನ್ನೂ ಗ್ರಾಮದ ಮುಳುಗಡೆಯಾದ ನಿರಾಶ್ರಿತರಿಗೆ ಹಕ್ಕು ಪತ್ರಗಳು ನೀಡುವುದು ಬಾಕಿ ಇದೆ. ಕೆಲವು ದುಷ್ಕರ್ಮಿಗಳು ಪುನರ್ವಸತಿಯಲ್ಲಿ ಖಾಲಿ ನಿವೇಶನಗಳನ್ನು ನೋಡಿ, ನಕಲಿ ಹಕ್ಕು ಪತ್ರಗಳನ್ನು ತಯಾರಿಸಿ ಆ ಖಾಲಿ ನಿವೇಶನಗಳ ಸಂಖ್ಯೆಯನ್ನು ಹಾಕಿ ಮಾರಾಟ ಮಾಡುತ್ತಿರುವದು ಗಮನಕ್ಕೆ ಬಂದಿರುವುದಾಗಿ ಮನವಿಯಲ್ಲಿ ತಿಳಿಸಿದ್ದಾರೆ.

Advertisements

ಹೀಗಾಗಿ, ನಕಲಿ ಹಕ್ಕು ಪತ್ರಗಳನ್ನು ತಯಾರಿಸುತ್ತಿರುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಿಮಿನಲ್ ಮೊಕ್ಕದ್ದಮೆ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಹಾಗೂ ಕಮಲಾಪುರ ಪಟ್ಟಣ ಪಂಚಾಯತ್ ಪುನರ್ವಸತಿ ವಸತಿಯಲ್ಲಿನ ನಿವೇಶನಗಳ ಹಾಗೂ ಖುಲ್ಲಾ ಜಾಗದ ಮೇಲೆ ಯಾವುದೇ ರೀತಿಯ ಅಧಿಕಾರ ಚಲಾಯಿಸದ ಹಾಗೆ ಅವರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ರಮೇಶ್ ಬೆಳಕೋಟಾ, ಅರುಣ್ ಧಮ್ಮುರಕರ್, ಆನಂದ್ ಶಿಂಗೆ, ಅಝರುದ್ದಿನ್ ಇನ್ನಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X