ಕನಕಪುರ | 1,881 ಮನೆಗಳ ನಿರ್ಮಾಣದಲ್ಲಿ ಅಕ್ರಮ; ನಾಗಾರ್ಜುನಗೌಡ ಆರೋಪ

Date:

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ 1,881 ಮನೆಗಳನ್ನು ನಿರ್ಮಿಸಲು 95 ಕೋಟಿ ರೂಪಾಯಿ ಟೆಂಡರ್ ಕರೆದಿದ್ದು, ಕಾಮಗಾರಿ ಪೂರ್ಣಗೊಳಿಸಿಲ್ಲ. ಇದರ ಬಗ್ಗೆ ಇಲ್ಲಿಯ ಶಾಸಕರು ಪರಿಶೀಲನೆ ನಡೆಸಿದ್ದಾರೆಯೇ ಎಂದು ಶ್ರೀರಾಮ ಸೇನೆಯ ರಾಮನಗರ ಜಿಲ್ಲಾಧ್ಯಕ್ಷ ನಾಗಾರ್ಜುನಗೌಡ ಪ್ರಶ್ನಿಸಿದರು.

- Advertisement -

ಕನಕಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕನಕಪುರ ಕ್ಷೇತ್ರದ ಜನತೆಗೆ ಸರಿಯಾಗಿ ಸರ್ಕಾರದ ಅನುದಾನಗಳು ತಲುಪುತ್ತಿವೆಯೇ? ಎಂಬುದರ ಬಗ್ಗೆ ಇಲ್ಲಿಯ ಶಾಸಕರು ಗಮನ ಹರಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“2017-18ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 1,881 ಮನೆಗಳ ನಿರ್ಮಾಣದಲ್ಲಿ ಅಕ್ರಮ ಮತ್ತು ಸಾರ್ವಜನಿಕರಿಗೆ ಉಂಟಾಗಿರುವ ಅನಾನುಕೂಲವನ್ನು ಖಂಡಿಸಿ, ಶ್ರೀರಾಮ ಸೇನೆಯು ರಾಮನಗರ ಜಿಲ್ಲೆಯ ಕನಕಪುರ ನಗರಸಭೆ ಮುಂಭಾಗದಲ್ಲಿ ಧರಣಿ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.

“ಕೋಟ್ಯಂತರ ರೂಪಾಯಿ ಟೆಂಡರಿನಲ್ಲಿ ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಗೌರಿ ಇನ್ಫ್ರಾ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಗುತ್ತಿಗೆ ನೀಡಲಾಗಿತ್ತು. ಕನಕಪುರದ ಬೂದಿಕೆರೆ, ಬಾಣತ ಮಾರಮ್ಮ ಬಡಾವಣೆ, ವಿವೇಕಾನಂದ ನಗರ, ಹನುಮಂತನಗರ, ಮೇಳೆಕೋಟೆ, ಅಜೀಜನಗರ, ಕುರುಪೇಟೆ, ಮಹಾರಾಜರ ಕಟ್ಟೆ ಹಾಗೂ ಮಳಗಾಳು ಮುಂತಾದ ಬಡಾವಣೆಗಳಲ್ಲಿ ಮನೆ ನಿರ್ಮಾಣ ಕಾರ್ಯ ಪ್ರಾರಂಭವಾಯಿತು. ಆದರೆ, ಅನೇಕ ಫಲಾನುಭವಿಗಳ ಮನೆಗಳು ಇನ್ನೂ ಪೂರ್ಣಗೊಂಡಿಲ್ಲ. ಪ್ರಗತಿ ಹಂತದಲ್ಲಿಯೇ ನಿಂತುಹೋಗಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಜನರು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದು, ಕೆಲವರು ತಮ್ಮದೇ ವೆಚ್ಚದಲ್ಲಿ ಮನೆಗಳನ್ನು ಪೂರ್ಣಗೊಳಿಸಿದ್ದಾರೆ. ಈ ನಡೆಯನ್ನು ಖಂಡಿಸುತ್ತೇವೆ ಎಂದು ನಾಗಾರ್ಜುನಗೌಡ ಹೇಳಿದರು.

“ಹಣ ಕೊಟ್ಟ ಅನರ್ಹರಿಗೆ ಮನೆಗಳನ್ನು ಕೊಡಲಾಗಿದೆ, ಎಂಬ ಆರೋಪ ಕೇಳಿ ಬಂದಿದೆ.  2022ರಲ್ಲಿ ವಿಧಾನ ಪರಿಷತ್ ನಲ್ಲಿ ಮಂಡಿಸಿದ ಮಾಹಿತಿ ಪ್ರಕಾರ, 722 ಮನೆಗಳು ಪೂರ್ಣಗೊಂಡಿರುವುದಾಗಿ ಹೇಳಲಾಗಿತ್ತು. ಆದರೆ, ಈಗ ಸಿಕ್ಕ ಮಾಹಿತಿ ಪ್ರಕಾರ, 1336 ಮನೆಗಳು ಪೂರ್ಣಗೊಂಡಿದ್ದು, 545 ಮನೆಗಳು ಇನ್ನೂ ನಿರ್ಮಾಣ ಹಂತದಲ್ಲಿವೆ ಎಂಬ ಮಾಹಿತಿ ಸಿಕ್ಕಿದೆ” ಎಂದರು.

“ಅರ್ಧ ನಿರ್ಮಾಣಗೊಂಡ ಮನೆಗಳಲ್ಲಿ ಜನರು ಪ್ರಾಣಿಗಳಂತೆ ವಾಸಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಹೆಸರಲ್ಲಿ ನಡೆಯುತ್ತಿರುವ ಅನ್ಯಾಯ. ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ, ಅಕ್ರಮಗಳಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ಅಮಾನತು ಮಾಡಬೇಕು ಹಾಗೂ ಫಲಾನುಭವಿಗಳ ಪಟ್ಟಿಯಲ್ಲಿರುವ ಜನರಿಗೆ ಮನೆಗಳನ್ನು ನಿರ್ಮಿಸಿಕೊಡಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...