‌ಬೀದರ್‌ | ವಿವಿಧ ಬೇಡಿಕೆಗಳ ಈಡೇರಿಕೆಗೆ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ಆಗ್ರಹ

Date:

ಬೀದರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸಿಬ್ಬಂದಿಗಳನ್ನು ಮಾನವ ಸಂಪನ್ಮೂಲ ಏಜೆನ್ಸಿ ಟೆಂಡರ್ ಈಗಾಗಲೇ ಕರೆಯಲಾಗಿದ್ದು, ಸದರಿ ಟೆಂಡರ್ ನಲ್ಲಿ ಹಲವು ಲೋಪ ದೋಷಗಳಿದ್ದು, ಕೂಡಲೇ ಈ ಟೆಂಡರ್ ರದ್ದುಪಡಿಸಿ, ಮರು ಟೆಂಡರ್ ಕರೆಯುವಂತೆ  ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ಆಗ್ರಹಿಸಿದೆ.

- Advertisement -

ಈ ಕುರಿತು ಕರ್ನಾಟಕ ನಿರ್ಮಾಣ ಸೇನೆಯ ಸಂಸ್ಥಾಪಕ ಸ್ವಾಮಿದಾಸ ಕೆಂಪೇನೋರ ನೇತೃತ್ವದಲ್ಲಿ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ  ನಿರ್ದೇಶಕರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ತಮ್ಮ ಸಂಸ್ಥೆಯಲ್ಲಿ ಅಕ್ರಮ ಮತ್ತು ನಿಯಮ ಬಾಹಿರವಾಗಿ ನೇಮಿಸಿರುವ ಬಾಲಾಜಿ ಹುಗ್ಗೆ ಮತ್ತು ರಾಜಕುಮಾರ ಅವರನ್ನು ಸೇವೆಯಿಂದ ಕೈಬೀಡಬೇಕು. ದಿಲೀಪ ಡೊಂಗ್ರೆ (ಎಲೇಕ್ಟ್ರಿಷನ್ ) ಸುಮಾರು ವರ್ಷಗಳಿಂದ ಒಂದೇ ಸ್ಥಳದಲ್ಲಿ ಸೇವೆ ಸಲ್ಲಿಸುತ್ತಾ, ರಾಜಕೀಯ ಮಾಡುತ್ತಿದ್ದು, ಇವರನ್ನು ಕೂಡಲೇ ವರ್ಗಾವಣೆ ಮಾಡಬೇಕು. ಹೊರಗುತ್ತಿಗೆ ಕಾರ್ಮಿಕರನ್ನು ಕೆ.ಟಿ.ಪಿ.ಪಿ ನಿಯಮದಂತೆ ಟೆಂಡರ್ ಮೂಲಕ ನೇಮಕ ಮಾಡಿಕೊಳ್ಳುವಂತೆ” ಆಗ್ರಹಿಸಿದರು.

ಕೂಡಲೇ ಬೇಡಿಕೆ ಈಡೇರಿಸಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿಆರೋಗ್ಯ ಸಚಿವರಿಗೆ ಘೇರಾವ್ ಹಾಕಿ ಹಕ್ಕೋತ್ತಾಯ ಮನವಿ ಸಲ್ಲಿಸಲಾಗುತ್ತದೆ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | 82ರ ಇಳಿ ವಯಸ್ಸಿನಲ್ಲೂ ಆರದ ಉತ್ಸಾಹ; ಸ್ವತಃ ಖರ್ಚಿನಲ್ಲೇ ಊರಿನ ರಸ್ತೆ ದುರಸ್ತಿ

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ನವೀನ ಅಲ್ಲಾಪೂರ, ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಸಂಗಮೇಶ ಏಣಕೂರ, ಶಿವರಾಜ ಹಮೀಲಾಪೂರ, ಸಂಜುಕುಮಾರ ಶ್ರೀಮಂಡಲ, ಸುಧಾಕರ ಢೋಣೆ, ಡಾ. ಜೇಮ್ಸ್, ಸುಶೀಲಕುಮಾರ ಕೆಂಪೇನೋರ, ನರಸಿಂಗ್ ಮಿರ್ಜಾಪೂರ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ: ತೇಗಂಪೂರ ಕೆರೆ ನೀರು ಪೂರೈಕೆಗೆ ಆಗ್ರಹ

ಔರಾದ ಪಟ್ಟಣದಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ...

ಔರಾದ್‌ | ಖೋಖೋ : ಕೌಡಗಾಂವ ಶಾಲೆಯ ಬಾಲಕಿಯರ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 16ರಂದು ನಡೆದ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...