ಉಡುಪಿ | ಕಾರ್ಕಳ – ಪಡುಬಿದ್ರೆ ಟೋಲ್ ಗೇಟ್‌ಗೆ ವಿರೋಧ: ಆ. 24ರಂದು ಬೃಹತ್ ಪ್ರತಿಭಟನೆ

Date:

ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿರುವ ಕಂಚಿನಡ್ಕ ಎಂಬಲ್ಲಿ ಟೋಲ್ ನಿರ್ಮಿಸಲು ಸರ್ಕಾರ ಮುಂದಾಗಿದ್ದು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಇದರ ವಿರುದ್ಧ ಜನಾಂದೋಲನ ರೂಪಿಸಲು ಆಗಸ್ಟ್ 24ರ ಶನಿವಾರ ಪಡುಬಿದ್ರೆ ಸಮೀಪ ಕಂಚಿನಡ್ಕದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಟೋಲ್ ಗೇಟ್ ಹೋರಾಟ ಸಮಿತಿಯ ಸುಹಾಸ್ ಹೆಗ್ಡೆ ನಂದಳಿಕೆ ಹೇಳಿದರು.

- Advertisement -

ಅವರು ಇಂದು ಉಡುಪಿಯ ಪ್ರೆಸ್‌ ಕ್ಲಬ್‌ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, “ಪಡುಬಿದ್ರೆ-ಕಾರ್ಕಳ ಹಳ್ಳಿ ಪ್ರದೇಶವಾಗಿದ್ದು ಹೆದ್ದಾರಿ ಆದ ಬಳಿಕ ಸ್ವಲ್ಪ ಮಟ್ಟಿನ ಬೆಳವಣಿಗೆ ಕಾಣುತ್ತಿದೆ. ಸುಮಾರು 40ಕ್ಕೂ ಹೆಚ್ಚಿನ ಹಳ್ಳಿಗಳನ್ನು ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದ್ದು, ಸುಂಕ ವಸೂಲಾತಿ ಕೇಂದ್ರ ನಿರ್ಮಿಸಲು ಉದ್ದೇಶಿಸಿರುವ ಸ್ಥಳದಿಂದ 4 ಕಿಲೋ ಮೀಟರ್ ಅಂತರದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ಹೆಜಮಾಡಿ ಟೋಲ್ ಗೇಟ್ ಕಾರ್ಯನಿರ್ವಹಿಸುತ್ತಿದೆ. ಈ ರಾಜ್ಯ ಹೆದ್ದಾರಿಯಲ್ಲಿ ದಿನನಿತ್ಯ ಹಳ್ಳಿಯ ಜನರು ತಮ್ಮ ದಿನ ನಿತ್ಯದ ಕೆಲಸಗಳಿಗೆ ತೆರಳಲು ಇದೇ ರಸ್ತೆಯನ್ನು ಅವಲಂಬಿಸಿದ್ದು, ಸುಂಕದ ಹೊರೆ ಜನಸಾಮಾನ್ಯರ ಮೇಲೆ ಅತೀ ಗಂಭೀರ ಪರಿಣಾಮ ಬೀರುತ್ತದೆ. ಅದಕ್ಕಾಗಿ ಕಾರ್ಕಳ-ಪಡುಬಿದ್ರೆ ಹೆದ್ದಾರಿ ಅವಲಂಬಿಸಿರುವ ಸುಮಾರು 40ಕ್ಕೂ ಹೆಚ್ಚಿನ ಹಳ್ಳಿಯ ಎಲ್ಲಾ ಜನ ಸಾಮಾನ್ಯರು ಪಕ್ಷಾತೀತವಾಗಿ ಹೋರಾಡಲು ತಯಾರಿ ನಡೆಸಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಶಿಕ್ಷಣದ ಸಮಾನ ಅವಕಾಶದ ಆಶಯಕ್ಕೆ ಸವಾಲಾಗುತ್ತಿರುವ ನಿಯಮಗಳು, ಖಾಸಗೀಕರಣ ಮತ್ತು ಸರ್ಕಾರಿ ಶಾಲೆಗಳ ದುಸ್ಥಿತಿ ಒಂದೇ ಶಾಲೆಯ ಆವರಣ, ಒಂದೇ ತರಗತಿಯ ಕೊಠಡಿ, ಒಂದೇ ಪಠ್ಯಪುಸ್ತಕ, ಒಂದೇ ಶಿಕ್ಷಕರು. ಆದರೆ ಆ ಮಕ್ಕಳ ಹಿನ್ನೆಲೆ...

