ಉಡುಪಿ | ಮಾ. 2 ರಂದು ಕಾರ್ಕಳದಲ್ಲಿ ಕಾಂಗ್ರೆಸ್ ಕುಟುಂಬೋತ್ಸವ, ಉಡುಪಿಗೆ ಉಪ ಮುಖ್ಯಮಂತ್ರಿ ಡಿಕೆಶಿ

Date:

Advertisements

ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರು ಮಾರ್ಚ್ 2 ಭಾನುವಾರದಂದು ಕಾಪು ಮಾರಿಕಾಂಬೆಯ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಿದ ನಂತರ ಕಾರ್ಕಳದಲ್ಲಿ ನಡೆಯುವ ಸಂಭ್ರಮದಲ್ಲಿ ಜೊತೆಯಾಗಲಿದ್ದಾರೆ ಎಂದು ಕಾಂಗ್ರೆಸ್ ‌ಮುಖಂಡರಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಹೇಳಿದರು.

ಅವರು ಇಂದು ಉಡುಪಿ ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಉಡುಪಿ ಕಾಂಗ್ರೆಸ್ ಭವನದಿಂದ ಮಧ್ಯಾಹ್ನ ವಾಹನ ಜಾಥ ಹೊರಟು ಸಂಜೆ 4ಗಂಟೆಗೆ ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಡಿಕೆಶಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಈ ಬಾರಿಯ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಕಾರ್ಯಕರ್ತರನ್ನು ಹುರಿದುಂಬಿಸಲಿದ್ದು, ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 209 ಬೂತ್ ಗಳ, 34 ಗ್ರಾಮೀಣ ಕಾಂಗ್ರೆಸ್ ಗಳ ಹಾಗೂ 2 ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇದೇ ವೇದಿಕೆಯಲ್ಲಿ ನಡೆಯಲಿದ್ದು ಕಾಂಗ್ರೆಸ್ ಕುಟುಂಬ ಒಂದಾಗಿ ಸಂಭ್ರಮಿಸಲಿದೆ ಎಂದು ಹೇಳಿದರು.

Advertisements

ಈಗಾಗಲೇ ಉಚಿತ ಗ್ಯಾರಂಟಿ ಯೋಜನೆಯ ಮೂಲಕ ಜನಮನಗೆದ್ದ ಕಾಂಗ್ರೆಸ್ ಸರಕಾರದ ಜನಪರ ಯೋಜನೆಗಳನ್ನು ಜನ ಕೊಂಡಾಡುತ್ತಿದ್ದು ಅದರಲ್ಲೂ ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆ, ಉಚಿತ ಕರೆಂಟ್ ಮೊದಲಾದ ಜನಪದ ಯೋಜನೆಗಳು ಮಹಿಳೆಯರ ಮನ ಗೆದ್ದಿದೆ. ಆದ್ದರಿಂದ ಬೃಹತ್ ಸಂಖ್ಯೆಯ ಮಹಿಳೆಯರು ಸೇರಿದಂತೆ ಸಹಸ್ರ ಸಂಖ್ಯೆಯ ಜನ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಅದರ ಜೊತೆ ಜೊತೆಗೆ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಕಾಂಗ್ರೆಸ್ ನ ಹಿರಿಯ ನಾಯಕರಾದ ಡಾ. ವೀರಪ್ಪ ಮೊಯ್ಲಿ ಅವರು ಶಾಸಕತ್ವವನ್ನು ಪಡೆದು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರಿಗೆ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಅಲ್ಲದೆ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಪದಾಧಿಕಾರಿಗಳ ಪದಗ್ರಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯಲಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಉಡುಪಿ ನಗರ ಸಭಾ ಸದಸ್ಯ ರಮೇಶ್ ಕಾಂಚನ್, ಕಾಂಗ್ರೆಸ್ ಮುಖಂಡ ಕೃಷ್ಣ ಮೂರ್ತಿ ಆಚಾರ್ಯ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X