ಬೀದರ್ | ಬಳಕೆಯಾಗದೇ ಪಾಳುಬಿದ್ದಿದೆ ʼಕಮಲನಗರ ಬಸ್ ನಿಲ್ದಾಣʼ

Date:

Advertisements
ಕಮಲನಗರ ತಾಲ್ಲೂಕು ಕೇಂದ್ರದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಮಾರು 15 ವರ್ಷಗಳ ಹಿಂದೆ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಬಸ್‌ ನಿಲ್ದಾಣ ಇಂದು ಹಾಳು ಕೊಂಪೆಯಾಗಿದೆ.
ತಾಲ್ಲೂಕು ಕೇಂದ್ರ ಘೋಷಣೆಯಾಗಿ ಐದು ವರ್ಷಗಳೇ ಕಳೆದಿವೆ, ಆದರೂ ಸಾರ್ವಜನಿಕರಿಗೆ ಸುಸಜ್ಜಿತ ಬಸ್‌ ನಿಲ್ದಾಣವಿಲ್ಲ, ಜನಪ್ರತಿನಿಧಿಗಳ ನಿರ್ಲಕ್ಷ್ಯ, ಅಧಿಕಾರಿಗಳ ಇಚ್ಚಾಶಕ್ತಿ ಕೊರತೆಯಿಂದ ಇದ್ದ ಬಸ್‌ ನಿಲ್ದಾಣ ಆವರಣದಲ್ಲಿ ಗಿಡ-ಗಂಟಿಗಳು ಬೆಳೆದಿವೆ, ಕಟ್ಟಡದ ಕಿಡಿಕಿ, ಬಾಗಿಲು ಪುಡಿಯಾಗಿ ಇದ್ದೂ ಇಲ್ಲದಂತಾಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಪಟ್ಟಣದ ಮದನೂರ ರಸ್ತೆಯಲ್ಲಿರುವ ಬಸ್‌ ನಿಲ್ದಾಣ ಕಟ್ಟಡ ಸಾರ್ವಜನಿಕರಿಗೆ ಎಳ್ಳಷ್ಟೂ ಉಪಯುಕ್ತ ಇಲ್ಲ, ಸಾರಿಗೆ ಸಂಸ್ಥೆಯ ಅಧಿಕಾರಿಗಳು ಕೂಡ ನಿಲ್ದಾಣ ಬಳಕೆಯ ಬಗ್ಗೆ ಯಾವುದೇ ಆಸಕ್ತಿ ತೋರದ ಕಾರಣ ಸರ್ಕಾರದ ಹಣ ಪೋಲಾಗಿದ್ದು ಅಷ್ಟೇ ಅಲ್ಲದೆ ನಿಲ್ದಾಣ ಅನೈತಿಕ ಚಟುವಟಿಕೆಗಳಿಗೆ ದುರ್ಬಳಕೆಯಾಗುತ್ತಿದೆ ಎಂದು ನಾಗರಿಕರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಿನಿ ಬಸ್‌ ನಿಲ್ದಾಣವೇ ಆಶ್ರಯ:

ಕಮಲನಗರ ಪಟ್ಟಣದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 50 ರ ಮುಖ್ಯ ರಸ್ತೆ ಅಲ್ಲಮ ಪ್ರಭು ವೃತ್ಥದ ಹತ್ತಿರ ಪಾರ್ಕಿಂಗ್‌ ವ್ಯವಸ್ಥೆಯಿಲ್ಲ, ಫುಟ್‌ ಪಾತ್‌ ಮೇಲೆ ಸಣ್ಣಪುಟ್ಟ ಅಂಗಡಿಗಳಿದ್ದ ಕಾರಣ ಸಾರ್ವಜನಿಕರಿಗೆ ಓಡಾಡಲು ತೊಂದರೆಯಾಗುತ್ತಿದೆ. ಇನ್ನು ಮುಖ್ಯ ರಸ್ತೆ ಪಕ್ಕವೇ ದ್ವಿಚಕ್ರ ವಾಹನ, ಖಾಸಗಿ ವಾಹನಗಳು ನಿಲುಗಡೆ ಮಾಡುತ್ತಿದ್ದು, ಸ್ವಲ್ಪ ಎಚ್ಚರ ತಪ್ಪಿದರೂ ಅನಾಹುತ ಸಂಭವಿಸುವ ಭೀತಿ ಎದುರಾಗಿದೆ. ಮದನೂರು ರಸ್ತೆಯಲ್ಲಿರುವ ಬಸ್‌ ನಿಲ್ದಾಣ ಬಳಕೆಯಾಗದೆ ಪಾಳು ಬಿದ್ದ ಕಾರಣ ಮುಖ್ಯ ರಸ್ತೆ ಪಕ್ಕದಲ್ಲಿ ಮಿನಿ ಬಸ್‌ ನಿಲ್ದಾಣ ನಿರ್ಮಿಸಲಾಗಿದೆ. ಆದರೆ ತಾಲ್ಲೂಕಿನ ನಾನಾ ಗ್ರಾಮಗಳಿಂದ ವಿದ್ಯಾರ್ಥಿಗಳು, ಸಾರ್ವಜನಿಕರು ವಿವಿಧ ಕಾರ್ಯ ನಿಮಿತ್ತ ಪಟ್ಟಣಕ್ಕೆ ಆಗಮಿಸುತ್ತಾರೆ. ಪ್ರಯಾಣಿಕರಿಗೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯಾವುದೇ ಸೌಕರ್ಯ ಇಲ್ಲದ ಕಾರಣ ಬಹುತೇಕರು ರಸ್ತೆ ಪಕ್ಕದಲೇ ಬಸ್‌ ಗಳಿಗೆ ಕಾಯಬೇಕಾದ ಪರಿಸ್ಥಿತಿಯಿದೆ.