ಬಿಲ್ಕಿಸ್‌ ಬಾನೋ ‘ಮುಸ್ಲಿಂ’ ಎಂಬ ಕಾರಣಕ್ಕೇ ಪದೇ-ಪದೇ ದೂರವಾಗುತ್ತಿದೆಯೇ...

ಅಪರಾಧಿಗಳ ಹಕ್ಕುಗಳ ಬಗ್ಗೆ ಮಾತನಾಡುವ ನ್ಯಾಯವ್ಯವಸ್ಥೆ, ಸಂತ್ರಸ್ತೆಯ ಬದುಕುವ ಹಕ್ಕು, ಸುರಕ್ಷತೆ ಮತ್ತು ಘನತೆಯನ್ನೂ ಅಷ್ಟೇ ಗಂಭೀರವಾಗಿ ಪರಿಗಣಿಸುತ್ತಿದೆಯೇ? ಬಿಲ್ಕಿಸ್‌ ಬಾನೋ ಪ್ರಕರಣದಲ್ಲಿ ಈ ಪ್ರಶ್ನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ನ್ಯಾಯದ ಮುಂದೆ...

ನವ-ಉದಾರವಾದದ ಬಿಕ್ಕಟ್ಟು ಮತ್ತು ಫ್ಯಾಸಿಸ್ಟ್-ವಿರೋಧಿ ಅರ್ಥಶಾಸ್ತ್ರ: ಡಾ. ಇಸಬೆಲ್ಲಾ...

ಪ್ರಸ್ತುತ ಜಗತ್ತನ್ನು ಕಾಡುತ್ತಿರುವ ಬೆಲೆ ಏರಿಕೆ, ಆರ್ಥಿಕ ಅಸಮಾನತೆ ಮತ್ತು ಅದರಿಂದಾಗಿ ಜಾಗತಿಕವಾಗಿ ತಲೆ ಎತ್ತುತ್ತಿರುವ ಫ್ಯಾಸಿಸಂ ಪ್ರವೃತ್ತಿಗಳಿಗೆ ಪರ್ಯಾಯ ಆರ್ಥಿಕ ಮಾರ್ಗವನ್ನು ಡಾ. ಇಸಬೆಲ್ಲಾ ವೆಬರ್ ಇಲ್ಲಿ ಚರ್ಚಿಸಿದ್ದಾರೆ. ಜರ್ಮನಿಯ ಪ್ರಖ್ಯಾತ ಅರ್ಥಶಾಸ್ತ್ರಜ್ಞೆ...

