ಉಡುಪಿ | ಪ್ರತಿಭೆಗಳ ಅನಾವರಣಕ್ಕೆ ಶಿಬಿರಗಳು ಸಹಕಾರಿ : ಶಾಸಕ ಸುನೀಲ್ ಕುಮಾರ್

Date:

Advertisements

ಶಿಬಿರಗಳಲ್ಲಿ ಪಾಲ್ಗೊಳ್ಳುವಿಕೆ ಪ್ರತಿಭೆಗಳನ್ನು ಅನಾವರಣಗೊಳಿಸಲು ಸಹಕಾರಿಯಾಗಿದ್ದು, ಮಕ್ಕಳು ರಜಾ ದಿನಗಳಲ್ಲಿ ಮೊಬೈಲ್ ಹಾಗೂ ಟಿ.ವಿಯ ಬಳಕೆಯಲ್ಲಿ ಕಾಲಹರಣ ಮಾಡದೇ, ಹತ್ತು ದಿನದ ಶಿಬಿರದ ಸಂಪೂರ್ಣ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನೀಲ್ ಕುಮಾರ್ ಹೇಳಿದರು.

ಅವರು ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯಕ್ಷ ರಂಗಾಯಣ ಕಾರ್ಕಳ ಇವರ ಸಹಯೋಗದಲ್ಲಿ ಕಾರ್ಕಳದ ಯಕ್ಷ ರಂಗಾಯಣದ ಸಭಾಂಗಣದಲ್ಲಿ ನಡೆದ ಬಾಲಲೀಲೆ ಮಕ್ಕಳ ರಂಗ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಯಕ್ಷಗಾನಕ್ಕೆ ಹೊಸ ಪೀಳಿಗೆಯನ್ನು ತಯಾರು ಮಾಡುವುದರ ಜೊತೆಯಲ್ಲಿ ಯಕ್ಷಗಾನದ ವಿವಿಧ ರೀತಿಯ ಆಯಾಮಗಳಿಗೆ ಹೊಸ ಸ್ಪರ್ಶವನ್ನು ನೀಡುವ ಕಾರ್ಯವು ರಂಗಾಯಣದ ಮೂಲಕ ಇನ್ನಷ್ಟು ನಡೆಯಬೇಕು ಎಂದರು. ಖ್ಯಾತ ಅರ್ಕಿಟೆಕ್ಟ್ ಪ್ರಮಲ್ ಕುಮಾರ್ ಮಾತನಾಡಿ, ಯುವಪೀಳಿಗೆಯು ದೊರೆತ ಅವಕಾಶಗಳ ಸದುಪಯೋಗ ಪಡೆದುಕೊಂಡು ಬದುಕಿನಲ್ಲಿ ಏಳಿಗೆಯನ್ನು ಹೊಂದುವುದರೊಂದಿಗೆ ದೇಶವನ್ನು ಕಟ್ಟುವಂತಹ ಭವ್ಯವಾದ ಕನಸುಗಳು, ಯೋಜನೆಗಳು ಯುವ ಮನಸ್ಸುಗಳಲ್ಲಿ ಮೂಡಿಬರಬೇಕು ಎಂದರು.

Advertisements

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರ್ಕಳ ಯಕ್ಷ ರಂಗಾಯಣದ ನಿರ್ದೇಶಕ ಬಿ.ಆರ್. ವೆಂಕಟರಮಣ ಐತಾಳ, ಶೈಕ್ಷಣಿಕೆ ಚಟುವಟಿಕೆಯ ಹೊರತಾಗಿ ಚಿತ್ರಕಲೆ, ಸಾಹಿತ್ಯ, ಸಂಗೀತ ಹಾಗೂ ಇನ್ನೀತರ ಸಾಂಸ್ಕೃತಿಕ ಚಟುವಟಿಕೆಯ ಭಾಗವಹಿಸುವಿಕೆಯಲ್ಲಿ ಮಕ್ಕಳಿಗೆ ಪೋಷಕರು ಪ್ರೋತ್ಸಾಹ ನೀಡಬೇಕು ಎಂದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ,ವಸಂತ್ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X