ಬೀದರ್‌ | ಭಾರತೀಯ ಸಂಸ್ಕೃತಿ ಮೇಲೆ ಹೆಚ್ಚು ಪ್ರಭಾವ ಬೀರಿದ ಭಾಷೆ ಕನ್ನಡ : ಶಿವಲಿಂಗ ಹೇಡೆ

Date:

Advertisements

ಭಾರತೀಯ ಸಂಸ್ಕೃತಿಯ ಮೇಲೆ ಅತ್ಯಂತ ಪ್ರಭಾವ ಬೀರಿರುವ ಏಕೈಕ ಭಾಷೆ ಕನ್ನಡ. ಕನ್ನಡಕ್ಕಿಂತ ಪ್ರಾಚೀನವಾಗಿರುವ ಸಂಸ್ಕೃತ, ಪ್ರಾಕೃತ, ತಮಿಳು ಭಾಷೆಗಳು ಕೂಡ ಕನ್ನಡದಷ್ಟು ಪ್ರಭಾವ ಬೀರಿಲ್ಲ ಎಂದು ಶಿಕ್ಷಕ, ಸಾಹಿತಿ ಶಿವಲಿಂಗ ಹೇಡೆ ಅಭಿಪ್ರಾಯಪಟ್ಟರು.

ಔರಾದ ಪಟ್ಟಣದ ಅಮರೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಕನ್ನಡ ಕಂಪು ಕಾರ್ಯಕ್ರಮದಲ್ಲಿ ʼಕನ್ನಡ ಭಾಷೆ, ಸಂಸ್ಕೃತಿ, ಪರಂಪರೆಗಳʼ ಕುರಿತು ವಿಶೇಷ ಉಪನ್ಯಾಸ ನೀಡಿದರು.

“ರಾಮಾಯಣ, ಮಹಾಭಾರತ ಕಾಲದಿಂದಲೂ ಕನ್ನಡ ಭಾಷೆಯಿದೆ. ಅಶೋಕನ ಅನೇಕ ಶಾಸನಗಳು ಕನ್ನಡ ನೆಲದಲ್ಲಿ ದೊರಕಿವೆ. ಗ್ರೀಕ್ ಪ್ರಹಸನಗಳಲ್ಲಿ ಕನ್ನಡ ಶಬ್ದಗಳಿವೆ. ರಾಷ್ಟ್ರಕೂಟ, ಚಾಲುಕ್ಯರ ಕಾಲದಲ್ಲಿ ಕನ್ನಡ ನಾಡು ಅರ್ಧಭಾರತ ಭಾಗವನ್ನು ಒಳಗೊಂಡಿತ್ತು. ಕನ್ನಡಿಗರ ಸರಳ ಜೀವಿ, ಕಲೋಪಾಸಕರು ಆಗಿದ್ದಾರೆ. ಆದರೆ ಇಂದು ಆಂಗ್ಲ ಭಾಷೆಯ ವ್ಯಾಮೋಹಕ್ಕೆ ಒಳಗಾಗುತ್ತಿದ್ದೇವೆ” ಎಂದು ವಿಷಾದ ವ್ಯಕ್ತಪಡಿಸಿದರು.

Advertisements

ಔರಾದ ಕಸಾಪ ನಿಕಟಪೂರ್ವ ಅಧ್ಯಕ್ಷ ಜಗನ್ನಾಥ ಮೂಲಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,”ಅನ್ಯ ಭಾಷೆ ನಾವು ಕಲಿಯುತ್ತೇವೆ, ಹೊರತು ಅನ್ಯ ಭಾಷಿಕರಿಗೆ ಕನ್ನಡ ಭಾಷೆ ಕಲಿಸುವ ಕೆಲಸ ಮಾಡುವುದಿಲ್ಲ. ಅನ್ಯ ಭಾಷಿಕರಿಗೆ ಕನ್ನಡ ಭಾಷೆ ಕಲಿಸುತ್ತೇವೆಂದು  ಇಂದೇ ಸಂಕಲ್ಪ ಮಾಡಬೇಕು” ಎಂದು ನುಡಿದರು.

ಕಸಾಪ ಅಧ್ಯಕ್ಷ ಡಾ.ಶಾಲಿವಾನ ಉದಗಿರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದರು. ತಾಲೂಕು ಕಸಾಪ ಸಂಚಾಲಕ ಅಶೋಕ ಶೆಂಬೆಳ್ಳಿ ಪ್ರಸ್ತಾವಿಕವಾಗಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅನಾಥ ಮಕ್ಕಳ ತಂಗುದಾಣ ವಿರುದ್ಧ ಪ್ರಕರಣ ದಾಖಲು

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಸತೀಶ ಸಿಂಧೆ, ಉಪನ್ಯಾಸಕರಾದ ಎಂ.ಡಿ.ಅಜಮ್, ಕಸಾಪ ಯುವ ಘಟಕದ ಅಧ್ಯಕ್ಷ ಅಂಬದಾಸ ನೇಳಗೆ ಸೇರಿದಂತೆ ಪ್ರಮುಖರಾದ ಅನಿಲ ಮೇತ್ರೆ, ಶಿವಕುಮಾರ ಪಾಟೀಲ ಹಾಗೂ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X