ಮುಂದುವರೆದು ಮಾತನಾಡಿದ ಅವರು, “ಜಿಲ್ಲೆಯ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು, ಎಲ್ಲ ಧರ್ಮದ ಧಾರ್ಮಿಕ ಮುಖಂಡರು, ಎಲ್ಲ ಜಾತಿ ಸಂಘಟನೆಗಳು, ಸಾಮಾಜಿಕ ಸಂಘಟನೆಗಳು, ಸಮಾಜ ಸೇವಾ ಸಂಸ್ಥೆಗಳು, ಉದ್ಯಮಿಗಳು, ಕೈಗಾರಿಕೆಗಳು, ವರ್ತಕರು, ಎಲ್ಲ ಸಂಘ-ಸಂಸ್ಥೆಗಳು, ಬಸ್ಸು ಚಾಲಕ-ಮಾಲೀಕರು, ರಿಕ್ಷಾ ಚಾಲಕ-ಮಾಲೀಕರು, ಟ್ಯಾಕ್ಸಿ ಅಸೋಸಿಯೇಶನ್, ಕ್ರಷರ್ ಉದ್ಯಮಿಗಳು, ಕಲ್ಲು ಗಣಿಗಾರಿಕೆಯ ಉದ್ಯಮಿಗಳು, ಕೃಷಿಕರು ಎಲ್ಲರೂ ಬೆಂಬಲ ಸೂಚಿಸಿದ್ದಾರೆ. ಅದರಂತೆ ಎಲ್ಲ ಸಿದ್ಧತೆ ಮಾಡಿದ್ದು, ಆಗಸ್ಟ್ 24ರಂದು ಪಡುಬಿದ್ರೆ ಸಮೀಪ ಕಂಚಿನಡ್ಕ ಎಂಬಲ್ಲಿ ಬೆಳಗ್ಗೆ 9.30ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸುಮಾರು 10 ಸಾವಿರಕ್ಕಿಂತಲೂ ಹೆಚ್ಚಿನ ಜನರು ಬರುವ ನಿರೀಕ್ಷೆಯಿದ್ದು, ಬಹಳ ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಸಲು ಸನ್ನದ್ಧರಾಗಿದ್ದೇವೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಹಾವೇರಿ | ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶ ಆಯ್ಕೆ ಪಟ್ಟಿ ಬಿಡುಗಡೆಗೆ ಎಸ್ಎಫ್ಐ ಆಗ್ರಹ

ನಮ್ಮ ಶಾಂತಿಯುತ ಹೋರಾಟದಿಂದ ಪಡುಬಿದ್ರಿ-ಕಾರ್ಕಳ ಹೆದ್ದಾರಿಯಲ್ಲಿ ಸುಂಕ ವಸೂಲಾತಿ ಕೇಂದ್ರದ ಪ್ರಸ್ತಾವನೆಯಿಂದ ಸರಕಾರ ಕೂಡಲೇ ಹಿಂದೆ ಸರಿಯಬೇಕು. ಈ ರಸ್ತೆಯಲ್ಲಿ ಜನ ಸಾಮಾನ್ಯರಿಗೆ ಹೊರೆಯಾಗುವ ಟೋಲ್ ಗೇಟ್ ಪ್ರಸ್ತಾವನೆ ಶಾಶ್ವತವಾಗಿ ರದ್ದಾಗಬೇಕು. ಇಲ್ಲದಿದ್ದರೆ ಮುಂದೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೋರಾಟಗಾರರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಲಕ್ಷಣ್ ಎಲ್ ಶೆಟ್ಟಿ, ಶಶಿಧರ್ ಶೆಟ್ಟಿ, ದಿನೇಶ್ ಕೊಟ್ಯನ, ಜಯ ಎಸ್ ಶೆಟ್ಟಿ, ಸರ್ವಜ್ಞ ತಂತ್ರಿ ಬೆಳ್ಮಣ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸೇತುವೆ ಮೇಲಿನ ಗುಂಡಿ ಸರಿಪಡಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಕಲಾದಗಿ - ಅಂಕಲಗಿ ಸೇತುವೆ ಮೇಲೆ ಬೃಹತ್‌ ಪ್ರಮಾಣದ...

ಉಡುಪಿ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಿ; SDPI ಪ್ರತಿಭಟನಾ ಧರಣಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ...

ಜಮಖಂಡಿ |ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ: ಜಮಖಂಡಿ ತಾ.ಪಂ. ಅಧಿಕಾರಿ ಮನೆ, ಕಚೇರಿಗೆ ಲೋಕಾಯುಕ್ತ ದಾಳಿ

ಸರ್ಕಾರಿ ಅಧಿಕಾರಿಯೊಬ್ಬರು ಆದಾಯದ ಮೂಲಗಳಿಗೆ ಹೋಲಿಸಿದರೆ ಅಕ್ರಮವಾಗಿ ಹೆಚ್ಚಿನ ಪ್ರಮಾಣದ ಆಸ್ತಿ...