ಕನಕಪುರ | ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಸಾರ್ವಜನಿಕರ ಪರದಾಟ: ಸರಿಪಡಿಸಲು ಆಗ್ರಹಿಸಿ ಮನವಿ

Date:

ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ಹೊಸದಾಗಿ ನಿರ್ಮಿಸಿರುವ ಬೂದಿಕೇರಿ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಈ ರಸ್ತೆಯ ನೀಲನಕ್ಷೆಯೇ ಅವೈಜ್ಞಾನಿಕವಾಗಿದೆ. ವಾಹನ ಸವಾರರು ಹಾಗೂ ರಸ್ತೆ ಪಕ್ಕದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ಪರದಾಡುವ ಸನ್ನಿವೇಶ ಎದುರಾಗಿದೆ ಎಂದು ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಆರೋಪಿಸಿದರು.

- Advertisement -

ರೈತ ಸಂಘಟನೆ ಹಾಗೂ ಕನ್ನಡ ಪರ ಸಂಘಟನೆಗಳೊಡನೆ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶಿವಲಿಂಗಯ್ಯರಿಗೆ ದೂರು ಸಲ್ಲಿಸಿ ಮಾತನಾಡಿದ ಅವರು, ಬೂದಿಕೇರಿ ರಸ್ತೆ ಸಂಪೂರ್ಣ ವಾಣಿಜ್ಯ ಮಳಿಗೆಗಳಿಂದ ಕೂಡಿದೆ. ರಸ್ತೆ ಕಾಮಗಾರಿ ಅತ್ಯಂತ ನಿಧಾನವಾಗಿ ನಡೆದಿತ್ತು. ಇದರಿಂದಾಗಿ ಸಾರ್ವಜನಿಕರು ದೈನಂದಿನ ಪ್ರಯಾಣದಲ್ಲಿ ತೀವ್ರ ತೊಡಕು ಅನುಭವಿಸಿದ್ದರು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
ಮನವಿ 5

ಕಾಮಗಾರಿ ಮುಗಿದು ರಸ್ತೆ ಸಂಚಾರ ಆರಂಭವಾಯಿತು ಎಂದು ನಿಟ್ಟುಸಿರು ಬಿಡುವಷ್ಟರಲ್ಲಿ ಇನ್ನೊಂದು ತರದ ತೊಡಕು ಆರಂಭ ಆಗಿದೆ. ಕಾಂಕ್ರೀಟಿನಲ್ಲಿ ಸರಿಯಾದ ಪ್ರಮಾಣದ ಸಿಮೆಂಟ್ ಬಳಸಿಲ್ಲ. ಬಳಸಿದ ಡಸ್ಟ್ ಪ್ರಮಾಣ ಹೆಚ್ಚಾದ್ದರಿಂದ ಜಲ್ಲಿ ಕಲ್ಲುಗಳು ಎದ್ದು ಬಂದಿವೆ ಎಂದು ದೂರಿದರು.

ಕೆಆರ್‌ಎಸ್ ಪಕ್ಷದ ಪ್ರಶಾಂತ್ ಹೊಸದುರ್ಗ ಮಾತನಾಡಿ, ಕೆಲವೇ ದಿನಗಳಲ್ಲೇ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿ ಉಂಟಾಗಿದ್ದು ವಾಹನ ಸವಾರರು ಓಡಾಡಲು ಅಡಚಣೆ ಆಗಿದೆ. ಅವೈಜ್ಞಾನಿಕವಾಗಿ ರಸ್ತೆ ವಿಭಜಕವನ್ನು ಅಗಲವಾಗಿ ನಿರ್ಮಿಸಿದ ಪರಿಣಾಮ ರಸ್ತೆ ಕಿರಿದಾಗಿದೆ. ಈ ಕಿರಿದಾದ ವಾಣಿಜ್ಯ ರಸ್ತೆಯಲ್ಲಿ ವಾಹನಗಳ ನಿಲುಗಡೆಯಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಪಾದಚಾರಿ ಮಾರ್ಗವನ್ನು ರಸ್ತೆಯಿಂದ ಎತ್ತರವಾಗಿ ಕಟ್ಟಿರುವುದರಿಂದ ಮನೆಯ ಗೇಟ್ ಒಳಗೆ ವಾಹನ ತೆಗೆದುಕೊಂಡು ಹೋಗಲು ಸಾಧ್ಯವಾಗದೆ ರಸ್ತೆಯಲ್ಲೇ ನಿಲ್ಲಿಸುವಂತಾಗಿದೆ ಎಂದು ವಿವರಿಸಿದರು.

ಇಂತಹ ಕಳಪೆಯಾದ ಅವೈಜ್ಞಾನಿಕ ಕಾಮಗಾರಿ ನಿರ್ಮಿಸಿದ ಎಸ್‌ಸಿಸಿ ಕನ್ಷ್ಟ್ರಕ್ಷನ್‌ನ ಮಾಲಿಕರು ಹಾಗೂ ಗುತ್ತಿಗೆದಾರರಾದ ದಿನೇಶ್‌ ಅವರಿಗೆ ಬಿಲ್ ಪಾವತಿಸದೆ ಕಪ್ಪು ಪಟ್ಟಿಗೆ ಸೇರಿಸಿ. ಕಾನೂನು ಕ್ರಮಕೈಗೊಂಡು, ಸಂಪೂರ್ಣವಾಗಿ ಜನೋಪಯೋಗಿ ಆಗುವಂತೆ ರಸ್ತೆಯನ್ನು ಪುನರ್ ನಿರ್ಮಿಸಲು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಸೆ. 5 | ಗೌರಿ ಲಂಕೇಶ್‌ಗೆ 7ನೇ ವರ್ಷದ ನುಡಿನಮನ: ಬೆಂಗಳೂರಿನಲ್ಲಿ ‘ಗೌರಿ ನೆನಪು’ ಕಾರ್ಯಕ್ರಮ

ಈ ಸಭೆಯಲ್ಲಿ ರೈತ ಸಂಘಟನೆಯ ಜಿಲ್ಲಾಧ್ಯಕ್ಷ ಚೀಲೂರು ಮುನಿರಾಜ್, ಕೆಆರ್‌ಎಸ್ ಪಕ್ಷದ ಪ್ರಶಾಂತ್ ಹೊಸದುರ್ಗ, ಕನ್ನಡ ಭಾಸ್ಕರ್, ಕಹಳೆ ರುದ್ರೇಶ್, ಜಯಕರ್ನಾಟಕ ಜನಪರ ವೇದಿಕೆಯ ಮುಖಂಡರಾದ ಹಾರೋಹಳ್ಳಿ ಗಿರೀಶ್, ಕುಮಾರ್, ಪರಮೇಶ್, ಸಾಗರ್, ಅಂಗಡಿ ರಮೇಶ್, ರೈತಸಂಘದ ಶಿವರಾಮು, ಕೆ ಬಿ ಬಸವರಾಜು, ಮಾದೇಶ, ಇನ್ನೂ ಇತರ ಪದಾಧಿಕಾರಿಗಳು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...