ಉಡುಪಿ | ಕೊರಗ ಸಂಘಗಳ ಒಕ್ಕೂಟದಿಂದ ಕಾರ್ಕಳ ತಾಲೂಕು ತಹಶೀಲ್ದಾರ್ ಗೆ ಮನವಿ

Date:

Advertisements

ಕೊರಗ ಸಂಘಗಳ ಒಕ್ಕೂಟವು ಸಮುದಾಯದ ಪ್ರಮುಖ ಬೇಡಿಕೆಯಾದ ಭೂಮಿಯ ಕುರಿತು ಮನವಿಯನ್ನು ಕಾರ್ಕಳ ತಾಲ್ಲೂಕು ತಹಶೀಲ್ದಾರ್ ಗೆ ಸಲ್ಲಿಸಿವೆ. ಮುಖ್ಯವಾಗಿ ಬಂಡಿಮಠದಲ್ಲಿರುವ ಹದಿಮೂರು ಕುಟುಂಬಗಳ ನಿವೇಶನ ಹಕ್ಕು ಪತ್ರಕ್ಕಾಗಿ ಮನವಿ ನೀಡಿ ದರ್ಕಾಸು ಭೂಮಿ ಅರ್ಜಿಗಳ ವಿಷಯವಾಗಿ ತಹಶೀಲ್ದಾರವರೊಂದಿಗೆ ಮಾತುಕತೆ ನಡೆಸಲಾಯಿತು.

ಜನವರಿ ನಾಲ್ಕರಂದು ಇಲಾಖೆಯ ವತಿಯಿಂದ ನಡೆಸುವ ಅಕ್ರಮ ಸಕ್ರಮ ಸಭೆಯಲ್ಲಿ ಕೊರಗರ ಅರ್ಜಿಗಳನ್ನು ವಿಶೇಷವಾಗಿ ಪರಿಗಣಿಸಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ತಿಳಿಸಿರುತ್ತಾರೆ. ಮುಂದಿನ ಹತ್ತು ದಿನಗಳ ಬಳಿಕ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಿ, ಶೀಘ್ರವಾಗಿ ಪರಿಹರಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ವತಿಯಿಂದ ಪುತ್ರನ್ ಹೆಬ್ರಿ, ನರಸಿಂಹ ಪೆರ್ಡೂರು, ಶೇಖರ್ ಕೆಂಜೂರು, ಅಮರ್ ಪಳ್ಳಿ ಹಾಗೂ ಕಾರ್ಕಳ ಬಂಡಿಮಠದ ಸುನಂದಾ, ಲೀಲಾ, ಲಲಿತಾ, ಚಂದ್ರಾವತಿ, ಶಕುಂತಲಾ, ಗಣೇಶ್, ವಸಂತ, ಪ್ರಸಾದ್, ಶಶಿಕಲಾ ನಕ್ರೆ, ಅಕ್ಕು ತೆಳ್ಳಾರ್ ಮತ್ತು ಇತರರು ಉಪಸ್ಥಿತರಿದ್ದರು.

Advertisements
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X