ಚಾಮರಾಜನಗರ | ಕನಕ ಜಯಂತಿ ಪೂರ್ವಭಾವಿ ಸಭೆ

Date:

Advertisements

ಕನಕ ಜಯಂತಿಯನ್ನು ನಿಗದಿತ ದಿನದಂದು ತಾಲೂಕು ಆಡಳಿತದಿಂದ ಸರಳವಾಗಿ ಆಚರಣೆ ಮಾಡಲಾಗುತ್ತದೆ. ನಂತರದ ದಿನದಲ್ಲಿ ‌ಸಮಾಜ ಮತ್ತು ಸಂಘ ಸಂಸ್ಥೆಗಳ ಜೊತೆಗೂಡಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶಾಸಕ ಗಣೇಶ್ ಪ್ರಸಾದ್ ಹೇಳಿದ್ದಾರೆ.

ಚಾಮನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದ ಕನಕ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. “ಡಿಸೆಂಬರ್‌ನಲ್ಲಿ ವಿಧಾನಸಭಾ‌ ಅಧಿವೇಶನ ಇರುವುದರಿಂದ ಶೀಘ್ರದಲ್ಲಿ ಕನಕ ‌ಜಯಂತಿ‌ ಆಚರಣೆ ದಿನಾಂಕವನ್ನು ನಿಗದಿಗೊಳಿಸಲಾಗುವುದು. ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊಡದೆ ಎಲ್ಲಾ ಸಮುದಾಯವರ ಜೊತೆಗೂಡಿ ಆಚರಣೆ ಮಾಡಬೇಕು” ಎಂದರು.

ಪುರಸಭಾ ಮಾಜಿ ಅಧ್ಯಕ್ಷ ಜಿ.ಡಿ.ಎಲ್ ಸುರೇಶ್ ಮಾತನಾಡಿ, “ಕಾರಣಂತರಗಳಿಂದ ಕಳೆದ ನಾಲ್ಕು ವರ್ಷಗಳಿಂದ ಸರಳವಾಗಿ ಕನಕ ಜಯಂತಿ ಆಚರಣೆ ಮಾಡಲಾಗಿದೆ. ಈ‌ಬಾರಿ ಸಮಾಜದ ಬೇಡಿಕೆಯಂತೆ ಅದ್ದೂರಿಯಾಗಿ ಕನಕ ‌ಜಯಂತಿ ಆಚರಣೆ ಮಾಡಬೇಕು. ಕುರುಬ ಸಮಾಜದ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕಗಳಿಸಿದ್ದಾರೆ. ಅವರಿಗೆ ಸನ್ಮಾನ ‌ಮಾಡಲಾಗುತ್ತದೆ” ಎಂದರು.

Advertisements

“ಕನಕ ಭವನ ಹತ್ತು ವರ್ಷದಿಂದ ನೆನೆಗುದಿಗೆ ಬಿದ್ದಿದೆ. ಇದನ್ನು ಶೀಘ್ರ ಪೂರ್ಣಗೊಳಿಸಬೇಕು” ಎಂದು ‌ಕನಕ‌ ಯುವ ಸಂಘಟನೆಯ ಯುವಕರು ಶಾಸಕರಲ್ಲಿ ಮನವಿ ಮಾಡಿಕೊಂಡರು.

ಸಭೆಯಲ್ಲಿ ತಹಸೀಲ್ದಾರ್ ಟಿ.ರಮೇಶ್ ಬಾಬು, ಪುರಸಭೆ ಮುಖ್ಯಾಧಿಕಾರಿ ವಸಂತಕುಮಾರಿ ವಿಶ್ವನಾಥ್, ಶಿವಣ್ಣ, ತಾಪಂ‌ ಇಓ ರಾಮಲಿಂಗಯ್ಯ,ಮತ್ತು ‌ಯಜಮಾರುಗಳು‌ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X