ಕಮಲನಗರ | ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರ ನೇಮಕಕ್ಕೆ ಆಗ್ರಹ

Date:

Advertisements

ಕಮಲನಗರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರ ಕೊರತೆ ನೀಗಿಸಬೇಕೆಂದು ಮಾದಿಗೆ ದಂಡೋರ ಮಾದಿಗ ಮೀಸಲಾತಿ ಹೋರಾಟ ತಾಲೂಕಾ ಸಮಿತಿ ಒತ್ತಾಯಿಸಿದೆ.

ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್‌ ಅಮೀತ್‌ ಕುಲಕರ್ಣಿ ಅವರಿಗೆ ಸಲ್ಲಿಸಿದರು.

ʼಕಮಲನಗರ ತಾಲುಕು ಕೇಂದ್ರವಾಗಿದ್ದು, ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ನೂರಾರು ರೋಗಿಗಳು ಇದೇ ಆರೋಗ್ಯ ಕೇಂದ್ರದ ಮೇಲೆ ಅವಲಂಬಿತರಾಗಿದ್ದಾರೆ. ಆದರೆ ರಾತ್ರಿ ಪಾಳೆಯಲ್ಲಿ ವೈದ್ಯಾಧಿಕಾರಿಗಳು ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಇರದಿರುವುದರಿಂದ ತೊಂದರೆ ಅನುಭವಿಸುವಂತಾಗಿದೆʼ ಎಂದು ದೂರಿದ್ದಾರೆ.

Advertisements

ʼಹೃದಯ ಸಂಬಂಧಿ ಕಾಯಿಲೆ, ಹೆರಿಗೆ ಸೇರಿದಂತೆ ತುರ್ತು ಚಿಕಿತ್ಸೆಗಾಗಿ ಬಂದರೆ ರಾತ್ರಿ ವೇಳೆ ವೈದ್ಯರ ಹಾಜರು ಇರುವುದಿಲ್ಲ. ಇನ್ನು ಸರ್ಕಾರದಿಂದ ಬಂದ ಉಪಕರಣಗಳ ಬಳಕೆಯಾಗುತ್ತಿಲ್ಲ. ಗ್ರಾಮೀಣ ಭಾಗದ ಬಡ ರೋಗಿಗಳು ಆಸ್ಪತ್ರೆಗೆ ಬಂದರೆ ಸೂಕ್ತ ಚಿಕಿತ್ಸೆ ಸಿಗದೆ ಖಾಸಗಿ ಆಸ್ಪತ್ರೆಗಳ ಮೊರೆ ಹೋಗಬೇಕಾದ ಪರಿಸ್ಥಿತಿ ಬಂದೊದಗಿದೆʼ ಎಂದರು.

ಇದನ್ನೂ ಓದಿ : ಕಲಬುರಗಿ | ಈಶಾನ್ಯ ವಲಯಕ್ಕೆ ಚಂದ್ರಗುಪ್ತ ನೂತನ ಐಜಿಪಿ

ಕೂಡಲೇ ರಾತ್ರಿ ಪಾಳಿಯಲ್ಲಿ ಕಡ್ಡಾಯವಾಗಿ ವೈದ್ಯರನ್ನು ನೇಮಿಸುವುದು ಸೇರಿದಂತೆ ಆಸ್ಪತ್ರೆಯ ಹಲವು ಸಮಸ್ಯೆಗೆ 15 ದಿವಸದ ಒಳಗಾಗಿ ಶಾಶ್ವತ ಪರಿಹಾರ ಒದಗಿಸಲು ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆʼ ಎಂದರು ಎಚ್ಚರಿಸಿದರು.

ವರದಿ ಮಾಹಿತಿ : ಜನಾರ್ಧನ ಸಾವರ್ಗೇಕರ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X