ಕೆಲವರು ರಾಜಕೀಯ ಪಕ್ಷಗಳಿಗೆ ತುತ್ತೂರಿ ಊದುತ್ತಿರುವುದರಿಂದ ಕನ್ನಡ ಸಾಹಿತ್ಯಕ್ಕೆ ಅಪಾಯ: ಎಚ್ ಎಂ ವೆಂಕಟೇಶ್

Date:

ನಾಡಿನ ಹೆಸರಾಂತ ಬರಹಗಾರರು, ಸಾಹಿತಿಗಳು, ಕಲಾವಿದರು, ಚಿಂತಕರು ಭಾಷೆ, ನೆಲ, ಜಲ, ಅಭಿವೃದ್ಧಿಗೆ ಶ್ರಮಿಸುತ್ತಿದ್ದರೂ ಕೂಡ ಕೆಲವರು ರಾಜಕೀಯ ಪಕ್ಷದ ಪರವಾಗಿ ಧ್ವನಿಯೆತ್ತಿ ತಮ್ಮ ತನವನ್ನು ಕಳೆದುಕೊಳ್ಳುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ. ಇದು ಕನ್ನಡ ಭಾಷೆ, ನೆಲ, ಜಲ ಮತ್ತು ಕನ್ನಡ ಅಭಿವೃದ್ಧಿಗೆ ಅಪಾಯ ತಂದೊಡ್ಡುತ್ತಿದ್ದಾರೆ ಎಂದು ಹಿರಿಯ ಸಾಮಾಜಿಕ ಹೋರಾಟಗಾರ ಎಚ್ ಎಂ ವೆಂಕಟೇಶ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -

ಬೆಂಗಳೂರು ನಗರದ ಜ್ಯುಡಿಷಿಯಲ್ ಲೇಔಟ್‌ನಲ್ಲಿ ಇಂದು ಬಡಾವಣೆಯ ಕನ್ನಡ ಕಸ್ತೂರಿ ಸಂಘ ಹಾಗೂ ವಿವಿಧ ಸಂಘಟನೆಗಳೊಂದಿಗೆ ಆಯೋಜಿಸಿದ್ದ 70ನೇ ಕನ್ನಡ ರಾಜೋತ್ಸವ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸರ್ಕಾರದ ಕೆಲವು ಸಮಿತಿಗಳಲ್ಲಿ, ಪ್ರಾಧಿಕಾರಗಳಲ್ಲಿ ಅಧ್ಯಕ್ಷರು, ಸದಸ್ಯರು ಆಗಲು ಮತ್ತು ಪ್ರಶಸ್ತಿಗಳನ್ನು ಪಡೆದುಕೊಳ್ಳಲು ರಾಜಕಾರಣಿಗಳ ಜೊತೆ ಲಾಭಿ ನಡೆಸಿ ಅಧಿಕಾರ ಅನುಭವಿಸಲು ಹಾತೊರೆಯುತ್ತಿರುವುದರಿಂದ ಕನ್ನಡ ಸಾಹಿತ್ಯದ ಬೆಳವಣಿಗೆ ಕುಂಠಿತಗೊಂಡಿದೆ” ಎಂದರು.

“ಉತ್ತರ ಭಾರತದಿಂದ ಉದ್ಯೋಗ ಹರಸಿ ಬರುವ ಹಿಂದಿ ಭಾಷಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಈ ಬಗ್ಗೆ ಧ್ವನಿಯೆತ್ತಬೇಕಾಗಿದ್ದ ನಾಡಿನ ಸಾಹಿತಿಗಳು, ಚಿಂತಕರು, ಬರಹಗಾರರು ರಾಜಕೀಯ ಪಕ್ಷಗಳ ಜತೆಗೆ ಕೈಜೋಡಿಸಿರುವುದು ಕನ್ನಡಿಗರ ದೌರ್ಭಾಗ್ಯವಾಗಿದೆ” ಎಂದು ವಿಷಾದ ವ್ಯಕ್ತಪಡಿಸಿದರು.

“ಕನ್ನಡ ಸಾಹಿತ್ಯದ ಅಭಿವೃದ್ಧಿಗೆ ಮತ್ತು ಯುವ ಸಾಹಿತಿಗಳನ್ನು ಉತ್ತೇಜಿಸಿ ಕನ್ನಡದ ಸಾಹಿತ್ಯವನ್ನು ಪಸರಿಸಬೇಕಾದ ಕನ್ನಡ ಸಾಹಿತ್ಯ ಪರಿಷತ್ ಇಂದು ಭ್ರಷ್ಟಾಚಾರದಲ್ಲಿ ಮುಳುಗಿದೆ. ಇಲ್ಲಿ ರಾಜಕೀಯ ಪ್ರೇರಿತ ಆಡಳಿತ ನಡೆಯುತ್ತಿದ್ದು, ಇದರಿಂದ ಕನ್ನಡಕ್ಕೆ ಹಾನಿಯುಂಟಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕರ್ನಾಟಕ ರಾಜ್ಯೋತ್ಸವ: ಸಚಿವ ಎಂ ಬಿ ಪಾಟೀಲರಿಂದ ಧ್ವಜಾರೋಹಣ

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಕಸ್ತೂರಿ ಸಂಘದ ಕೆಂಪಣ್ಣ ಮಾತನಾಡಿ, “ನ್ಯಾಯಾಂಗ ಬಡಾವಣೆಯಲ್ಲಿ ಕನ್ನಡೇತರರಿಗೆ ನಮ್ಮ ಭಾಷೆಯನ್ನು ಕಲಿಸುವ ಕಾರ್ಯಗಳಾಗಬೇಕು” ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎ ಜಿ ಸದಾಶಿವಯ್ಯ ಸೇರಿದಂತೆ ವಿಶ್ರಾಂತ ಜಿಲ್ಲಾ ನ್ಯಾಯಾಧೀಶರುಗಳು, ಬಡಾವಣೆಯ ನಿವಾಸಿಗಳು ಮತ್ತು ಕನ್ನಡ ಅಭಿಮಾನಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...