ಕಳಸ l ಬಿರುಗಾಳಿಯಿಂದ ವಿದ್ಯುತ್ ಕಂಬ ಧರೆಗೆ: ವಾರ ಕಳೆದರೂ ಕತ್ತಲಲ್ಲಿ ಕಳೆಯುತ್ತಿರುವ ಜನರು

Date:

Advertisements

ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಮಳೆ ಮುಂದುವರೆದಿರುವ ಪರಿಣಾಮ ನೂರಾರು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದೆ. ಈ ಪರಿಣಾಮದಿಂದ ವಾರದಿಂದ ವಿದ್ಯುತ್ ಸ್ಥಗಿತವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ.

ಕಳಸ ಭಾಗದಲ್ಲಿ ಬೀಸುತ್ತಿರುವ ಬಿರುಗಾಳಿಗೆ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದಿರುವ ಪರಿಣಾಮ ಕಳಸ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ವಾರದಿಂದ ವಿದ್ಯುತ್‌ ಪೂರೈಕೆ ಸ್ಥಗಿತಗೊಂಡಿದೆ. ಹೀಗಾಗಿ ವಿದ್ಯುತ್‌ ಇಲ್ಲದೆ ಜನ ಕತ್ತಲೆಯಲ್ಲಿ ಕಾಲ ಕಳೆಯುವಂತಾಗಿದ್ದು, ಕಳಸ ಪಟ್ಟಣದ ವ್ಯಾಪಾರಿಗಳು ಸಂಜೆಯಾಗುತ್ತಿದ್ದಂತೆ ವಿದ್ಯುತ್ ಇಲ್ಲದ ಪರಿಣಾಮ ಅಂಗಡಿಗಳ ಬಾಗಿಲನ್ನು ಬೇಗನೆ ಮುಚ್ಚುತ್ತಿದ್ದಾರೆ. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಆನೆ ದೊಡ್ಡಿ ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಮನವಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಮೆಸ್ಕಾಂ ಸಿಬ್ಬಂದಿ ಮಾತ್ರ ವಿದ್ಯುತ್ ಸಂಪರ್ಕ ಪುನ‌ರ್ ಸ್ಥಾಪಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಜಂಗಲ್ ಕಟಿಂಗ್ ಹೆಸರಲ್ಲಿ ಮಳೆಗಾಲ ಆರಂಭಕ್ಕೂ ಮುನ್ನ ಲಕ್ಷಾಂತರ ರೂಪಾಯಿಯನ್ನು ಅಧಿಕಾರಿಗಳು ಖರ್ಚು ಮಾಡುತ್ತಿದ್ದಾರೆ. ಆದರೆ, ಎಲ್ಲಿ ಜಂಗಲ್ ಕಟಿಂಗ್ ಮಾಡುತ್ತಿದ್ದಾರೆ ಗೊತ್ತಿಲ್ಲ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಸೀಮೆಎಣ್ಣೆ ದೀಪ ಹಚ್ಚೋಣವೆಂದರೆ ಸೀಮೆಎಣ್ಣೆಯೂ ಸಿಗುತ್ತಿಲ್ಲ, ಡೀಸೆಲ್‌ ದೀಪ ಹಚ್ಚಿದರೆ ಮನೆ ತುಂಬಾ ಹೊಗೆ ತುಂಬಿಕೊಳ್ಳುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X