ಪಟ್ಟಣದ ನಿವಾಸಿ ಜನಾರ್ಧನ ಸಾವರಗೆಕರ್‌ ಈದಿನ.ಕಾಮ್‌ ದೊಂದಿಗೆ ಮಾತನಾಡಿ,  “ಕಮಲನಗರದಲ್ಲಿ ಸುಮಾರು ವರ್ಷಗಳ ಹಿಂದೆ ನಿರ್ಮಿಸಲಾದ ಬಸ್‌ ನಿಲ್ದಾಣ ಸಾರ್ವಜನಿಕರಿಗೆ ಉಪಯುಕ್ತಯಿಲ್ಲದೆ ಧೂಳು ತಿನ್ನುತ್ತಿದೆ. ಲಕ್ಷಾಂತರ ರೂಪಾಯಿ ವೆಚ್ಚದಿಂದ ನಿರ್ಮಿಸಿದ ಬಸ್‌ ನಿಲ್ದಾಣ ಇದ್ದೂ ಇಲ್ಲದಂತಾಗಿದೆ. ತಾಲ್ಲೂಕಿನಲ್ಲಿ ಜನಸಂಖ್ಯೆ ಹೆಚ್ಚಾಗಿದೆ ಜೊತೆಗೆ ವಾಹನ ಸಂಚಾರವೂ ದಟ್ಟಣೆಯಾಗಿದೆ. ಕೂಡಲೇ ಸಾರಿಗೆ ಇಲಾಖೆ ಅಧಿಕಾರಿಗಳು ಬಸ್‌ ನಿಲ್ದಾಣ ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು.

Advertisements

ಬಸ್‌ ನಿಲ್ದಾಣದಲ್ಲಿ ಮಿನಿ ಬಸ್‌ ಡಿಪೊ ನಿರ್ಮಿಸಿ:

ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಈದಿನ.ಕಾಮ್‌ ದೊಂದಿಗೆ ಮಾತನಾಡಿ, ” ಕಮಲನಗರ ಬಸ್‌ ನಿಲ್ದಾಣ ರಾಮಚಂದ್ರ ವೀರಪ್ಪ ಸಂಸದರಾಗಿದ್ದ ವೇಳೆ ನಿರ್ಮಾಣವಾಗಿದ್ದು, ಆದರೆ ಅದು ಸಾರ್ವಜನಿಕರಿಗೆ ಅನುಕೂಲವಿಲ್ಲ. ಈ ಬಗ್ಗೆ ಸಾರಿಗೆ ಇಲಾಖೆಗೆ ಹಲವು ಸಲ ಪತ್ರ ಬರೆದು ಬಸ್‌ ನಿಲ್ದಾಣ ಆವರಣದಲ್ಲಿ ಮಿನಿ ಬಸ್‌ ಡಿಪೊ ನಿರ್ಮಿಸಿದರೆ ಬಸ್‌ ನಿಲ್ದಾಣವೂ ಆರಂಭಿಸಬೇಕೆಂದು ಹೇಳಿದ್ದೆ, ಆದರೆ ಯಾವುದೇ ಬದಲಾವಣೆ ಆಗಲಿಲ್ಲ. ಈಗಲಾದರೂ ಇಲಾಖೆ ಬಸ್‌ ನಿಲ್ದಾಣ ಆರಂಭಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದಲ್ಲಿ ಸ್ವತಂತ್ರ ಮಾಧ್ಯಮದ ಪಾಲಿಗೆ ಇದು ಅತ್ಯಂತ ಕರಾಳ ಕಾಲ

ಈ ಬಗ್ಗೆ ಔರಾದ್‌ ಬಸ್ ಘಟಕದ ವ್ಯವಸ್ಥಾಪಕ ಎಸ್ ಟಿ ರಾಠೋಡ್, ಈದಿನ.ಕಾಮ್ ದೊಂದಿಗೆ ಮಾತನಾಡಿ, “ಕಮಲನಗರ ಬಸ್‌ ನಿಲ್ದಾಣ ಬಳಕೆಯಲಿಲ್ಲ ಎಂಬುದು ಗಮನಕ್ಕಿದೆ, ಸಾರಿಗೆ ಇಲಾಖೆಯ ಸಿವಿಲ್‌ ಇಂಜಿನಿಯರ್‌ ಜೊತೆಗೆ ಮಾತಾಡಿದ್ದೇನೆ, ಕೂಡಲೇ ಬಸ್‌ ನಿಲ್ದಾಣ ಆವರಣ ಸ್ವಚ್ಛಗೊಳಿಸಿ ನಿಲ್ದಾಣದಲ್ಲಿ ಓರ್ವ ಕಂಟ್ರೋಲರ್‌ ನ್ನು ನೇಮಿಸಿ ನಿಲ್ದಾಣ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

2 COMMENTS

  1. मादिगा दंडोरा संघटना कमलनगर तालुका अध्यक्ष विजयकुमार सूर्यवंशी भवानी बीजलगाव

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X