ಬಂಟ್ವಾಳ | ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ

Date:

ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಬುಡೋಳಿ-ಗಡಿಯಾರದಲ್ಲಿರುವ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವದ ದಿನವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು.

- Advertisement -

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಶಾಲಾ ಸಂಚಾಲಕ ಅಬ್ದುಲ್ ಖಾದರ್ ಕುಕ್ಕಾಜೆಯವರು ಸಸಿಗೆ ನೀರೆರೆಯುವುದರೊಂದಿಗೆ ಇದನ್ನು ಸಾಂಕೇತಿಕವಾಗಿ ಉದ್ಘಾಟಿಸಿ, ಕನ್ನಡ ಭಾಷೆಯ ಇತಿಹಾಸ ಹಾಗೂ ಭಾಷಾ ಸಿರಿತನವನ್ನು ವಿವರಿಸುತ್ತಾ ನಮ್ಮ ಕನ್ನಡ ನಾಡಿನ ಸಂಸ್ಕೃತಿಯ ಭಾವನಾತ್ಮಕ ಹಾಗೂ ಕನ್ನಡ ಭಾಷೆಯ ಸೊಬಗಿನ ಆಂತರ್ಯವನ್ನು ಹೊರ ಹೊಮ್ಮಿಸಲು ಆಂಗ್ಲ ಸೇರಿದಂತೆ ಇನ್ನಾವ ಭಾಷೆಗೂ ಅಸಾಧ್ಯ.‌ ಕನ್ನಡದ ವ್ಯಾಕರಣ, ಛಂದಸ್ಸು, ಪ್ರಾಸ, ಸಂಧಿಗಳು ಹೀಗೆ ಹಲವಾರು ವೈವಿಧ್ಯಮಯ ಸಾಹಿತ್ಯ ರಚನೆಗಳ ಭಾವಗಳನ್ನು ಇತರ ಭಾಷೆಯಲ್ಲಿ ಮೂಡಿಸಲಾಗದು. ಹೀಗೆ ಕನ್ನಡಕ್ಕೆ ಕನ್ನಡವೇ ಸರಿಸಾಟಿ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
318010

ತಮ್ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿನ ವಿದ್ಯಾರ್ಥಿಗಳ ಕನ್ನಡದಲ್ಲಿನ ಇಷ್ಟೊಂದು ಆಸಕ್ತಿ ಈ ರಾಜ್ಯೋತ್ಸವದಲ್ಲಿ ಹೊರಹೊಮ್ಮಿದೆ ಎಂದು ತಮ್ಮ ವಿದ್ಯಾರ್ಥಿಗಳನ್ನು ಪ್ರಶಂಸಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಮುಖ್ಯ ಶಿಕ್ಷಕಿ ಶ್ರೀಮತಿ ಆಮಿನಾ ಬಾನು ಹಾಗೂ ಅವರ ಸಹಾಯಕ ಶಿಕ್ಷಕಿ ಶ್ರೀಮತಿ, ಅಲಿಮತ್ ಸಅದಿಯಾ ಅವರು ವಿದ್ಯಾರ್ಥಿಗಳಿಗೆ ಕನ್ನಡ ರಾಜ್ಯೋತ್ಸವದ ಶುಭ ಕೋರಿದರು.

ಕನ್ನಡ ಶಿಕ್ಷಕಿ ಶ್ರೀಮತಿ ಮೀನಾಕ್ಷಿಯವರು ಸ್ವಾಗತಿಸಿದರು. ಶಿಕ್ಷಕಿ ಕುಮಾರಿ ಸಮ್ರೀನಾ ಧನ್ಯವಾದವಿತ್ತರು. ಶಿಕ್ಷಕಿ ಶ್ರೀಮತಿ ಮುಬೀನಾ ಕಾರ್ಯಕ್ರಮ ನಿರೂಪಿಸಿದರು.

318008
318009
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...