ಕಲ್ಲಡ್ಕ | ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಇಫ್ತಾರ್‌ – 2025

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಇಫ್ತಾರ್ – 2025 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಆಯಿಷಾ ವಿದ್ಯಾ ಸಂಸ್ಥೆಗಳ ಸ್ಥಾಪಕಧ್ಯಕ್ಷ ಅಮೀನ್ ಅಹ್ಸನ್ ಉಪವಾಸದ ಮಹತ್ವ ಮತ್ತು ಕುರ್‌ಆನ್‌ ಸಂದೇಶವನ್ನು ನೀಡಿದರು.

- Advertisement -

“ಯಾವ ರೀತಿ ಮನುಷ್ಯನಿಗೆ ಓರ್ವ ತಂದೆ-ತಾಯಿ ಇರುತ್ತಾರೆಯೋ, ಅದೇ ರೀತಿ ಈ ಲೋಕಕ್ಕೆ ಓರ್ವನೇ ದೇವನು ಮಾತ್ರ ಇರಲು ಸಾಧ್ಯ. ಆ ದೇವನನ್ನು ಅನುಸರಿಸಿ ಈ ಲೋಕದಲ್ಲಿ ಬದುಕಿ ಪರಲೋಕದಲ್ಲಿ ಮೋಕ್ಷ ಪಡೆಯಲು ಪ್ರಯತ್ನಿಸುವುದು ಪ್ರತಿಯೊಬ್ಬ ಮನುಷ್ಯನ ಕರ್ತವ್ಯವಾಗಿದೆ” ಎಂದು ತಮ್ಮ ಭಾಷಣದಲ್ಲಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಕಾಲೇಜಿನ ಖಜಾಂಜಿ ಹೈದರ್ ಅಲಿ ಮಾತನಾಡಿ, ಜೀವನದಲ್ಲಿ ದೇವ ಭಯವನ್ನು ಅಳವಡಿಸಲು ರಂಝಾನ್ ತಿಂಗಳ ಉಪವಾಸ ಆಚರಣೆಯಿಂದ ಹೇಗೆ ಸಾಧ್ಯವೆಂದು ವಿವರಿಸಿದರು.

ಇಫ್ತಾರ್‌ 1

ಪ್ರಾಂಶುಪಾಲೆ ಡಾ. ಹೇಮಲತಾ ಬಿ ಡಿ ಮಾತನಾಡಿ ಕಾಲೇಜಿನಲ್ಲಿ ಸತತ ಎರಡನೇ ವರ್ಷವೂ ಇಫ್ತಾರ್ ಕೂಟ ಆಯೋಜಿಸಿದ ಆಡಳಿತ ಮಂಡಳಿ ಹಾಗೂ ಸಹಕರಿಸಿದ ಎಲ್ಲ ಸಿಬ್ಬಂದಿ ವರ್ಗದವರಿಗೆ ಮತ್ತು ವಿದ್ಯಾರ್ಥಿಗಳಿಗೆ ವಂದಿಸಿ, ಪ್ರಶಂಸಿಸಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಆಡಳಿತ ಮಂಡಳಿಯ ಸಂಚಾಲಕ ಅಮಾನುಲ್ಲ ಖಾನ್ ಅಧ್ಯಕ್ಷೀಯ ಭಾಷಣ ಮಾಡಿ, “ಮನುಷ್ಯನ ಹೃದಯದ ರೋಗಗಳಿಗೆ ಕುರ್‌ಆನ್ ಅತ್ಯುತ್ತಮ ಔಷಧ” ಎಂಬ ಕುರ್‌ಆನ್‌ನ ಸೂಕ್ತದೊಂದಿಗೆ ತಮ್ಮ ಮಾತುಗಳನ್ನು ಕೊನೆಗೊಳಿಸಿದರು. ‌

ಇಫ್ತಾರ್‌ 2

ವೇದಿಕೆಯಲ್ಲಿ ಪ್ರಗತಿಪರ ಕೃಷಿಕ ಜನಾಬ್ ಇದಿನಬ್ಬ, ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಇಮಾರತ್ ಅಲಿ, ಜೊತೆ ಕಾರ್ಯದರ್ಶಿ ಅಬ್ದುಲ್ಲಾಕುಂಞ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಕುಮಾರಿ ಮುಫೀದ ಮತ್ತು ಕಾರ್ಯದರ್ಶಿ ಕುಮಾರಿ ನಬೀಸತುಲ್ ಅಫ್ನ ಇದ್ದರು. ಕುಮಾರಿ ಸುಖೈಬ ಖಿರಾಅತ್ ಪಠಿಸಿದರು, ಕುಮಾರಿ ಫಸೀಲ ಸ್ವಾಗತಿಸಿ ಕುಮಾರಿ ಶಮ್ಯ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಈ ಸುದ್ದಿ ಓದಿದ್ದೀರಾ? ಯುಗಾದಿ, ರಂಜಾನ್ ಪ್ರಯುಕ್ತ ಮೈಸೂರು-ಕಾರವಾರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

ಸಭಾ ಕಾರ್ಯಕ್ರಮದ ನಂತರ ಇಫ್ತಾರ್‌ನ ವ್ಯವಸ್ಥೆ ಮಾಡಲಾಗಿತ್ತು. ಮುಸ್ಸಂಜೆಯ ಪ್ರಶಾಂತವಾದ ವಾತಾವರಣದಲ್ಲಿ, ಕಾಲೇಜಿನ ಮುಂಭಾಗದಲ್ಲಿ ಶಾಂತಿಯುತವಾಗಿ ಶಿಸ್ತಿನಿಂದ ಇಫ್ತಾರ್ ಮಾಡಲಾಯಿತು. ತದನಂತರ ಮಗರಿಬ್‌ ನಮಾಝ್ ಹಾಗೂ ಊಟದ ವ್ಯವಸ್ಥೆ ಮಾಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...