ಕನಕಪುರ | ನಿಗದಿತ ಸಮಯಕ್ಕೆ ಬಾಗಿಲು ತೆರೆಯದ ರೇಷ್ಮೆ ಇಲಾಖೆ ಕಚೇರಿ; ಸಾರ್ವಜನಿಕರ ಆಕ್ರೋಶ

Date:

ಸರಕಾರಿ ಕಚೇರಿಗಳು ಜನಸಾಮಾನ್ಯರ ಸೇವೆಗಾಗಿ ನಿಗದಿತ ಸಮಯಕ್ಕೆ ಕಾರ್ಯನಿರ್ವಹಿಸಬೇಕು ಎಂಬ ನಿಯಮವಿದ್ದರೂ, ಕನಕಪುರದ ರೇಷ್ಮೆ ಇಲಾಖೆಯ ಕಚೇರಿಯಲ್ಲಿ ಮಾತ್ರ ಉಲ್ಟಾ ಪುಲ್ಟಾ ವ್ಯವಸ್ಥೆ ಜಾರಿಯಲ್ಲಿದೆ. ಬೆಳಗ್ಗೆ 10:20 ಆದರೂ ಕಚೇರಿಯ ಬಾಗಿಲು ತೆರೆಯದೆ ಸಿಬ್ಬಂದಿಗಳು ಗೈರಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
​
ಕನಕಪುರ ತಾಲೂಕಿನ ರೇಷ್ಮೆ ಇಲಾಖೆಯಲ್ಲಿ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಹಾಜರಾಗುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ, ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಸೈನಿಕ ಹೆಚ್ ಎಸ್ ಸ್ವಾಮಿ ಇಂದು ಬೆಳಗ್ಗೆ ಕಚೇರಿಗೆ ದಿಢೀರ್ ಭೇಟಿ ನೀಡಿದರು. ಸರಕಾರಿ ಆದೇಶದ ಪ್ರಕಾರ ಕಚೇರಿಗಳು ಬೆಳಗ್ಗೆ 10:15 ರಿಂದ 10:20ರೊಳಗೆ ಕಾರ್ಯಾರಂಭ ಮಾಡಬೇಕು. ಆದರೆ, ಸ್ವಾಮಿ 10:20ಕ್ಕೆ ಕಚೇರಿ ಮುಂದೆ ಇದ್ದಾಗಲೂ ಮುಖ್ಯ ದ್ವಾರಕ್ಕೆ ಬೀಗ ಹಾಕಲಾಗಿತ್ತು.
​
​ಕಚೇರಿಯಲ್ಲಿ ಕೇವಲ ಒಬ್ಬರೇ ಅಧಿಕಾರಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎನ್ನಲಾಗುತ್ತಿದ್ದು, ಅವರು ಕೂಡ ನಿಗದಿತ ಸಮಯಕ್ಕೆ ಹಾಜರಿರಲಿಲ್ಲ. ರೇಷ್ಮೆ ಇಲಾಖೆಯ ಈ ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ನೋಡಲು ‘ಭೂತ ಬಂಗಲೆ’ಯಂತೆ ಭಾಸವಾಗುತ್ತಿದೆ. ಸುಮಾರು ಮೂರು ವರ್ಷಗಳ ಹಿಂದೆ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ದುರಸ್ತಿ ಮಾಡುವ ಭರವಸೆ ಸಿಕ್ಕಿದ್ದರೂ, ಈವರೆಗೂ ಯಾವುದೇ ಕೆಲಸ ನಡೆದಿಲ್ಲ ಎಂದು ಸ್ವಾಮಿ ಆರೋಪಿಸಿದ್ದಾರೆ.

- Advertisement -

ಇದನ್ನೂ ಓದಿ: ರಾಮನಗರ | ಅಂಗಡಿ ಮಾಲೀಕನ ಬಳಿ 1.6 ಲಕ್ಷ ರೂ. ಸುಲಿಗೆ ಆರೋಪ: ಪಿಎಸ್‌ಐ ಅಮಾನತು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

​ದೂರದ ಊರುಗಳಿಂದ ಬರುವ ರೈತರು ಮತ್ತು ಫಲಾನುಭವಿಗಳು ಅಧಿಕಾರಿಗಳಿಗಾಗಿ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.​ “ಇದು ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕ್ಷೇತ್ರವಾಗಿದೆ. ಇಂತಹ ಪ್ರತಿಷ್ಠಿತ ಕ್ಷೇತ್ರದಲ್ಲಿಯೇ ಸರಕಾರಿ ಕಚೇರಿಗಳ ಸ್ಥಿತಿ ಹೀಗಿದ್ದರೆ ರೈತರ ಗತಿಯೇನು?” ಎಂದು ಪ್ರಶ್ನಿಸಿರುವ ಸ್ವಾಮಿ, ಕೂಡಲೇ ಈ ಕಚೇರಿಗೆ ಅಗತ್ಯ ಸಿಬ್ಬಂದಿಗಳನ್ನು ನೇಮಿಸಿ, ಕಚೇರಿ ಸರಿಯಾದ ಸಮಯಕ್ಕೆ ತೆರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

​ಕಚೇರಿಗಳು ಕೇವಲ ದಾಖಲೆಗಳಲ್ಲಿ ಮಾತ್ರವಲ್ಲದೆ, ವಾಸ್ತವದಲ್ಲೂ ಜನರಿಗಾಗಿ ಕೆಲಸ ಮಾಡಲಿ ಎಂಬುದು ಸ್ಥಳೀಯರ ಆಗ್ರಹವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...