ಕಮಲನಗರ ಪಟ್ಟಣ ಪಂಚಾಯತಿಯನ್ನಾಗಿ ಮೇಲ್ದರ್ಜೆಗೆ : ಕಾಂಗ್ರೆಸ್‌ ಸರ್ಕಾರದ ಕೊಡುಗೆ ಎಂದ ಭೀಮಸೇನ್‌ರಾವ್‌ ಶಿಂಧೆ

Date:

ಕಮಲನಗರ ಗ್ರಾಮ ಪಂಚಾಯತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಿದ್ದು ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೊಡುಗೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಡಾ. ಭೀಮಸೇನರಾವ ಶಿಂಧೆ ಹೇಳಿದರು.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಕಾಂಗ್ರೆಸ್ ಸರಕಾರ ಮಾಡಿರುವ ಕೆಲಸಗಳು ನಾನೇ ಮಾಡುತ್ತಿದ್ದೇನೆ ಎಂದು ಶಾಸಕ ಪ್ರಭು ಚವ್ಹಾಣ ಅವರು ಹೇಳಿಕೊಳ್ಳುತ್ತಿದ್ದಾರೆ. ಹಿಂದಿನ ಬಿಜೆಪಿ ಸರಕಾರ ಕ್ಷೇತ್ರದಲ್ಲಿ ಮಾಡದ ಕೆಲಸಗಳು ನಮ್ಮ ಕಾಂಗ್ರೆಸ್ ಸರಕಾರ ಮಾಡುತ್ತಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ʼಔರಾದ್ ಪಟ್ಟಣ ಪಂಚಾಯಿತಿಯನ್ನು ಪುರಸಭೆ ಮಾಡಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಅವರಿಂದ ಹೊರತು ಶಾಸಕ ಪ್ರಭು ಚವ್ಹಾಣ ಅವರಿಂದ ಅಲ್ಲ. ಜಿಲ್ಲೆಯವರೇ ಆದ ಪೌರಾಡಳಿತ ಸಚಿವ ರಹೀಂಖಾನ್, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಸತತ ಪ್ರಯತ್ನದಿಂದ ಆಗಿದೆ. ನಾನೂ ಸಿಎಂ ಸಿದ್ದರಾಮಯ್ಯಯವರಿಗೆ ಮನವಿ ಮಾಡಿದ್ದೆʼ ಎಂದರು.‌

‌ʼಕಮಲನಗರ ಪಟ್ಟಣ ಪಂಚಾಯಿತಿ ಆಗುತ್ತಿರುವ ವಿಷಯ ತಿಳಿದ ಶಾಸಕ ಪ್ರಭು ಚವ್ಹಾಣ ಪಟ್ಟಣ ಪಂಚಾಯಿತಿ ಶ್ರೇಯಸ್ಸು ಪಡೆಯಲು, ಮಾಧ್ಯಮದಲ್ಲಿ ಪ್ರಚಾರ ಪಡೆಯವುದು ಸರಿಯಲ್ಲ. ಜನ ಬುದ್ಧಿವಂತರಾಗಿದ್ದಾರೆ. ಬಿಜೆಪಿ ಸರಕಾರದಲ್ಲಿ ಎರಡು ಬಾರಿ ಪ್ರಭು ಚವ್ಹಾಣ ಸಚಿವರಾದ ಅವಧಿಯಲ್ಲಿ ಔರಾದ್ ಪಟ್ಟಣ ಪಂಚಾಯಿತಿಯನ್ನು ಪುರಸಭೆ, ಕಮಲನಗರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿ ಮಾಡಲು ಏಕೆ ಆಗಿಲ್ಲʼ ಎಂದು ಶಿಂಧೆ ಪ್ರಶ್ನಿಸಿದರು.

ಇದನ್ನೂ ಓದಿ : ಬೀದರ್‌ ವಿಶ್ವವಿದ್ಯಾಲಯದಲ್ಲಿ ‘ಕೀರ್ತನೆಗಳ ಸಂಗ್ರಹ’ ಕೃತಿ ಬಿಡುಗಡೆ

ʼಔರಾದ್ ಕ್ಷೇತ್ರದ ಜನರ ಸಮಸ್ಯೆಗಳು ಅಗತ್ಯ ಅಭಿವೃದ್ಧಿಯ ಬಗ್ಗೆ ನಾನಾ ಯೋಜನೆಗಳು ರೂಪಿಸಿಕೊಂಡು ಸರಕಾರಕ್ಕೆ ಮನವಿ ಮಾಡುವ ಮೂಲಕ ಕೆಲಸಗಳು ಮಾಡುತ್ತಿದ್ದೇನೆ. ಕೆಲಸ ಮಾಡಿರುವುದು ಕಾಂಗ್ರೆಸ್ ಸರಕಾರ ಮತ್ತು ಪೌರಾಡಳಿತ ಸಚಿವರು ಅವರ ಕೆಲಸಕ್ಕೆ ಪ್ರಭು ಚವ್ಹಾಣ ಕೃತಜ್ಞತೆ ಸಲ್ಲಿಸಬೇಕು ಹೊರತು ನಾನೇ ಮಾಡಿದ್ದೇನೆ ಎನ್ನುವುದು ಸರಿಯಾದ ಕ್ರಮವಲ್ಲʼ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...