ಕಾರ್ಕಳ ಯುವತಿಯ ಅತ್ಯಾಚಾರ | 3ನೇ ಆರೋಪಿ ಬಿಜೆಪಿ ಕಾರ್ಯಕರ್ತ : ಕಾಂಗ್ರೆಸ್‌ನಿಂದ ಫೋಟೋ ಬಿಡುಗಡೆ

Date:

Advertisements

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಇತ್ತೀಚೆಗೆ ನಡೆದಿದ್ದ ಯುವತಿಯ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಅಭಯ್ ಬಿಜೆಪಿ ಕಾರ್ಯಕರ್ತ ಎಂದು ಹೇಳಿರುವ ಕಾಂಗ್ರೆಸ್, ಈ ಸಂಬಂಧ ಆತನ ಫೋಟೋಗಳನ್ನು ಇಂದು(ಬುಧವಾರ) ಬಿಡುಗಡೆ ಮಾಡಿದೆ.

ಉಡುಪಿಯ ಪ್ರೆಸ್‌ ಕ್ಲಬ್‌ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಕಾರ್ಕಳ ಮತ್ತು ಉಡುಪಿ ಯುವ ಕಾಂಗ್ರೆಸ್ ನಾಯಕರು ಫೋಟೋ ಬಿಡುಗಡೆಗೊಳಿಸಿದ್ದಲ್ಲದೇ, ಬಿಜೆಪಿಯ ದ್ವಂದ್ವ ನಿಲುವಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಪ್ರಕರಣದ ಮೊದಲ ಆರೋಪಿ ಅಲ್ತಾಫ್ ಎಂಬಾತನ ಬಂಧನ ನಡೆದಾಗ ಬಿಜೆಪಿ ಪಟಾಲಂ ಅಬ್ಬರಿಸಿ ಬೊಬ್ಬಿರಿಯಿತು. ಸಂತ್ರಸ್ತ ಹುಡುಗಿ ಹಿಂದೂವಾಗಿ ಕಂಡಳು. ಅತ್ಯಾಚಾರ ಪ್ರಕರಣವನ್ನು “ಜಿಹಾದಿ” ಕೃತ್ಯವಾಗಿ ಚಿತ್ರಿಸಲಾಯಿತು. ಸರಣಿ ಪ್ರತಿಭಟನೆ, ಪತ್ರಿಕಾ ಹೇಳಿಕೆಗಳು ಹೊರಟವು. ಎನ್‌ಐಎ ತನಿಖೆ ನಡೆಯಬೇಕೆಂಬ ಆಗ್ರಹಗಳು ಕೇಳಿ ಬಂದವು. ಆದರೆ ಬಂಧನಕ್ಕೊಳಗಾಗಿದ್ದ ಮೂರನೇ ಆರೋಪಿ ಅಭಯ್, ಬಿಜೆಪಿ ಕಾರ್ಯಕರ್ತ ಎಂದು ಗೊತ್ತಾದ ಬಳಿಕ ಬಿಜೆಪಿ ಮೌನಕ್ಕೆ ಶರಣಾಗಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.

Advertisements

ಹಿಂದೂ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಡ್ರಗ್ಸ್‌ ಪೂರೈಸಿದ್ದ ಮೂರನೇ ಆರೋಪಿ ಅಭಯ್, ಮಾಜಿ ಸಚಿವ ಸುನಿಲ್ ಆಪ್ತನಾಗಿದ್ದಾನೆ. ಇದಕ್ಕೆ ಸಾಕ್ಷಿ ಎಂಬಂತೆ ಫೇಸ್‌ಬುಕ್ ಪ್ರೊಫೈಲ್‌ನಲ್ಲೂ ಕೂಡ ಸುನಿಲ್ ಕುಮಾರ್ ಫೋಟೋ ಹಾಕಿಕೊಂಡಿದ್ದಾನೆ. ಈತ ಕಾರ್ಕಳ ಬಿಜೆಪಿಯಲ್ಲಿ ಸಕ್ರಿಯ ಸದಸ್ಯನಾಗಿದ್ದಾನೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಉಡುಪಿ ನಗರಸಭೆ ಸದಸ್ಯ ರಮೇಶ್ ಕಾಂಚನ್ ಫೋಟೋವನ್ನು ಮಾಧ್ಯಮಗಳಿಗೆ ಪ್ರದರ್ಶಿಸಿದರು.

ಮೂರನೇ ಆರೋಪಿ ಅಭಯ್ ಬಂಧವಾಗಿರುವುದು ಗೊತ್ತಾಗುತ್ತಿದ್ದಂತೆ ಬಿಜೆಪಿ ನಾಯಕರು ಇಡೀ ಹೋರಾಟವನ್ನು ಕೈಬಿಟ್ಟಿದ್ದಾರೆ. ಕಾರ್ಕಳದಲ್ಲಿ ಅತ್ಯಾಚಾರ ಪ್ರಕರಣವನ್ನು ನಾವೆಲ್ಲರೂ ಖಂಡಿಸುತ್ತೇವೆ. ಆದರೆ ಅತ್ಯಾಚಾರದಂತಹ ಪ್ರಕರಣದಲ್ಲಿ ಯಾವುದೇ ಧರ್ಮ, ಪಕ್ಷದವರಿದ್ದರೂ ಅದನ್ನು ಖಂಡಿಸುವ ಬದಲು ಬಿಜೆಪಿಯವರು ಧರ್ಮಾಧಾರಿತವಾಗಿ ನೋಡುತ್ತಿದ್ದಾರೆ. ಇದು ಖಂಡನೀಯ. ಜನರು ಬಿಜೆಪಿಯ ದ್ವಂದ್ವ ನಿಲುವುಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡರು ಹೇಳಿದರು.

ಇದನ್ನು ಓದಿದ್ದೀರಾ? ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ | ಡ್ರಗ್ಸ್‌ ಪೂರೈಸಿದ್ದ 3ನೇ ಆರೋಪಿ ಅಭಯ್ ಬಂಧನ

ಈ ವೇಳೆ ಉಡುಪಿ ಎನ್‌ಎಸ್‌ಯುಐ ಮುಖಂಡ ಸೌರಭ್ ಬಲ್ಲಾಳ್, ಕಾರ್ಕಳ ಯೂತ್ ಕಾಂಗ್ರೆಸ್ ಅಧ್ಯಕ್ಷ ಯೋಗೇಶ್, ದಿನೇಶ್ ಕೋಟ್ಯಾನ್ ಸೇರಿದಂತೆ ಹಲವರಿದ್ದರು.

WhatsApp Image 2024 08 28 at 1.43.41 PM
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X