ಕಲಬುರ್ಗಿ | ಇಂದಿರಾ ಕ್ಯಾಂಟೀನ್‌ ಪುನರಾರಂಭಕ್ಕೆ ವೆಲ್ಫೇರ್ ಪಾರ್ಟಿ ಆಗ್ರಹ

Date:

ಈ ಹಿಂದೆ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಬಡ ಜನರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್‌ ಆರಂಭಿಸಲಾಗಿತ್ತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಕಲಬುರಗಿಯಲ್ಲಿದ್ದ ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚಲಾಗಿದೆ. ಇದೀಗ, ಮತ್ತೆ ಕಾಂಗ್ರೆಸ್‌ ಅಧಿಕಾರದಲ್ಲಿದ್ದು, ಆ ಕ್ಯಾಂಟೀನ್‌ಗಳನ್ನು ಪುನರಾರಂಭಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಮುಬೀನ ಅಹ್ಮದ್ ಒತ್ತಾಯಿಸಿದ್ದಾರೆ.

- Advertisement -

ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಇಂದಿರಾ ಕ್ಯಾಂಟಿನ್‌ಗಳು ಕೂಲಿ ಕಾರ್ಮಿಕರಿಗೆ, ಮಹಿಳೆಯರಿಗೆ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹಸಿವು ನೀಗಿಸುತ್ತಿದ್ದವು. ಅವುಗಳನ್ನು ಬಿಜೆಪಿ ಅಧಿಕಾರದಲ್ಲಿ ಸರಿಯಾಗಿ ನಿರ್ವಹಣೆ ಮಾಡದೆ, ಮುಚ್ಚಲಾಗಿದೆ. ಚುನಾವಣೆ ಸಮಯದಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಪುನರಾರಂಭಿಸುವುದಾಗಿ ಕಾಂಗ್ರೆಸ್‌ ಭರವಸೆ ನೀಡಿತ್ತು. ಈಗ, ಸರ್ಕಾರ ತನ್ನ ಭರವಸೆಯನ್ನು ಈಡೇರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಇಂದಿಯಾ ಕ್ಯಾಂಟೀನ್ ಮತ್ತೆ ಆರಂಭಿಸುವ ಬಗ್ಗೆ ವೆಲ್ಫೇರ್ ಪಾರ್ಟಿ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಿತ್ತು. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. 30 ದಿನಗಳೊಳಗೆ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಬೇಕು. ಇಲ್ಲವಾದರೆ, ಪಾಲಿಕೆ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಎಂ.ಎ ಖದೀರ, ಸಿದ್ದಣ್ಣ ಚಕರಾ, ಮುಬೀನ ಅಹ್ಮದ್, ಸೈಯ್ಯದ ಮುನೀರ್, ಅಬ್ದುಲ ಸಲೀಂ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...