ಉಡುಪಿ | ಕಾರ್ಕಳದಲ್ಲಿ ಕಿಸಾನ್ ಸಭಾ ಸಭಾಂಗಣ ಉದ್ಘಾಟಿಸಿದ ಸಿ ಎಂ ಸಿದ್ದರಾಮಯ್ಯ

Date:

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಇಂದು ಕಿಸಾನ್ ಸಭಾ ಟ್ರಸ್ಟ್‌ನ ಮಹಾತ್ಮ ಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಹಾಗೂ ಕಿಸಾನ್ ಸಭಾ ಸಭಾಂಗಣದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ, ಶುಭ ಹಾರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಒಟ್ಟು 590 ಭರವಸೆಗಳನ್ನು ನೀಡಿದ್ದು, ಅವುಗಳಲ್ಲಿ ಈಗಾಗಲೇ 243 ಭರವಸೆಗಳನ್ನು ಈಡೇರಿಸಿದ್ದೇವೆ. ಕೇವಲ 2 ವರ್ಷ 9 ತಿಂಗಳ ಅವಧಿಯಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದೇವೆ.

- Advertisement -

ಜಾತಿ ಮತ್ತು ಧರ್ಮ ಭೇದವಿಲ್ಲದೆ ಅರ್ಹರಾದ ಪ್ರತಿಯೊಬ್ಬರಿಗೂ ಈ ಸವಲತ್ತುಗಳನ್ನು ನೀಡಲಾಗುತ್ತಿದೆ. ಪ್ರಸ್ತುತ 1 ಕೋಟಿ 24 ಲಕ್ಷ ಮಹಿಳೆಯರಿಗೆ ಪ್ರತಿ ತಿಂಗಳು ₹2000 ನೀಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನೂ ಸಮಾನವಾಗಿ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ,

ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದ ನಮ್ಮ ಸರ್ಕಾರ ಸಾಮಾಜಿಕ ನೆಲೆಗಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆಯನ್ನು ಮನೆ ಮನೆಗೆ ತಲುಪಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಮುನ್ನುಡಿ ಬರೆದಿದೆ ಎಂದು ಹೇಳಿದರು.

ಇದುವರೆಗೂ 26 ಕಂತಿನ ಹಣವನ್ನು 1.24 ಕೋಟಿ ಮಹಿಳೆಯರಿಗೆ ‌ತಲಾ 52 ಸಾವಿರ ರೂಪಾಯಿಯಂತೆ ಹಾಕಿದ್ದೇವೆ ಎಂದರು.

1009760888

ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಒಂದು ಸೀಟು ಗೆದ್ದಿಲ್ಲ, ಆದರೆ ಉಡುಪಿ ಜಿಲ್ಲೆಯಲ್ಲಿ ಅತಿಹೆಚ್ಚು ಗೃಹಲಕ್ಷ್ಮಿ ಫಲಾನುಭವಿಗಳು ಇದ್ದಾರೆ. ಇಡೀ ಕಾರ್ಕಳ ಕ್ಷೇತ್ರಾದ್ಯಂತ ಉದಯ್ ಕುಮಾರ್ ಅವರು ಮನೆ ಮನೆಗೆ ತಿರುಗಿ ಗೃಹಲಕ್ಷ್ಮಿ ಯೋಜನೆಯು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಮಾಡಿದ್ದಾರೆ ಎಂದು ಹೇಳಿದರು.

ದೇಶ ಕಂಡ ಉತ್ತಮ ರಾಜಕೀಯ ಪಟು ವೀರಪ್ಪ ಮೊಯ್ಲಿ ಅವರ ಜೀವನ ನಮಗೆಲ್ಲ ಮಾದರಿ. ಬಡ ಮಕ್ಕಳಿಗೆ ಅನುಕೂಲ ಆಗುವ ದೃಷ್ಟಿಯಿಂದ ಸಿಇಟಿ ಆರಂಭಿಸಿ ಇಡೀ ದೇಶಕ್ಕೆ ಮಾದರಿಯಾದಂತಹ ಆಡಳಿತವನ್ನು ನೀಡಿದರು. ಅವರು ಆರಂಭಿಸಿದ ಸಿಇಟಿಯೇ ಮುಂದೆ ಕೇಂದ್ರ ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆ ( RTE) ಆರಂಭಕ್ಕೆ ಮಾದರಿ ಆಯಿತು ಎಂದರು.‌

