ಉಡುಪಿ | ಕಾರ್ಕಳದ ಮಿಯ್ಯಾರು ಗ್ರಾಮ ಪಂಚಾಯತ್ ನಲ್ಲಿ ಬಾರಿ ಗೋಲ್ ಮಾಲ್

Date:

Advertisements

ಸಾರ್ವಜನಿಕರ ಹಾಗೂ ಅಧಿಕಾರಿಗಳ ನಡುವೆ ನಡೆದ ವಾಗ್ವಾದ ತರಕ್ಕಕ್ಕೇರಿದ್ದು ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸಲಾಗದ ಅಧಿಕಾರಿಗಳು ಕೊನೆಗೆ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಸಭೆಯನ್ನು ಮುಂದೂಡಿದ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರಿ ಗ್ರಾಮ ಪಂಚಾಯತ್ ‌ನಲ್ಲಿ‌ ನಡೆದಿದೆ.

ಮಿಯ್ಯಾರು ಗ್ರಾಮ ಪಂಚಾಯತ್ ಬಾರಿ ಅವವ್ಯಹಾರ ಹಾಗೂ ಭ್ರಷ್ಟಾಚಾರ ನಡೆದಿರುವ ಬಗ್ಗೆ ಪ್ರಶ್ನೆ ಹಾಗೂ ಗಂಭೀರ ಆರೋಪ ಹೊರಿಸಿದ ರಾಜೇಶ್ ಅವರು ಲೆಕ್ಕಪತ್ರದಲ್ಲಿ ಮೂರು ಪ್ಯಾನ್ ದುರಸ್ತಿಗೆ 13 ಸಾವಿರಕ್ಕೂ ಅಧಿಕ ಹಣವನ್ನು ವ್ಯಯ ಮಾಡಿದ್ದೀರಿ ನೀವು ಏನು ವೈಂಡಿಂಗ್ ಗೆ ಬೆಳ್ಳಿಯ ವಯರ್ ಅನ್ನು ಬಳಸಿದ್ದೀರಾ? ಎಂದು ಅವರು ಪ್ರಶ್ನಿಸಿದರು. ಈ ವೇಳೆ ಪಿಡಿಓ ಗೆ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಕಕ್ಕಾಬಿಕ್ಕಿಯಾಗಿ ಅವರು ಸರಿಯಾದ ಮಾಹಿತಿ ‌ನೀಡದೇ ಉಡಾಫೆ ಉತ್ತರ ನೀಡಿದ್ದೇ ವಿವಾದಕ್ಕೆ ‌ಕಾರಣವಾಯಿತು. ಗ್ರಾಪಂ ಸದಸ್ಯ ಡೆನಿಯಲ್ ರೇಂಜರ್ ಮಾತನಾಡಿ ಪಿಡಿಓ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತಿ ಗ್ರಾಮ ಸಭೆಯಲ್ಲಿ ನಡೆದ ಪಗ್ರತಿ ಪರಿಶೀಲನೆ ವರದಿಯನ್ನು ಸಂಬಂಧ ಪಟ್ಟ ಅಧಿಕಾರಿಗಳ ಅಥವಾ ಜನಪತ್ರಿನಿಧಿಗಳಿಗ ಗಮನಕ್ಕೆ ತರಲಾಗಿದೆಯೇ? ತರಲಾಗಿದ್ದಲ್ಲಿ ಅದರ ದಾಖಲೆಯನ್ನು ಸಭೆಗೆ ಒದಗಿಸುವಂತೆ ಪಟ್ಟು ಹಿಡಿದ್ದಾರೆ. ಈ ವೇಳೆ‌ ಪಿಡಿಓ ಉತ್ತರಿಸಿ ಮಾಹಿತಿ ನೀಡಿರುವುದಾಗಿ ಸುಳ್ಳು ಹೇಳಿಕೆ ನೀಡಿದ್ದೆ ಮತ್ತಷ್ಟು ಅಕ್ರೋಶಕ್ಕೆ ಕಾರಣವಾಯಿತು.

Advertisements

ಸಾರ್ವಜನಿಕರಿಗೆ ಮಾಹಿತಿ ನೀಡಿದೆ ಕಾಟಚಾರಕ್ಕಾಗಿ ಗ್ರಾಮ ಸಭೆ ‌ನಡೆಸಲಾಗುತ್ತಿದೆ. ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಕೋರಂ ಇಲ್ಲದೇ ಸಭೆ ನಡೆಸುವಂತೆ ಇಲ್ಲ ಅದ್ದರಿಂದ ಈ ಗ್ರಾಮ ಸಭೆ ರದ್ದು ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದ್ದಾರೆ.

