ಕಳಸ | ಕಲ್ಲುಗೋಡು ತೂಗು ಸೇತುವೆ ಶಿಥಿಲ; ಪ್ರವಾಸಿಗರ ಸಂಚಾರ ತಡೆದ ಗ್ರಾಮಸ್ಥರು

Date:

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಲುಗೋಡು ಗ್ರಾಮದ ತೂಗುಸೇತುವೆ ಶಿಥಿಲವಾಗಿದ್ದು, ಇಲ್ಲಿನ ಅಂಬಾತೀರ್ಥ ರಸ್ತೆಯ ಮೂಲಕ ಹಾದು ಹೋಗುವ ಪ್ರವಾಸಿಗರನ್ನು ಸತತ ಮೂರನೇ ಭಾನುವಾರ ಸ್ಥಳೀಯ ನಿವಾಸಿಗಳು ತಡೆದು ನಿಲ್ಲಿಸಿದರು.

- Advertisement -

15 ವರ್ಷದಿಂದ ಈ ಊರಿನ ಸೇತುವೆಗೆ ನಿರ್ವಹಣೆ ಮಾಡಿಲ್ಲ. ಕಳಸ, ಹೊರನಾಡು, ಕುದುರೆಮುಖಕ್ಕೆ ಭೇಟಿ ನೀಡುವ ಪ್ರವಾಸಿಗರು ಕಲ್ಲುಗೋಡಿನ ತೂಗುಸೇತುವೆಗೆ ಭೇಟಿ ನೀಡುತ್ತಾರೆ. ಏಕಕಾಲಕ್ಕೆ 50ಕ್ಕೂ ಹೆಚ್ಚು ಪ್ರವಾಸಿಗರು ಸೇತುವೆಯ ಮೇಲೆ ಹಾದು ಹೋಗುವುದರಿಂದ ತೂಗುಸೇತುವೆಗೆ ಹಾನಿಯಾಗುತ್ತದೆ. ನಿರ್ಮಾಣಗೊಂಡು ಒಂದು ದಶಕ ಕಳೆದಿರುವುದರಿಂದ ದುರ್ಬಲಗೊಂಡಿದೆ. ಕಬ್ಬಿಣಕ್ಕೆ ತುಕ್ಕು ಹಿಡಿದಿದೆ, ಬಣ್ಣ ಬಳಿಯಲೂ ಯಾರೂ ಮುಂದಾಗಿಲ್ಲ. ಸೇತುವೆ ದುರಸ್ತಿಗೆ ಅನುದಾನ ಯಾವ ಇಲಾಖೆಯಿಂದ ಕೊಡಮಾಡಬೇಕು ಎನ್ನುವುದರಲ್ಲಿಯೇ ಗೊಂದಲವಿದೆ ಎನ್ನುತ್ತಾರೆ ಗ್ರಾಮಸ್ಥರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇನ್ನು, ಗ್ರಾಮಕ್ಕೆ ಸದ್ಯಕ್ಕೆ ಇರುವ ಏಕೈಕ ಸಂಪರ್ಕ ಮಾರ್ಗವಾಗಿರುವ ಈ ಸೇತುವೆ ಹಾನಿಯಾದರೆ ಸ್ಥಳೀಯರಿಗೆ ಓಡಾಡಲು ಬೇರೆ ಪರ್ಯಾಯ ಮಾರ್ಗವೇ ಇಲ್ಲ. ಆದ್ದರಿಂದ, ತೂಗುಸೇತುವೆ ದುರಸ್ತಿಗೊಳ್ಳುವ ತನಕವೂ ಪ್ರವಾಸಿಗರಿಗೆ ಈ ಮಾರ್ಗದ ಮೂಲಕ ಸಂಚಾರಕ್ಕೆ ತಡೆಯೊಡ್ಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ‘ಬೆಂಕಿ ಹಚ್ಚುತ್ತೇನೆ’ ಹೇಳಿಕೆ ಶಾಸಕರ ಘನತೆಗೆ ತಕ್ಕುದಲ್ಲ: ಮಂಜುನಾಥ ಮೇತ್ರಿ

ಅಕ್ರಮ ಮರಳು ಸಾಗಾಟ ಹಾಗೂ ಓವರ್‌ಲೋಡ್ ಟಿಪ್ಪರ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುವುದು...

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...