ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಜೂ.1ರಿಂದ 1 ಲಕ್ಷ ಸಸಿ ನೆಡುವ ಯೋಜನೆಗೆ ಚಾಲನೆ : ಸಚಿವ ಈಶ್ವರ ಖಂಡ್ರೆ

Date:

ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳು ಶೇ.10ಕ್ಕಿಂತ ಕಡಿಮೆ ಅರಣ್ಯ ಪ್ರದೇಶ ಹೊಂದಿರುವ ಜಿಲ್ಲೆಗಳ ಪಟ್ಟಿಯಲ್ಲಿದ್ದು, ಇಲ್ಲಿ ಹಸಿರು ಹೊದಿಕೆ ಹೆಚ್ಚಿಸಲು ಬರುವ ಜೂನ್ 1 ರಿಂದ 1 ಲಕ್ಷ ಸಸಿ ನೆಡುವ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.

- Advertisement -

ಕಲಬುರಗಿಯ ಐವಾನ್-ಎ-ಶಾಹಿ ಅತಿಥಿ ಗೃಹದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಕಲಬುರಗಿ-ಶೇ5, ಬಳ್ಳಾರಿ-ಶೇ 7, ಯಾದಗಿರಿ ಮತ್ತು ರಾಯಚೂರು ತಲಾ ಶೇ3ರಷ್ಟು ಮಾತ್ರ ಅರಣ್ಯ ಪ್ರದೇಶ ಇದೆ. ಹೀಗಾಗಿ ಜೂನ್ 1 ರಿಂದ ಈ ನಾಲ್ಕು ಜಿಲ್ಲೆಗಳಲ್ಲಿ, ವಿಶೇಷವಾಗಿ ರಸ್ತೆ ಬದಿಯಲ್ಲಿ 1 ಲಕ್ಷ ಸಸಿ ನೆಡೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮುಂದಿನ 10-15 ವರ್ಷದಲ್ಲಿ 10-20 ರಷ್ಟು ಅರಣ್ಯ ಪ್ರಮಾಣ ಹೆಚ್ಚಿಸಲು ಯೋಜನೆ ರೂಪಿಸಲಾಗುತ್ತಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ʼಚಿತ್ತಾಪುರ ಕ್ಷೇತ್ರದ ಮಾಡಬೂಳದಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ಸುಮಾರು 40 ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುತ್ತಿರುವ ಪ್ರಾಣಿ ಸಂಗ್ರಹಾಲಯ ಕಾರ್ಯ ಭರದಿಂದ ಸಾಗಿದ್ದು, ಇಂದು ಕಾಮಗಾರಿ ವೀಕ್ಷಿಸಿದ್ದೇನೆ. ಡಿಸೆಂಬರ್ ಅಂತ್ಯದೊಳಗೆ ಇದನ್ನು ಲೋಕಾರ್ಪಣೆ ಮಾಡಲಾಗುವುದು. ಪ್ರಾಣಿ ಸಂಗ್ರಹಾಲಯ ಸ್ಥಾಪನೆಯಾದ ನಂತರ ಹುಲಿ, ಸಿಂಹ, ಚಿರತೆ ಸೇರಿದಂತೆ ಅನೇಕ ಪ್ರಾಣಿಗಳ ವೀಕ್ಷಣೆಯ ಅವಕಾಶ ದೊರೆಯಲಿದೆ. ಇಲ್ಲಿನ ಸಿಬ್ಬಂದಿಗಳಿಗೆ ಮೈಸೂರು, ಬನ್ನೇರುಘಟ್ಟದಲ್ಲಿ ತರಬೇತಿ ನೀಡಲಾಗುವುದುʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಮಾತ್ರಭಾಷೆ ಕನ್ನಡದಲ್ಲೇ 4,321 ವಿದ್ಯಾರ್ಥಿಗಳು ಫೇಲ್!

ಪತ್ರಿಕಾಗೋಷ್ಠಿಯಲ್ಲಿ ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕ ತಿಪ್ಪಣ್ಣ ಕಮಕನೂರ, ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಶರಣು ಮೋದಿ, ಮುಖಂಡ ನೀಲಕಂಠ ಮೂಲಗೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರಗೂರಿನಲ್ಲಿ ಉಪಶಮನ ಆರೈಕೆ ಕುರಿತು ಜಾಗೃತಿ ಜಾಥಾ

ಮೈಸೂರು ಜಿಲ್ಲೆಯ ಸರಗೂರಿನಲ್ಲಿ ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಉಪಶಮನ ಆರೈಕೆ ಕೇಂದ್ರ...

ಬ್ರೇನ್ ಸ್ಟ್ರೋಕ್ ಲಕ್ಷಣಗಳನ್ನು ಆರಂಭದಲ್ಲೇ ಗುರುತಿಸುವುದು ಅವಶ್ಯ: ನರರೋಗ ತಜ್ಞ ಡಾ. ರಾಕೇಶ ಎ.ವಿ

ಮೆದುಳಿನ ಪಾರ್ಶ್ವವಾಯು (ಬ್ರೇನ್ ಸ್ಟ್ರೋಕ್) ಸಂಭವಿಸಿದಾಗ ತಕ್ಷಣ ವೈದ್ಯಕೀಯ ನೆರವು ಪಡೆಯುವುದು...

ಬಾಗಲಕೋಟೆ | ಬಸವೇಶ್ವರ ಬ್ಯಾಂಕ್ ರಾಜ್ಯದ ಆರ್ಥಿಕ ಭೂಪಟದಲ್ಲಿ ಗುರುತಿಸಿಕೊಂಡಿದೆ: ಪ್ರಕಾಶ ತಪಶೆಟ್ಟಿ

ವರ್ತಕರ ಹಿತಾಸಕ್ತಿಗಾಗಿ ಸ್ಥಾಪನೆಯಾದ ಬಸವೇಶ್ವರ ಸಹಕಾರಿ ಬ್ಯಾಂಕ್, ಶೇರುದಾರರು, ವರ್ತಕರು ಹಾಗೂ...

ಬಾದಾಮಿ | ಆಸ್ಪತ್ರೆ, ಶಾಲೆಗೆ ಸಿಇಒ ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ನೋಟಿಸ್

ಸರ್ಕಾರಿ ಸಂಸ್ಥೆಗಳಲ್ಲಿ ಶಿಸ್ತು, ಜವಾಬ್ದಾರಿ ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟ ಕಾಪಾಡುವ...