ಒಂದೇ ದಿನದಲ್ಲಿ ಏಳು ಗ್ರಾಮ ಸಭೆಗಳನ್ನು ನಡೆಸಲಾಗಿದೆ. ಅದು ಅಲ್ಲದೇ ಅಧ್ಯಕ್ಷರ ಮೇಲೆ ಹಣಕಾಸಿನ ಅರೋಪ ಜೊತೆಗೆ ಹಕ್ಕುಚ್ಯುತ್ತಿ ಇದ್ದು ಅವರು ಯಾವುದೇ ಸಭೆಯಲ್ಲಿ ಅಧ್ಯಕ್ಷರಾಗಿ ಭಾಗವಹಿಸುವಂತಿಲ್ಲ. ಇಷ್ಟೆಲ್ಲಾ ಗೊತ್ತಿದ್ದರೂ ಪಿಡಿಓ‌ ಮಾತ್ರ ಸಾರ್ವಧಿಕಾರಿಯಂತೆ ವರ್ತಿಸಿರುವುದು ಸರಿಯಲ್ಲ ಎಂದು ಡೇನಿಯಲ್ ರೇಂಜರ್ ಆರೋಪಿದ್ದಾರೆ.

ಗಲಾಟೆ ಗದ್ದಲ ನಡೆಯುತ್ತಿದ್ದರೂ ಅಧ್ಯಕ್ಷೆ ಸನ್ಮತಿ ನಾಯಕ್ ಮಾತ್ರ ‌ಮೌನಕ್ಕೆ ಜಾರಿದ್ದು ಬದಲಾಗಿ ಸದಸ್ಯ
ಗಿರೀಶ್ ಅಮಿನ್ ಅವರೇ ಎಲ್ಲದಕ್ಕೂ ಉತ್ತರ ನೀಡುತ್ತಿರುವುದು ಸಾರ್ವಜನಿಕರು ಆಕ್ಷೇಪ ಎತ್ತಿದ್ದಾಗ ಅಧ್ಯಕ್ಷರು ತನ್ನ ಪರವಾಗಿ ಸದಸ್ಯರು ಉತ್ತರ ನೀಡುತ್ತಿದ್ದಾರೆ ಎಂದು ಸಬೂಬು ನೀಡಿದರು ಮಾತ್ರವಲ್ಲದೆ ಕೋರಂ ಇಲ್ಲ ಎಂಬ ಗೊಂದಲ ಸಾರ್ವಜನಿಕರಲ್ಲಿ ಮೂಡುತ್ತಿದ್ದಂತೆ ಸಬೆಯನ್ನು ಮುಂದೂಡಿದರು.

ಪಿಡಿಓ ‌ನಾಗರಾಜ್ ವಿರುದ್ದ ಭ್ರಷ್ಟಾಚಾರದ ಆರೋಪ!
ಪಿಡಿಓ‌ ಅವರ ಕಾರ್ಯವ್ಯಾಪ್ತಿಗೆ ಬಾರದ ಪ್ರದೇಶಕ್ಕೆ ತೆರಳಿ ಅನಧಿಕೃತ ಮರಳುಗಾರಿಗೆ ಬೆಂಬಲಿಸಿ ಅವರಿಂದ ಮಾಮೂಲಿ ಪಡೆದುಕೊಂಡು ಯಾವುದೇ ಕ್ರಮ ಕೈಗೊಳ್ಳದೇ‌ ಇರುವುದು ಹಲವು ಅನುಮಾನಕ್ಕೆ ‌ಎಡೆಮಾಡಿಕೊಟ್ಟಿದೆ. ಈ ಬಗ್ಗೆ ನೊಡೆಲ್ ಅಧಿಕಾರಿ ಮೇಲಾಧಿಕಾರಿ ಗಮನಕ್ಕೆ ತಂದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ವೇದಿಕೆಯಲ್ಲಿ ರಾಜೇಶ್ ನೆಲ್ಸನ್ ಡಿಸೋಜ, ಸೀತಾ, ಲೇನಿ ವೈಲೆಟ್ ರೇಂಜರ್, ಇಂದಿರಾ, ಶೋಬಾ, ರೇವತಿ ನಾಯಕ್, ಶೋಭಾ ಶೆಟ್ಟಿ, ಸುಮನಾ, ನವೀನ್ ಪೂಜಾರಿ, ಪ್ರಶಾಂತ್ ಪೂಜಾರಿ ಹಾಜರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X