ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಚಿಕ್ಕಬಳ್ಳಾಪುರದಲ್ಲಿ ವ್ಯಕ್ತಿಯೊಬ್ಬರು ತಲೆ ಬೊಳಿಸಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ನೀರು ಹರಿಸದಂತೆ ಒತ್ತಾಯಿಸಿದ್ದಾರೆ.
ಕರ್ನಾಟಕ ಯುವಶಕ್ತಿ ವೇದಿಕೆಯ ಶ್ರೀನಿವಾಸ್ ಅವರು ತಲೆ ಬೋಳಿಸಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ, ನಗರದ ಅಯ್ಯಪ್ಪ ಸ್ವಾಮಿ ದೇವಸ್ತಾನದಿಂದ ಚನ್ನಬಸಪ್ಪ ವೃತ್ತದವರೆಗೆ ಮುಕ್ಕಾಲು ಕಿ.ಮೀ. ಉರುಳು ಸೇವೆ ಮಾಡಿದ್ದಾರೆ.
ಶ್ರೀನಿವಾಸ್ ಅವರ ಜೊತೆಗೆ ಕೆಆರ್‌ಎಸ್ ಪಕ್ಷದ ಮುಖಂಡ ಪ್ರಶಾಂತ್ ಕೂಡ ತಲೆ ಬೋಳಿಸಿಕೊಂಡು ಪ್ರತಿಭಟನೆ ನಡೆಸಿದ್ದಾರೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.