1009760886

ವೀರಪ್ಪ ಮೊಯ್ಲಿ ಅವರು ಆರಂಭಿಸಿದ ಮಹಾತ್ಮ ಗಾಂಧಿ ವಸತಿ ಶಾಲೆ ನಿಸ್ವಾರ್ಥತತೆಯಿಂದ ಕೆಲಸ ಮಾಡುತ್ತಿದೆ‌. ಬಡ ಮಕ್ಕಳಿಗೆ ಉಚಿತ ವಾಗಿ ಶಿಕ್ಷಣ ನೀಡುತ್ತಿದೆ. ವೀರಪ್ಪ ಮೊಯ್ಲಿ ಅವರ ಜೀವನವೇ ನಮಗೆ ಮಾರ್ಗದರ್ಶನ, ಅವರು ನಮಗೆ ಆದರ್ಶ. ಐದು ದಶಕಗಳಿಗೂ ಹೆಚ್ಚು ಕಾಲ ನಿರಂತರವಾಗಿ ಸಮಾಜ ಸೇವೆ ಮಾಡುವುದು ಸುಲಭದ ಕೆಲಸವಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ವೀರಪ್ಪ ಮೊಯ್ಲಿ ಅವರ ಕಾರ್ಯವನ್ನು ಶ್ಲಾಘಿಸಿದರು.

ಸಮಾಜ ಸೇವೆ ಎನ್ನುವುದು ಒಂದು ದಿನದ ಕೆಲಸವಲ್ಲ, ಅದು ಜೀವನದ ಧ್ಯೇಯವಾಗಬೇಕು. ನಮ್ಮ ಸಮಯ, ನಮ್ಮ ಶಕ್ತಿ ಮತ್ತು ನಮ್ಮ ಪ್ರತಿಭೆಯನ್ನು ಸಮಾಜದ ಹಿತಕ್ಕಾಗಿ ಬಳಸಿದರೆ, ನಮ್ಮ ರಾಜ್ಯ ಹಾಗೂ ರಾಷ್ಟ್ರ ಇನ್ನಷ್ಟು ಪ್ರಗತಿ ಸಾಧಿಸುತ್ತದೆ ಎನ್ನುವುದಕ್ಕೆ ಇಂದಿನ ಕಾರ್ಯಕ್ರಮ ಉದಾಹರಣೆ ಎಂದು ನಾನು ಭಾವಿಸುತ್ತೇನೆ. ಕಿಸಾನ್ ಸಭಾ ಟ್ರಸ್ಟ್ ಇನ್ನೂ ಅನೇಕ ವರ್ಷಗಳು ಇದೇ ರೀತಿಯ ಸೇವಾ ಕಾರ್ಯಗಳನ್ನು ಮುಂದುವರಿಸಿ, ಸಮಾಜಕ್ಕೆ ಬೆಳಕು ನೀಡಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.

1009760887

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಸಚಿವರಾದ ಎಚ್.ಸಿ.ಮಹದೇವಪ್ಪ, ಮಧು ಬಂಗಾರಪ್ಪ, ಶಾಸಕರಾದ ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜ, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ರಾಜೇಂದ್ರ ಕುಮಾರ್, ಮಾಜಿ ಸಚಿವರಾದ ರಮಾನಾಥ್ ರೈ, ವಿನಯ್ ಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲು, ಮಾಜಿ ಶಾಸಕ ಗೋಪಾಲ್ ಪೂಜಾರಿ, ಮುಖಂಡರಾದ ಮಂಜುನಾಥ್ ಪೂಜಾರಿ, ಎಂ.ಎ.ಗಫೂರ್, ಅಶೋಕ್ ಕುಮಾರ್ ಕೊಡವೂರು, ಕಿಸಾನ್ ಸಭಾದ ಅಧ್ಯಕ್ಷರಾದ ಹರ್ಷ ಮೊಯ್ಲಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...