ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಮತ್ತೆ ಸೂಚನೆ

Date:

  • ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಸೂಚನೆ
  • ಸೆ. 12ರ ಆದೇಶದಂತೆ 15 ದಿನ ನೀರು ಹರಿಸಲು ಆದೇಶ

ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಮತ್ತೊಮ್ಮೆ ಆದೇಶಿಸಿದೆ.

ನವದೆಹಲಿಯ ಸಿಡಬ್ಲ್ಯೂಎಂಎ ಕಚೇರಿಯಲ್ಲಿ ಸೋಮವಾರ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

ಸೆಪ್ಟೆಂಬರ್ 12ರ ಆದೇಶದಂತೆ 15 ದಿನ ನಿತ್ಯ ಐದು ಸಾವಿರ ಕ್ಯೂಸೆಕ್‌ ನೀರು ಹರಿಸಲು ಕರ್ನಾಟಕ್ಕೆ ಸೂಚಿಸಲಾಗಿದೆ. ಮುಂದುವರಿದು, ಕಾವೇರಿ ನೀರು ನಿಯಂತ್ರಣ ಮಂಡಳಿ ಸಮಿತಿಯ ಆದೇಶ ಪಾಲನೆ ಮಾಡಲೇಬೇಕು ಎಂದು ಸಭೆಯಲ್ಲಿ ಖಡಕ್‌ ಆಗಿ ಸೂಚಿಸಿದೆ.

ಈ ಮೂಲಕ ಕಾವೇರಿ ನೀರು ನಿಯಂತ್ರಣ ಸಮಿತಿ ಈ ಹಿಂದೆ ನೀಡಿದ್ದ ಇದೇ ಆದೇಶವನ್ನು ಈಗ ಮತ್ತೊಮ್ಮೆ ಪುನರ್‌ ಉಚ್ಚರಿಸಿದೆ. ಇದರಿಂದ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎನ್ನುವುದನ್ನು ಕಾದುನೋಡಬೇಕು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಜಾತಿ ನಿಂದನೆ; ನಟ ಉಪೇಂದ್ರ ಬಂಧನಕ್ಕೆ ಆಗ್ರಹ

ನಟ ಉಪೇಂದ್ರ ಅವರು, ʼಊರು ಇದ್ದಲ್ಲಿ ಹೊಲಗೇರಿʼ ಎನ್ನುವ ಮಾತನ್ನು ಹೇಳುವುದರ...

ಕಾವೇರಿ ವಿವಾದ | ಬೆಂಗಳೂರು ಬಂದ್‌ಗೆ ಎಫ್‌ಐಟಿಯು ಬೆಂಬಲ: ಅಬ್ದುಲ್ ರಹಿಮಾನ್

ಕಾವೇರಿ ಜಲ ವಿವಾದದ ಹಿನ್ನಲೆಯಲ್ಲಿ ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್‌ಗೆ ಫೆಡರೇಶನ್...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲು ಮಸೂದೆಗೆ ತಿದ್ದುಪಡಿ: ಮಲ್ಲಿಕಾರ್ಜುನ ಖರ್ಗೆ

2024ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿ ತರುವುದಾಗಿ...

ಬೀದರ್‌ | ಪಡಿತರದಲ್ಲಿ ಅಕ್ರಮ; 22 ನ್ಯಾಯಬೆಲೆ ಅಂಗಡಿಗಳ ಅಮಾನತು

ಪಡಿತರ ಮಾರಾಟದಲ್ಲಿ ನಿಗದಿತ ಬೆಲೆಗಿಂತ ಹೆಚ್ಚು ದರ ವಿಧಿಸುವುದು, ಇಲ್ಲವೇ ಬಯೋಮೆಟ್ರಿಕ್‌...