ಕನ್ನಡದ ಖ್ಯಾತ ಕತೆಗಾರ, ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯ ಇನ್ನಿಲ್ಲ

Date:

ಕನ್ನಡದ ಖ್ಯಾತ ಕತೆಗಾರ, ಕಾದಂಬರಿಕಾರ, ಲಲಿತ ಪ್ರಬಂಧಕಾರ ಶ್ರೀನಿವಾಸ ವೈದ್ಯ ಅವರು ಶುಕ್ರವಾರ ಮುಂಜಾನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ʼಹಳ್ಳ ಬಂತು ಹಳ್ಳʼ ಕಾದಂಬರಿಯ ಮೂಲಕ ಕನ್ನಡದ ಮನೆಮಾತಾಗಿದ್ದ ಅವರು ಕೇಂದ್ರ ಹಾಗೂ ರಾಜ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದರು. ಮುಂಬೈ ಸೇರಿದಂತೆ ಹಲವೆಡೆ ಬ್ಯಾಂಕಿಂಗ್‌ ವೃತ್ತಿಯ ಬಳಿಕ ನಿವೃತ್ತಿ ಪಡೆದು ಬೆಂಗಳೂರಿನಲ್ಲಿ ನೆಲೆಸಿದ್ದರು.

ಧಾರವಾಡ ಜಿಲ್ಲೆಯ ನವಲಗುಂದದಲ್ಲಿ 1936ರ ಏಪ್ರಿಲ್ 4ರಂದು ಜನಿಸಿದ ಇವರು, ಅರ್ಥಶಾಸ್ತ್ರ-ರಾಜ್ಯಶಾಸ್ತ್ರದಲ್ಲಿ ಎಂ.ಎ. ಪದವಿ ಪಡೆದು, ಬ್ಯಾಂಕಿಂಗ್ ಪರೀಕ್ಷೆ ಉತ್ತೀರ್ಣರಾಗಿದ್ದರು. ಮುಂಬೈಯಲ್ಲಿ ಕೆನರಾ ಬ್ಯಾಂಕಿನಲ್ಲಿ ಅಧಿಕಾರಿಯಾಗಿ ಸೇರಿ ಬೆಳಗಾವಿ, ಗೋವಾ, ಧಾರವಾಡ, ದೆಹಲಿ, ಚೆನ್ನೈ ಮತ್ತು ಬೆಂಗಳೂರುಗಳಲ್ಲಿ ಕಾರ್ಯನಿರ್ವಹಿಸಿ 1996ರಲ್ಲಿ ನಿವೃತ್ತರಾಗಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೊದಲು ನಗೆಬರಹ, ಹಾಸ್ಯಪ್ರಧಾನ ಸಾಹಿತ್ಯ ಹಾಗೂ ಲಲಿತ ಪ್ರಬಂಧ ಬರೆಯುತ್ತಿದ್ದ ವೈದ್ಯರು ಬಳಿಕ ಕಾದಂಬರಿಯತ್ತ ಜಿಗಿದರು. ‘ಹಳ್ಳ ಬಂತು ಹಳ್ಳ’ ಕಾದಂಬರಿಗೆ 2004ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು 2008ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಹಲವು ಷರತ್ತುಗಳೊಂದಿಗೆ ಕಾಂಗ್ರೆಸ್‌ಗೆ ದಸಂಸ ಬೆಂಬಲ

ಶ್ರೀನಿವಾಸ ವೈದ್ಯರು ಕನ್ನಡದ ಅಪರಂಜಿ ಹಾಸ್ಯ ಪತ್ರಿಕೆಯ ಬರಹಗಾರರು. ನಿವೃತ್ತಿಯ ನಂತರ ಬೆಂಗಳೂರಿನಲ್ಲಿ ನೆಲೆಸಿದ್ದ ಇವರು, ‘ಸಂವಾದ’ ಎನ್ನುವ ಸಾಂಸ್ಕೃತಿಕ ಸಂಘಟನೆ ಸ್ಥಾಪಿಸಿದ್ದರು. ಅಲ್ಲಿ ಕನ್ನಡ ನಾಡಿನ ಖ್ಯಾತ ಬರಹಗಾರರಿಂದ ಭಾಷಣ, ಸಂವಾದ, ವಾಚನ ಮತ್ತು ಇತರ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು.

‘ತಲೆಗೊಂದು ತರತರ’, ‘ಮನಸುಖರಾಯನ ಮನಸು’, ‘ರುಚಿಗೆ ಹುಳಿಯೊಗರು’ ಇವರ ಲಲಿತ ಪ್ರಬಂಧಗಳ ಸಂಕಲನಗಳು. ‘ಅಗ್ನಿಕಾರ್ಯ’ ʼಕಪ್ಪೆ ನುಂಗಿದ ಹುಡುಗʼ ಸಣ್ಣ ಕತೆಗಳ ಸಂಕಲನಗಳು. ʼಕರ್ನಲ್‍ನಿಗೆ ಯಾರೂ ಬರೆಯುವುದೇ ಇಲ್ಲʼ ಎಂಬ ಕೃತಿ ಮಾರ್ಕ್ವೇಝ್‍ನ ಕಾದಂಬರಿಯ ಅನುವಾದವಾಗಿದೆ.

ಪ್ರಬಂಧಕಾರ ಶ್ರೀನಿವಾಸ ವೈದ್ಯ ಅವರ ಮನಸುಖರಾಯನ ಮನಸು ಕೃತಿಗೆ, 2003ರಲ್ಲಿ ’ಪರಮಾನಂದ ಪ್ರಶಸ್ತಿ’,
ಹಾಗೂ 2010ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗಳು ಲಭಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...